ಸಾರಾಂಶ
ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಾಧನೆ ಮಾಡಲು ವಿದ್ಯೆ ಅತಿಮುಖ್ಯ. ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದರೆ ಭವಿಷ್ಯದಲ್ಲಿ ಅನುಕೂಲವಾಗಲಿದೆ. ವಿದ್ಯಾರ್ಥಿಗಳು ಓದಿನಲ್ಲಿ ಆಸಕ್ತಿ ವಹಿಸಬೇಕು. ಪ್ರಾಂಶುಪಾಲ ಡಾ.ಪ್ರಶಾಂತ್ ಎ.ನಾಯ್ಡು ಮಾತನಾಡಿ, ಕನ್ನಡ ಭಾಷೆ ಉಳಿಸಲು, ಬೆಳೆಸಲು, ಬಳಸಲು ಭಾಷಾ ಕ್ರಾಂತಿಯನ್ನು ಮಾಡಿದರೆ ಕನ್ನಡ ಭಾಷೆ ತಾನಾಗಿಯೇ ಬೆಳೆದು ಉಳಿಯುತ್ತದೆ.
ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಚಿನಕುರಳಿಯ ಎಸ್‌ಟಿಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ ಕಾರ್‍ಯಕ್ರಮವನ್ನು ಚಿತ್ರನಟ ವಿರಾಟ್ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.ಬಳಿಕ ಮಾತನಾಡಿದ ನಟ ವಿರಾಟ್, ಕನ್ನಡ ನಮ್ಮ ಅಸ್ಮಿತೆಯಾಗಿದ್ದು, ಕನ್ನಡ ಭಾಷೆ, ನೆಲ-ಜಲದ ವಿಚಾರ ಬಂದಾಗ ಪ್ರತಿಯೊಬ್ಬ ಕನ್ನಡಿಗರು ಒಗ್ಗಟ್ಟು ಪ್ರದರ್ಶಿಸಬೇಕು ಎಂದರು.
ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಾಧನೆ ಮಾಡಲು ವಿದ್ಯೆ ಅತಿಮುಖ್ಯ. ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದರೆ ಭವಿಷ್ಯದಲ್ಲಿ ಅನುಕೂಲವಾಗಲಿದೆ. ವಿದ್ಯಾರ್ಥಿಗಳು ಓದಿನಲ್ಲಿ ಆಸಕ್ತಿ ವಹಿಸಬೇಕು ಎಂದರು.ಪ್ರಾಂಶುಪಾಲ ಡಾ.ಪ್ರಶಾಂತ್ ಎ.ನಾಯ್ಡು ಮಾತನಾಡಿ, ಕನ್ನಡ ಭಾಷೆ ಉಳಿಸಲು, ಬೆಳೆಸಲು, ಬಳಸಲು ಭಾಷಾ ಕ್ರಾಂತಿಯನ್ನು ಮಾಡಿದರೆ ಕನ್ನಡ ಭಾಷೆ ತಾನಾಗಿಯೇ ಬೆಳೆದು ಉಳಿಯುತ್ತದೆ ಎಂದರು.
ಕಾಲೇಜಿನಲ್ಲಿ ಮಕ್ಕಳ ಸರ್ವತೋಮುಖವಾದ ಪ್ರಗತಿಗಾಗಿ ವಿಶೇಷ ಕಾರ್‍ಯಕ್ರಮ ನಡೆಸಲು ಸಂಸ್ಥೆ ಅಧ್ಯಕ್ಷ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹಾಗೂ ಸಿಇಒ ಸಿ.ಪಿ.ಶಿವರಾಜು ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದರು.ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀರಂಗಪಟ್ಟಣ, ಕೆ.ಆರ್.ಪೇಟೆ, ಪಾಂಡವಪುರ, ಮಂಡ್ಯ, ನಾಗಮಂಗಲ ತಾಲೂಕುಗಳಿಂದ 50ಕ್ಕೂ ಹೆಚ್ಚು ಪದವಿ ಪೂರ್ವ ಕಾಲೇಜುಗಳಿಂದ 8 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಸ್ಪರ್ಧೆಯಲ್ಲಿ ಕನ್ನಡ ನಾಡು-ನುಡಿ, ಸಾಹಿತ್ಯ, ಸಂಸ್ಕೃತಿ, ಇತಿಹಾಸಕ್ಕೆ ಸಂಬಂಧಿಸಂತೆ ಸ್ಪರ್ಧೆ ನಡೆಸಲಾಯಿತು. ಭಾಗವಹಿಸಿದ ಪ್ರತಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಬಹುಮಾನ ವಿತರಣೆ ಮಾಡಲಾಯಿತು. ವಿಜೇತರಾದ 150ಕ್ಕೂ ಅಧಿಕ ಮಕ್ಕಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ ಮಾಡಿದರು.ಕಾರ್‍ಯಕ್ರಮದಲ್ಲಿ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರೇಖಾ ಬಿ.ವಿ.ಕುಮಾರ್, ಐಕ್ಯೂಎಸಿ ಸಂಯೋಜಕ ರಘುನಂದನ್, ನ್ಯಾಕ್ ಸಂಯೋಜಕ ಚರಣ್‌ರಾಜ್ ಎಚ್. ಸೇರಿದಂತೆ ಹಲವರು ಭಾಗವಹಿಸಿದ್ದರು.