ಶ್ರವಣ ಸ್ಕ್ರೀನಿಂಗ್ ಯೋಜನೆ ಪ್ರಾರಂಭೋತ್ಸವ ನಾಳೆ

| Published : Jul 26 2025, 12:00 AM IST

ಶ್ರವಣ ಸ್ಕ್ರೀನಿಂಗ್ ಯೋಜನೆ ಪ್ರಾರಂಭೋತ್ಸವ ನಾಳೆ
Share this Article
  • FB
  • TW
  • Linkdin
  • Email

ಸಾರಾಂಶ

ಕಾರ್ನಿಯಾ ಯೋಜನೆ ಮತ್ತು ಮಾತು -ಶ್ರವಣ ಸ್ಕ್ರೀನಿಂಗ್ ಯೋಜನೆಯ ಪ್ರಾರಂಭೋತ್ಸವ ಸಮಾರಂಭವನ್ನು ನಗರದ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ಜು. 27 ರಂದು ಮಧ್ಯಾಹ್ನ 12 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಪಾವಗಡದ ಸ್ವಾಮಿ ಜಪಾನಂದಜೀ ಮಹಾರಾಜ್‌ ತಿಳಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರುಕಾರ್ನಿಯಾ ಯೋಜನೆ ಮತ್ತು ಮಾತು -ಶ್ರವಣ ಸ್ಕ್ರೀನಿಂಗ್ ಯೋಜನೆಯ ಪ್ರಾರಂಭೋತ್ಸವ ಸಮಾರಂಭವನ್ನು ನಗರದ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ಜು. 27 ರಂದು ಮಧ್ಯಾಹ್ನ 12 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಪಾವಗಡದ ಸ್ವಾಮಿ ಜಪಾನಂದಜೀ ಮಹಾರಾಜ್‌ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾವಗಡದ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರ, ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಂಗಳೂರಿನ ಇನ್ಫೋಸಿಸ್ ಫೌಂಡೇಷನ್, ಡಾ.ಎಸ್.ಆರ್. ಚಂದ್ರಶೇಖರ್ ಇನ್ಸ್ ಟಿಟ್ಯೂಟ್ ಆಫ್ ಸ್ಪೀಚ್ ಅಂಡ್ ಹಿಯರಿಂಗ್ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ ಈ ಎರಡು ನೂತನ ಯೋಜನೆಗಳನ್ನು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಲೋಕಾರ್ಪಣೆ ಮಾಡುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಜ್ಯೋತಿಗಣೇಶ್, ಎಚ್.ವಿ. ವೆಂಕಟೇಶ್, ವಿಧಾನ ಪರಿಷತ್ ಸದಸ್ಯ ಚಿದಾನಂದ ಗೌಡ, ಇನ್ಫೋಸಿಸ್ ಪ್ರತಿಷ್ಠಾನದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಸುನೀಲ್‌ಕುಮಾರ್ ಧಾರೇಶ್ವರ್, ಇನ್ಫೋಸಿಸ್ ಫೌಂಡೇಷನ್‌ನ ಉಪಾಧ್ಯಕ್ಷರಾದ ಮನೀಷಾ ಸಬೂ, ಬೆಂಗಳೂರು ಸ್ಪೀಚ್ ಆ್ಯಂಡ್ ಹಿಯರಿಂಗ್ ಸಂಸ್ಥೆಯ ಅಧ್ಯಕ್ಷರು ಮತ್ತು ನಿರ್ದೇಶಕರಾದ ಲಯನ್ ವಿ.ವಿ. ಕೃಷ್ಣಾರೆಡ್ಡಿ ಪಾಲ್ಗೊಳ್ಳುವರು ಎಂದರು.

ತುಮಕೂರು ವಿವಿ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಡಾ. ಸುಜಾತ ರಾಥೋಡ್, ಬೆಂಗಳೂರು ಸ್ವೀಚ್ ಆ್ಯಂಡ್ ಹಿಯರಿಂಗ್ ಸಂಸ್ಥೆಯ ಕಾರ್ಯದರ್ಶಿ ಸುರೇಶ್‌ಬಾಬು, ಖಜಾಂಚಿ ವಿ.ಎಸ್. ಶಾಂತವದನ, ಸಿದ್ದಾರ್ಥ ಉನ್ನತ ಶಿಕ್ಷಣ ಸಂಸ್ಥೆಗಳ ಉಪಕುಲಪತಿ ಡಾ. ಕೆ.ಬಿ. ಲಿಂಗೇಗೌಡ, ಮಿಂಟೋ ಕಣ್ಣಾಸ್ಪತ್ರೆಯ ನಿರ್ದೇಶಕರು, ಡಿಎಚ್‌ಓ, ಸಿದ್ದಾರ್ಥ ವೈದ್ಯಕೀಯ ಕಾಲೇಜು, ಶ್ರೀದೇವಿ ವೈದ್ಯಕೀಯ ಕಾಲೇಜು, ಸಿದ್ದಗಂಗಾ ವೈದ್ಯಕೀಯ ಕಾಲೇಜಿನ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ 2000ನೇ ಇಸವಿಯಿಂದಲೇ ಇದುವರೆಗೆ ಗ್ರಾಮಾಂತರ ಪ್ರದೇಶದಲ್ಲಿಯೇ ಮೈಲಿಗಲ್ಲು ಎನ್ನಬಹುದಾದ 50 ಸಾವಿರ ನೇತ್ರ ಶಸ್ತ್ರಚಿಕಿತ್ಸೆಗಳನ್ನು ನೆರವೇರಿಸುವ ಸಾಧನೆ ಮಾಡಲಾಗಿದೆ. ನೇತ್ರ ಸಂಬಂಧಿತ ಶಸ್ತ್ರ ಚಿಕಿತ್ಸೆಗಳಾದ ಕಣ್ಣಿನ ಪೊರೆ, ಕಣ್ಣಿನ ದುರ್ಮಾಂಸ, ಡಿ.ಸಿ.ಆರ್, ಡಿ.ಸಿ.ಟಿ. ನೆರವೇರಿಸಲಾಗಿದೆ. ಇದು ನಾಡಿನ ಗ್ರಾಮಾಂತರ ವಿಭಾಗದ ಕಣ್ಣಿನ ಆಸ್ಪತ್ರೆಯು ನಡೆಸಿದಂತಹ ಒಂದು ದಾಖಲೆಯ ಶಸ್ತ್ರಚಿಕಿತ್ಸೆಗಳು ಎಂದರು.ಇನ್ಫೋಸಿಸ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ನಿಯಾ (ಪಾರದರ್ಶಕ ಪಟಲ) ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದರು..