ಮಾದಕ ವಸ್ತುಗಳು ಯುವಜನತೆಯ ಭವಿಷ್ಯ, ಆರೋಗ್ಯ ಹಾಗೂ ಕುಟುಂಬ ವ್ಯವಸ್ಥೆಯನ್ನೇ ಹಾಳು ಮಾಡುತ್ತದೆ. ಆದ್ದರಿಂದ ಮಾದಕ ವಸ್ತುಗಳಿಗೆ ‘ನೋ’ ಹೇಳುವ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಅಬ್ದುಲ್ ರಹೀಮ್ ಹುಸೇನ್ ಶೇಖ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕುಂದಾಪುರ: ಮಾದಕ ವಸ್ತುಗಳು ಯುವಜನತೆಯ ಭವಿಷ್ಯ, ಆರೋಗ್ಯ ಹಾಗೂ ಕುಟುಂಬ ವ್ಯವಸ್ಥೆಯನ್ನೇ ಹಾಳು ಮಾಡುತ್ತದೆ. ಆದ್ದರಿಂದ ಮಾದಕ ವಸ್ತುಗಳಿಗೆ ‘ನೋ’ ಹೇಳುವ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಅಬ್ದುಲ್ ರಹೀಮ್ ಹುಸೇನ್ ಶೇಖ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಅವರು ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಪೊಲೀಸ್, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಕುಂದಾಪುರ, ಕುಂದಾಪುರ ವಕೀಲರ ಸಂಘ, ಅಭಿಯೋಗ ಇಲಾಖೆ ಕುಂದಾಪುರ, ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಮಾದಕ ವ್ಯಸನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಸಂಪನ್ಮೂಲ ವ್ಯಕ್ತಿ, ಕುಂದಾಪುರದ ಸಹಾಯಕ ಸರ್ಕಾರಿ ಅಭಿಯೋಜಕ ಉದಯಕುಮಾರ್ ಬಿ.ಎ. ಅವರು, ಮಾದಕ ದ್ರವ್ಯ ನಿಷೇಧ ಕಾಯ್ದೆಯಡಿ ಬರುವ ಕಾನೂನು ಪರಿಣಾಮಗಳು, ಜೈಲು ಶಿಕ್ಷೆ ಹಾಗೂ ಅಪರಾಧ ಪ್ರಕರಣಗಳು ವಿದ್ಯಾರ್ಥಿಗಳ ಭವಿಷ್ಯದ ಉದ್ಯೋಗ ಮತ್ತು ಶಿಕ್ಷಣದ ಮೇಲೆ ಬೀರುವ ಭೀಕರ ಪರಿಣಾಮಗಳ ಕುರಿತು ಅವರು ವಿವರಣೆ ನೀಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಅಭಿಯಾನದ ಭಾಗವಾಗಿ ಯುವಜನತೆಗೆ ‘ಬೇಡ ಬ್ರೋ’ ಹಾಗೂ ‘RISE’ (Refuse, Inform, Support, Empower) ತತ್ವಗಳನ್ನು ಸಾರುವ ವಿಶೇಷ ಜಾಗೃತಿ ಬ್ಯಾನರ್‌ಗಳನ್ನು ಅನಾವರಣಗೊಳಿಸಲಾಯಿತು.ಕುಂದಾಪುರ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣದ ಪ್ರತಿಜ್ಞಾ ವಿಧಿ ಬೋಧಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಐ.ಎಂ.ಜೆ. ಸಂಸ್ಥೆಯ ಅಕಾಡೆಮಿಕ್ ನಿರ್ದೇಶಕ ಡಾ. ಎಸ್.ಎನ್. ಭಟ್ ವಹಿಸಿದ್ದರು. ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಜೆ. ಶ್ರೀನಾಥ್ ರಾವ್, ಕುಂದಾಪುರ ನ್ಯಾಯಾಲಯದ ಸರ್ಕಾರಿ ಅಭಿಯೋಜಕಿ ಇಂದಿರಾ ನಾಯ್ಕ್, ಸಹಾಯಕ ಸರ್ಕಾರಿ ಅಭಿಯೋಜಕಿ ಉಮಾ ದಾಮೋದರ ನಾಯ್ಕ್, ಕಾಲೇಜಿನ ಪ್ರಾಂಶುಪಾಲ ಡಾ.ರಾಮಕೃಷ್ಣ ಹೆಗಡೆ, ಹಿರಿಯ ಸಿವಿಲ್ ನ್ಯಾಯಾಧೀಶ ಕುಮಾರ್ ಜಿ., ಜೆ.ಎಂ.ಎಫ್.ಸಿ. ನ್ಯಾಯಾಧೀಶ ಸಯ್ಯದ್ ಕಾಶ್ಮೀರ ಸಿಮ್ರನ್ ಉಪಸ್ಥಿತರಿದ್ದರು.ಕುಂದಾಪುರ ಪೊಲೀಸ್ ಉಪನಿರೀಕ್ಷಕ ನಿರಂಜನ್ ಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಂಕರನಾರಾಯಣ ಪೊಲೀಸ್ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸ್ವಾಗತಿಸಿ, ವಂದಿಸಿದರು. ವಿದ್ಯಾರ್ಥಿನಿ ಕರುಣ ಗೌಡ ಹಾಗೂ ಪ್ರಾಧ್ಯಾಪಕಿ ಸೂಕ್ಷ್ಮ ಅಡಿಗ ಕಾರ್ಯಕ್ರಮ ನಿರೂಪಿಸಿದರು.