ಸೂಲಿಬೆಲೆ: ರಾಜ್ಯದಲ್ಲಿ ಕಾರ್ಮಿಕ ವರ್ಗದ ಮಕ್ಕಳಿಗಾಗಿ ಮೊಟ್ಟಮೊದಲ ಶ್ರಮಿಕ ವಸತಿ ಶಾಲೆಯನ್ನು ಸಚಿವ ಸಂತೋಷ್ ಲಾಡ್ ಅವರ ಸಹಕಾರದಿಂದ ತಾಲೂಕಿನ ಬೇಗೂರು ಗ್ರಾಮದಲ್ಲಿ ೩೫ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ಹೋಬಳಿಯ ಬೇಗೂರು ಗ್ರಾಮದಲ್ಲಿ ಕಾರ್ಮಿಕ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಡಳಿತ ಮತ್ತು ಜಿಪಂ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಮಿಕ ಶ್ರಮಿಕ ವಸತಿ ಶಾಲೆಯ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕಾರ್ಮಿಕ ವರ್ಗದ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಅವರ ನೇತೃತ್ವದಲ್ಲಿ ಪ್ರಸಕ್ತ ಸಾಲಿನಲ್ಲಿ ೩೧ ಅನುಮೋದನೆ ದೊರೆತಿದ್ದು ೨ನೇ ವಷಧಲ್ಲಿ ೧೧ ಶಾಲೆಗಳು ೩ನೇ ವರ್ಷದಲ್ಲಿ ೬೨ ಶಾಲೆಗಳ ನಿರ್ಮಾಣಕ್ಕೆ ಸಚಿವರು ನೀಲನಕ್ಷೆ ತಯಾರಿಸಿದ್ದಾರೆ. ಹೊಸಕೋಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ನಿರ್ಮಿಸಿರುವ ಶ್ರಮಿಕ ಶಾಲೆ ರಾಜ್ಯಕ್ಕೆ ಮಾದರಿ ಶಾಲೆಯಾಗಲಿದೆ ಎಂದರು.ಈ ವೇಳೆ ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ಬಿ.ಎನ್.ಗೋಪಾಲಗೌಡ, ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೇಶವಮೂರ್ತಿ, ಸದಸ್ಯ ಕೊರಳೂರು ಸುರೇಶ್, ಗ್ಯಾರಂಟಿ ತಾಲೂಕು ಅಧ್ಯಕ್ಷ ಬಚ್ಚೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಕೋಡಿಹಳ್ಳಿ ಸುರೇಶ್, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಬಿ.ವೆಂಕಟೇಶ್, ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ರಾಜಶೇಖರಗೌಡ, ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ವಿ.ಸತೀಶಗೌಡ, ನಿರ್ದೇಶಕ ದೊಡ್ಡಕೋಲಿಗ ತಮ್ಮೇಗೌಡ, ಯುವ ಮುಖಂಡ ನಾರಾಯಣಗೌಡ, ಟಿಎಪಿಸಿಎಂಎಸ್ ನಿರ್ದೇಶಕ ನಾಗರಾಜಪ್ಪ, ಕಾರ್ಮಿಕ ಇಲಾಖೆ ಜಂಟಿ ಕಾರ್ಯದರ್ಶಿ ಉಮೇಶ್, ರವಿಕುಮಾರ್, ಯತೀಂದ್ರ, ಜಿಲ್ಲಾ ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಲಕ್ಷ್ಮೀ, ಬೇಗೂರು ಪಾರ್ವತಮ್ಮ, ತಾಪಂ ಮಾಜಿ ಸದಸ್ಯರಾದ ಡಿ.ಟಿ.ವೆಂಕಟೇಶ್, ಕಾರ್ಮಿಕ ಕಲ್ಯಾಣ ಇಲಾಖೆ ಸಮಿತಿ ಸದಸ್ಯರಾದ ರಮೇಶ್, ಜಯಲಕ್ಷ್ಮೀ, ನಿವೃತ್ತ ಇಒ ಡಾ.ನಾರಾಯಣಸ್ವಾಮಿ, ಶ್ರೇಯಸ್ ಕುಮಾರ್ ಇತರರಿದ್ದರು.
(ಫೋಟೋ ಕ್ಯಾಪ್ಞನ್)ಸೂಲಿಬೆಲೆ ಸಮೀಪದ ಬೇಗೂರು ಗ್ರಾಮದಲ್ಲಿ ಕಾರ್ಮಿಕ ಇಲಾಖೆಯ ಶ್ರಮಿಕ ವಸತಿ ಶಾಲೆಗೆ ಶಾಸಕ ಶರತ್ ಬಚ್ಚೇಗೌಡ ಶಂಕುಸ್ಥಾಪನೆ ನೆರವೇರಿಸಿದರು, ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಗೋಪಾಲಗೌಢ, ಸಹಕಾರ ಬ್ಯಾಂಕ್ ಆಧ್ಯಕ್ಷ ಬಿ.ವಿ.ಸತೀಶಗೌಡ ಇತರರು ಹಾಜರಿದ್ದರು.