ಶ್ರೀ ಭಾರತೀ ಸಮೂಹ ಸಂಸ್ಥೆ ‘ಸಾವಿಷ್ಕಾರ್‌-2024’ ವಾರ್ಷಿಕೋತ್ಸವ

| Published : Jan 03 2025, 12:32 AM IST

ಶ್ರೀ ಭಾರತೀ ಸಮೂಹ ಸಂಸ್ಥೆ ‘ಸಾವಿಷ್ಕಾರ್‌-2024’ ವಾರ್ಷಿಕೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪುರಸ್ಕರಿಸುವುದರೊಂದಿಗೆ ಅರ್ಹ ವಿದ್ಯಾರ್ಥಿಗಳಿಗೆ ದತ್ತಿನಿಧಿ ಸಹಾಯಧನದ ಸೌಲಭ್ಯವನ್ನೂ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ‘ಸಾವಿಷ್ಕಾರ್ -2024’ ವಾರ್ಷಿಕೋತ್ಸವ ಸಮಾರಂಭ ಇತ್ತೀಚೆಗೆ ನಡೆಯಿತು.

ಉದ್ಯಮಿ ಮಿಥುನ್ ಭಟ್ ಕಾಕುಂಜೆ ಉದ್ಘಾಟಿಸಿ, ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಆದರ್ಶ ವ್ಯಕ್ತಿಗಳನ್ನು ಗಮನಿಸಬೇಕು. ಪರಿಣಾಮವಾಗಿ ಜೀವನದಲ್ಲಿ ಗುರಿಯನ್ನು ಸಾಧಿಸಲು ಸುಲಭವಾಗುತ್ತದೆ ಎಂದರು.ಅಧ್ಯಕ್ಷತೆ ವಹಿಸಿದ ಮಂಗಳೂರಿನ ಶ್ರೀಶ ಸೌಹಾರ್ದ ಸೊಸೈಟಿಯ ಅಧ್ಯಕ್ಷ ಎಂ. ಎಸ್. ಗುರುರಾಜ್ ಮಾತನಾಡಿ, ಈ ಸಂಸ್ಥೆಯಲ್ಲಿರುವ ಮಕ್ಕಳ ಹೆತ್ತವರು ಭಾಗ್ಯವಂತರು. ಈ ಸೌಲಭ್ಯಗಳನ್ನು ಇನ್ನಷ್ಟು ವಿದ್ಯಾರ್ಥಿಗಳು ಬಳಸಿಕೊಳ್ಳುವಂತಾಗಬೇಕು ಎಂದರು.

ಶಿಕ್ಷಕ - ರಕ್ಷಕ ಸಂಘದ ಅಧ್ಯಕ್ಷ ರಾಜಗೋಪಾಲ್ ಮಾತನಾಡಿ, ಈ ಸಂಸ್ಥೆಯು ವಿದ್ಯಾರ್ಥಿಗಳಿಗೆ ಒಳ್ಳೆಯ ಮಾರ್ಗದರ್ಶನವನ್ನು ನೀಡುವ ಸಂಸ್ಥೆಯಾಗಿದೆ. ಇದು ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು.

ಸೇವಾ ಸಮಿತಿ ಕಾರ್ಯಾಧ್ಯಕ್ಷ ಗಣೇಶ್ ಮೋಹನ್ ಕಾಶಿಮಠ, ಕಾರ್ಯದರ್ಶಿ ಶ್ರೀಕೃಷ್ಣ ನೀರಮೂಲೆ ಮತ್ತು ಸ್ವಾಮಿ ಸದಾನಂದ ಸರಸ್ವತಿ ವಿದ್ಯಾಲಯದ ಮುಖ್ಯ ಶಿಕ್ಷಕಿ ದುರ್ಗಾವತಿ ಮತ್ತಿತರರು ಇದ್ದರು.

ಸಂಸ್ಥೆಯ ನಿರ್ದೇಶಕ ಗಿರೀಶ್ ಎಂ. ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಪ್ರಾಂಶುಪಾಲ ಗಂಗಾರತ್ನ ಸಂಸ್ಥೆಯ ವಾರ್ಷಿಕ ವರದಿ ‘ಮಂಥನ’ವನ್ನು ವಾಚಿಸಿದರು.

ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪುರಸ್ಕರಿಸುವುದರೊಂದಿಗೆ ಅರ್ಹ ವಿದ್ಯಾರ್ಥಿಗಳಿಗೆ ದತ್ತಿನಿಧಿ ಸಹಾಯಧನದ ಸೌಲಭ್ಯವನ್ನೂ ನೀಡಲಾಯಿತು.

ಉಪನ್ಯಾಸಕಿ ವೀಣಾ ಸ್ವಾಗತಿಸಿದರು. ನಿತಿನ್ ಕುಮಾರ್ ವಂದಿಸಿದರು. ರೋಷನ್ ಕುಮಾರ್, ಗಾಯತ್ರೀ ಶ್ರೀನಿವಾಸ್, ಸಂಗೀತಾ ಅತಿಥಿಗಳ ಪರಿಚಯ ಮಾಡಿದರು.

ವಿದ್ಯಾರ್ಥಿಗಳಿಗೆ ನಡೆಸಿದ ವೈವಿಧ್ಯಮಯ ಸ್ಪರ್ಧೆಗಳಲ್ಲಿ ವಿಜೇತರಾದವರ ಪಟ್ಟಿಗಳನ್ನು ಉಪನ್ಯಾಸಕಿಯರಾದ ಅಕ್ಷತಾ, ಸ್ವಾತಿ, ಶ್ರುತಿ, ಸಮೃದ್ಧಿ, ಮೇಘನಾ, ಗಾಯತ್ರೀ ಎನ್. ಎಸ್, ಶೋಭಾ ವಾಚಿಸಿದರು.

ಉಪನ್ಯಾಸಕರಾದ ಕಾರ್ತಿಕ್ ಕೃಷ್ಣ ಮತ್ತು ಸೌಮ್ಯಾ ಶೆಟ್ಟಿ ನಿರೂಪಿಸಿದರು. ನಂತರ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.