ಸಾರಾಂಶ
ಗುಂಡ್ಲುಪೇಟೆ-ತೆರಕಣಾಂಬಿ ರಸ್ತೆಯ ಆಯ್ದ ಭಾಗದಲ್ಲಿ ರಸ್ತೆ ಮರು ಡಾಂಬರೀಕರಣಕ್ಕೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಗುದ್ದಲಿ ಪೂಜೆ ನೆರವೇರಿದರು.
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಗುಂಡ್ಲುಪೇಟೆ-ತೆರಕಣಾಂಬಿ ರಾಜ್ಯ ಹೆದ್ದಾರಿಯ ೧೦ಕಿ.ಮೀ ಆಯ್ದ ಭಾಗಗಳಲ್ಲಿ ₹೬ ಕೋಟಿ ವೆಚ್ಚದಲ್ಲಿ ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಗುದ್ದಲಿ ಪೂಜೆ ನೆರವೇರಿಸಿದರು.ತಾಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಗುದ್ದಲಿ ಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ತಾಲೂಕಿನ ರಾಜ್ಯ ಹೆದ್ದಾರಿ ೮೬ರ ರಾಮನಾಥಪುರ-ತೆರಕಣಾಂಬಿ ರಸ್ತೆಯ ಕೆಲ ಆಯ್ದ ಭಾಗಗಳಲ್ಲಿ ಸುಮಾರು ೧೦ ಕಿ.ಮೀ. ರಸ್ತೆ ಮರು ಡಾಂಬರೀಕರಣಕ್ಕೆ ಸಿಆರ್‌ಐಎಫ್ ಯೋಜನೆಯಡಿ ಅನುದಾನ ಬಿಡುಗಡೆಯಾಗಿದೆ ಎಂದರು.
ಮೈಸೂರಿನ ಗುತ್ತಿಗೆದಾರ ರಘುಪತಿಗೆ ಟೆಂಡರ್ ಆಗಿದ್ದು ಆದಷ್ಟು ಬೇಗ ಕಾಮಗಾರಿ ಮುಗಿಸಿ ಸಂಚಾರಕ್ಕೆ ಮುಕ್ತ ಮಾಡಿಕೊಡಲಿದ್ದಾರೆ ಎಂದು ಭರವಸೆ ನೀಡಿದರು. ಗುದ್ದಲಿ ಪೂಜೆ ಸಮಾರಂಭದಲ್ಲಿ ಚಿಕ್ಕತುಪ್ಪೂರು ಗ್ರಾಪಂ ಅಧ್ಯಕ್ಷ ಎಂ.ಶರಣ್, ಎಪಿಎಂಸಿ ಅಧ್ಯಕ್ಷ ಬಸವರಾಜು, ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎಸ್. ಮಹೇಶ್, ತಾಪಂ ಮಾಜಿ ಸದಸ್ಯ ಬೆಟ್ಟಹಳ್ಳಿ ಕೆಂಪರಾಜು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಬಿ.ರಾಜಶೇಖರ್, ಗ್ರಾಪಂ ಮಾಜಿ ಅಧ್ಯಕ್ಷ ಕೆ.ಮಹೇಶ್, ಕಿಲಗೆರೆ ಪ್ರಸಾದ್, ಮುಖಂಡರಾದ ಜಯಂತಿ, ಚನ್ನಂಜಯ್ಯನಹುಂಡಿ ಡಾ.ಮಲ್ಲು, ರಂಗಸ್ವಾಮಿ, ಮಹದೇವಶೆಟ್ಟಿ ಸೇರಿದಂತೆ ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.