ಶ್ರೀ ಕಾಲಭೈರವೇಶ್ವರ ಸ್ವಾಮಿ ನೂತನ ರಥ ಲೋಕಾರ್ಪಣೆ

| Published : Mar 07 2025, 11:47 PM IST

ಸಾರಾಂಶ

ಅರಸೀಕೆರೆ ಬಾಣಾವರದ ಸಮೀಪದ ಮನಕತ್ತೂರು ಗ್ರಾಮದಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿಯವರ ನೂತನ ರಥವನ್ನು ಲೋಕಾರ್ಪಣೆ ಮಾಡಿ ನಂತರ ರಥದಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿಯನ್ನು ಕೂರಿಸಿ ವಿಜೃಂಭಣೆಯಿಂದ ರಥೋತ್ಸವವನ್ನು ನೆರವೇರಿಸಲಾಯಿತು. ರಥೋತ್ಸವದ ಅಂಗವಾಗಿ ಶ್ರೀ ಕಾಲಭೈರವೇಶ್ವರ ಸ್ವಾಮಿ ಅವರ ಸನ್ನಿಧಿಯಲ್ಲಿ ಶಿವರಾತ್ರಿ ಹಬ್ಬದ ದಿನದಿಂದ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ನಡೆಸಿ ಶುಕ್ರವಾರ ಬೆಳಗ್ಗೆ ಶ್ರೀ ವೀರಭದ್ರೇಶ್ವರ ಸ್ವಾಮಿ ಅವರ ಕೆಂಡೋತ್ಸವವನ್ನು ನಡೆಸಿ ನಂತರ ರಥಕ್ಕೆ ಪೂಜೆಯನ್ನು ಸಲ್ಲಿಸಿ ರಥೋತ್ಸವ ನಡೆಸಲಾಯಿತು.

ಅರಸೀಕೆರೆ: ಬಾಣಾವರದ ಸಮೀಪದ ಮನಕತ್ತೂರು ಗ್ರಾಮದಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿಯವರ ನೂತನ ರಥವನ್ನು ಲೋಕಾರ್ಪಣೆ ಮಾಡಿ ನಂತರ ರಥದಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿಯನ್ನು ಕೂರಿಸಿ ವಿಜೃಂಭಣೆಯಿಂದ ರಥೋತ್ಸವವನ್ನು ನೆರವೇರಿಸಲಾಯಿತು.

ರಥೋತ್ಸವದ ಅಂಗವಾಗಿ ಶ್ರೀ ಕಾಲಭೈರವೇಶ್ವರ ಸ್ವಾಮಿ ಅವರ ಸನ್ನಿಧಿಯಲ್ಲಿ ಶಿವರಾತ್ರಿ ಹಬ್ಬದ ದಿನದಿಂದ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ನಡೆಸಿ ಶುಕ್ರವಾರ ಬೆಳಗ್ಗೆ ಶ್ರೀ ವೀರಭದ್ರೇಶ್ವರ ಸ್ವಾಮಿ ಅವರ ಕೆಂಡೋತ್ಸವವನ್ನು ನಡೆಸಿ ನಂತರ ರಥಕ್ಕೆ ಪೂಜೆಯನ್ನು ಸಲ್ಲಿಸಿ ರಥೋತ್ಸವ ನಡೆಸಲಾಯಿತು. ಭಕ್ತಾದಿಗಳಿಗೆ ದಾಸೋಹ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಶ್ರೀ ಕಾಲಭೈರವೇಶ್ವರ ಸ್ವಾಮಿ ಅವರ ಮೂಲ ವಿಗ್ರಹಕ್ಕೆ ಬೆಳ್ಳಿ ಕವಚವನ್ನು ತುಳಸಿ ಅಲಂಕರಿಸಲಾಗಿತ್ತು. ಜಾತ್ರೆ ಜೊತೆಗೆ ನೂತನ ರಥದ ದರ್ಶನವನ್ನು ಪಡೆದು ಭಕ್ತಾದಿಗಳು ಪುನೀತರಾದರು.