ಶನಿವಾರಸಂತೆ: ಧರ್ಮಸ್ಥಳ ಸಂಸ್ಥೆಯಿಂದ ಶ್ರದ್ಧಾ ಸ್ವಚ್ಛತಾ ಕಾರ್ಯಕ್ರಮ

| Published : Aug 15 2025, 01:01 AM IST

ಸಾರಾಂಶ

ಶ್ರದ್ಧಾ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿರುವುದು ಉತ್ತಮ ಕಾರ್ಯವಾಗಿದೆ ಎಂದು ಗಣ್ಯರು ತಿಳಿಸಿದರು.

ಕನ್ನಡಪ್ರಭ ವಾರ್ತೆ ಶನಿವಾರಸಂತೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೋಮವಾರಪೇಟೆ ತಾಲೂಕು ಶನಿವಾರಸಂತೆ ವಲಯದ ಸುಳುಗಳಲೆ ‘ಬಿ’ ಒಕ್ಕೂಟ ವತಿಯಿಂದ ತ್ಯಾಗರಾಜ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಟದ ಮೈದಾನದಲ್ಲಿ ಶ್ರದ್ಧಾ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ಹನುಮಂತ ಅಂಗಡಿ ಸ್ವಚ್ಛತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಗ್ರಾಮೀಣ ಭಾಗದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ ಎಂದು ಹೇಳಿದರು. ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕ್ಷೇತ್ರ ಸ್ವಚ್ಛತಾ ಕಾರ್ಯಕ್ರಮವನ್ನು ವರ್ಷದಲ್ಲಿ ಎರಡು ಬಾರಿ ಹಮ್ಮಿಕೊಳ್ಳಲಾಗುತ್ತಿದ್ದು ಈ ನಿಟ್ಟಿನಲ್ಲಿ ದೇವಸ್ಥಾನ, ಬಸದಿ, ಮಸೀದಿ, ಚರ್ಚ್ ಮುಂತಾದ ಧಾರ್ಮಿಕ ಕೇಂದ್ರ ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯವನ್ನು ಮಾಡಲಾಗುತ್ತಿದ್ದು ಈ ಮೂಲಕ ಇಂದು ಸದರಿ ಸರ್ಕಾರಿ ಶಾಲೆಯ ಆಟದ ಮೈದಾನದಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಂಡಿರುವುದು ಉತ್ತಮ ಕಾರ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ಎಸ್.ಪಿ.ಭಾಗ್ಯ, ವಲಯ ಮೇಲ್ವಿಚಾರಕಿ ಜಯಶ್ರೀ, ಒಕ್ಕೂಟದ ಕಾರ್ಯದರ್ಶಿ ಎಸ್.ಪಿ.ದಿವ್ಯ, ಸೇವಾ ಪ್ರತಿನಿಧಿ ಎಸ್.ಆರ್.ಶೋಭಾವತಿ, ಶಾಲಾ ಮುಖ್ಯ ಶಿಕ್ಷಕ ಪುಟ್ಟಸ್ವಾಮಿ, ಒಕ್ಕೂಟದ ಸದಸ್ಯರಾದ ಸುಮತಿ, ಸಂದ್ಯಾ, ಭವ್ಯ, ಮೋಹನ್, ಶರತ್, ದಿವ್ಯ, ಫಾತೀಮಾ, ಕವಿತಾ, ಭಾಗ್ಯ, ವೇದಾವತಿ, ಶೈಲಾ, ಚಂದ್ರಮತಿ, ರಾಜು, ಇಸ್ಲಾಮ್, ಅಕ್ಷಯ್ ಮುಂತಾದವರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.