ಸಾರಾಂಶ
ಶಿಕ್ಷಕರು ಮಕ್ಕಳಿಗೆ ಪ್ರೀತಿ ವಾತ್ಸಲ್ಯದಿಂದ ವಿದ್ಯೆ ಕಲಿಸಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ೧೩೬ನೇ ಜಯಂತಿ ಹಾಗೂ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಡಾ.ಸರ್ವಪಲ್ಲಿ ರಾಧಾಕೃಷ್ಣನ್ ೧೩೬ನೇ ಜಯಂತಿ, ಶಿಕ್ಷಕರ ದಿನಾಚರಣೆ
ಕನ್ನಡಪ್ರಭ ವಾರ್ತೆ ಹೊಸಕೋಟೆಶಿಕ್ಷಕರು ಮಕ್ಕಳಿಗೆ ಪ್ರೀತಿ ವಾತ್ಸಲ್ಯದಿಂದ ವಿದ್ಯೆ ಕಲಿಸಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ನಗರದಲ್ಲಿ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ೧೩೬ನೇ ಜಯಂತಿ ಹಾಗೂ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನುಷ್ಯ ಜೀವನದಲ್ಲಿ ಸಾಧನೆ ಮಾಡಬೇಕಾದರೆ ಅದರ ಹಿಂದೆ ಅಕ್ಷರ ಕಲಿಸಿದ ಗುರುಗಳ ಶ್ರಮ, ಆಶೀರ್ವಾದ ಇರುತ್ತೆ. ಆದರೆ ಗುರುಗಳಿಗೆ ಮೋಕ್ಷ ಧಕ್ಕಬೇಕಾದರೆ ಉತ್ತಮ ಶಿಷ್ಯರನ್ನು ಸಮಾಜಕ್ಕೆ ಕೊಡುಗೆ ನೀಡಬೇಕು. ಶಿಕ್ಷಕರು ಮಕ್ಕಳಿಗೆ ಪ್ರಾಥಮಿಕ ಹಂತದಿಂದಲೆ ಶಿಕ್ಷಣದ ಮೌಲ್ಯಗಳನ್ನು ತಿಳಿಸಬೇಕು ಎಂದರು.ಸಂಪನ್ಮೂಲ ವ್ಯಕ್ತಿ ಅಬ್ದುಲ್ ರಜಾಕ್ ಅನಂತಾಡಿ ಮಾತನಾಡಿ, ಶಿಕ್ಷಕ ವೃತ್ತಿ ಇತರರಿಗೆ ಪ್ರೇರಣೆ ನೀಡುವಂತಹವರು. ಗೌತಮ ಬುದ್ದ, ಬಸವಣ್ಣ, ಸಮಾಜದಲ್ಲಿ ಅರಿವು ಮೂಡಿಸಿದರು. ಅವರ ಸಾಲಿನಲ್ಲಿ ರಾಧಾಕೃಷ್ಣನ್, ಸಾವಿತ್ರಿಬಾಯಿ ಪುಲೆ ಅವರು ನಿಲ್ಲುತ್ತಾರೆ. ಅವರ ಹಾದಿಯಲ್ಲಿ ಇಂದಿನ ಶಿಕ್ಷಕರು ಕೂಡ ನಿಲ್ಲಬೇಕು. ಮಕ್ಕಳಲ್ಲಿ ಪ್ರಾಮಾಣಿಕತೆ ಕಲಿಸುವುದೇ ಮುಖ್ಯ ಕರ್ತವ್ಯ ಎಂದರು.
ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರು ಸೇರಿದಂತೆ ಉತ್ತಮ ಜಿಲ್ಲಾ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕ ಬಿ.ಎನ್.ಗೋಪಾಲಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಬಾಬುರೆಡ್ಡಿ, ಬಿಎಂಆರ್ ಡಿಎ ಅಧ್ಯಕ್ಷ ಕೇಶವಮೂರ್ತಿ, ಸದಸ್ಯರಾದ ಡಾ ಎಚ್.ಎಂ.ಸುಬ್ವರಾಜ್, ಕೊರಳೂರು ಸುರೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಬ್, ನಗರಸಭೆ ಸದಸ್ಯರಾದ ಗೌತಮ್, ಜಮುನಾ ಹರೀಶ್ ಇತರರಿದ್ದರು.