ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರುಆಶಾ ಕಾರ್ಯಕರ್ತೆಯರಿಗೆ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಸೇರಿಸಿ ಮಾಸಿಕ ಕನಿಷ್ಟ 10 ಸಾವಿರ ರೂ. ಗೌರವ ಧನವನ್ನು ಏಪ್ರಿಲ್ ನಿಂದ ಅನ್ವಯವಾಗುವಂತೆ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ.ನಗರದ ಗಾಂಧಿ ಚೌಕದ ಬಳಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಆಯೋಜಿಸಿರುವ ಈ ಹೋರಾಟದಲ್ಲಿ ಬುಧವಾರ ವಕೀಲೆ ಮತ್ತು ಮಹಿಳಾವಾದಿ ಸುಮನಾ ಮಾತನಾಡಿದರು.ಕಳೆದ ಬಜೆಟ್ ನಲ್ಲಿ ಎಲ್ಲಾ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ 1 ಸಾವಿರ ರೂ. ಪ್ರೋತ್ಸಾಹ ಧನ ಹೆಚ್ಚಳ ಮಾಡಿದಂತೆಯೇ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಕೂಡ ಹೆಚ್ಚಳ ಮಾಡಲಾಗಿದೆ. ಜನಸಂಖ್ಯೆ ಹೆಚ್ಚಿಸಿ ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಯಾವುದೇ ಕಾರಣಕ್ಕೂ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು ಎಂದು ಅವರು ಒತ್ತಾಯಿಸಿದರು.ಅವೈಜ್ಞಾನಿಕ ಆಶಾ ಪರ್ಫಾಮೆನ್ಸ್ ಅಪ್ರೈಸಲ್‌ಕೈಬಿಡಬೇಕು, ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು, ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡುಗಂಟು ನೀಡಬೇಕು ಎಂದು ಅವರು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಸಂಘಟನೆಯ ಪದಾಧಿಕಾರಿಗಳು ಇದ್ದರು.