ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‌ಬೈಲ್‌ ಕಾರ್ಯಕ್ಷೇತ್ರದ ವತಿಯಿಂದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್ ಬೈಲ್ ಕಾರ್ಯ ಕ್ಷೇತ್ರದ ವತಿಯಿಂದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ ನಡೆಸಲಾಯಿತು.

ಭಾನುವಾರ ಕಾನ್ ಬೈಲ್ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್ ಬೈಲು ಒಕ್ಕೂಟದ ಕಾರ್ಯದರ್ಶಿ ಪುಷ್ಪಲತಾ, ಮಾಜಿ ಅಧ್ಯಕ್ಷ ಖತ್ತೀಜ, ಸೇವಾ ಪ್ರತಿನಿಧಿ ಯಶೋಧ ಬಸವರಾಜ್ ಶ್ರಮದಾನ ಕಾರ‍್ಯಕ್ರಮಕ್ಕೆ ಚಾಲನೆ ನೀಡಿದರು.ಕಾನಬೈಲ್ ಒಕ್ಕೂಟ ವ್ಯಾಪ್ತಿಯ ಸ್ವ ಸಹಾಯ ಸಂಘಗಳಾದ ಜನನಿ, ಭೂಮಿಕ, ಶ್ರೀನಿಧಿ, ಮೂಕಾಂಬಿಕಾ, ಕನ್ನಿಕ, ಭಗವತಿ ಧೃತಿ ಹಾಗೂ ನೇತಾಜಿ ಸಂಘದ ಪದಾಧಿಕಾರಿಗಳು ಶ್ರಮದಾನದಲ್ಲಿ ಪಾಲ್ಗೊಂಡು ಶಾಲಾ ಆವರಣದಲ್ಲಿ ಬೆಳೆದು ನಿಂತಿದ್ದ ಕಾಡು ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಿದರು.