ಶ್ರಾವಣ ಸೋಮವಾರ: ಸಿದ್ಧಾರೂಢರ ದರ್ಶನಕ್ಕೆ ಭಕ್ತಸಾಗರ

| Published : Aug 06 2024, 12:46 AM IST

ಸಾರಾಂಶ

ಸಿದ್ಧಾರೂಢ ಮಠದ ಕೈಲಾಸ ಮಂಟಪದಲ್ಲಿ ಬೆಳಗ್ಗೆಯಿಂದಲೇ ಶ್ರೀ ಸಿದ್ಧಾರೂಢರ ಕೀರ್ತನೆ, ಭಜನೆ, ಭಕ್ತಿಯಿಂದ ಓಂ ನಮಃ ಶಿವಾಯ ಪಠಣ ನೆರವೇರಿತು. ಧಾರವಾಡ ಸೇರಿದಂತೆ ಗದಗ, ಹಾವೇರಿ, ಬಳ್ಳಾರಿ ಸೇರಿದಂತೆ ಹತ್ತಾರು ಜಿಲ್ಲೆಗಳಿಂದ 15 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಿರುವುದು ಕಂಡು ಬಂದಿತು.

ಹುಬ್ಬಳ್ಳಿ:

ಶ್ರಾವಣ ಮಾಸದ ಮೊದಲ ಸೋಮವಾರದ ಹಿನ್ನೆಲೆಯಲ್ಲಿ ಇಲ್ಲಿನ ಶ್ರೀ ಸಿದ್ಧಾರೂಢರ ಮಠದಲ್ಲಿ ಹೆಚ್ಚಿನ ಜನಜಂಗುಳಿ ಕಂಡುಬಂದಿತು.

ಬೆಳಗ್ಗೆಯೇ ಆಗಮಿಸಿದ್ದ ಸಾವಿರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ಶ್ರೀ ಸಿದ್ಧಾರೂಢರ ಹಾಗೂ ಗುರುನಾಥಾರೂಢರ ಗದ್ದುಗೆಯ ದರ್ಶನ ಪಡೆದರು. ಶ್ರೀಮಠದಲ್ಲಿ ಬೆಳಗ್ಗೆ ಆರೂಢರ ಗದ್ದುಗೆಗೆ ವಿಶೇಷ ಪೂಜೆ, ಅಭಿಷೇಕ, ಬಿಲ್ವಾರ್ಚನೆ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ನೆರವೇರಿದವು.

ಶ್ರೀಮಠದ ಕೈಲಾಸ ಮಂಟಪದಲ್ಲಿ ಬೆಳಗ್ಗೆಯಿಂದಲೇ ಶ್ರೀ ಸಿದ್ಧಾರೂಢರ ಕೀರ್ತನೆ, ಭಜನೆ, ಭಕ್ತಿಯಿಂದ ಓಂ ನಮಃ ಶಿವಾಯ ಪಠಣ ನೆರವೇರಿತು. ಧಾರವಾಡ ಸೇರಿದಂತೆ ಗದಗ, ಹಾವೇರಿ, ಬಳ್ಳಾರಿ ಸೇರಿದಂತೆ ಹತ್ತಾರು ಜಿಲ್ಲೆಗಳಿಂದ 15 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಿರುವುದು ಕಂಡು ಬಂದಿತು.ಅದೇ ರೀತಿ ನಗರದ ವಿವಿಧ ದೇವಸ್ಥಾನಗಳಲ್ಲಿ ಬೆಳಗ್ಗೆಯಿಂದಲೇ ರುದ್ರಾಭಿಷೇಕ, ವಿಶೇಷ ಪೂಜೆ ಕೈಂಕರ್ಯಗಳು ನೆರವೇರದವು. ಭಕ್ತರು ದೇವಸ್ಥಾನಗಳಿಗೆ ತೆರಳಿ ದೇವರಿಗೆ ರುದ್ರಾಭಿಷೇಕ ಮಾಡಿಸಿ ಪುನೀತರಾದರು. ಅದೇ ರೀತಿ ದೇವಸ್ಥಾನಗಳಲ್ಲಿ ಸಂಜೆ ನಿತ್ಯ ಪ್ರವಚನ ಆರಂಭವಾಗಿದ್ದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದ ದೃಶ್ಯಗಳು ಕಂಡುಬಂದವು.