13ರಿಂದ 23ರ ವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವಿಷು ಜಾತ್ರಾ ಮಹೋತ್ಸವ

| Published : Apr 05 2024, 01:02 AM IST

13ರಿಂದ 23ರ ವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವಿಷು ಜಾತ್ರಾ ಮಹೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಏ.23ರಂದು ನೇತ್ರಾವತಿ ನದಿಯಲ್ಲಿ ಶ್ರೀ ದೇವರ ಅವಭೃತಸ್ನಾನ ಹಾಗೂ ರಾತ್ರಿ ಧ್ವಜಾವರೋಹಣ ಕಾರ್ಯಕ್ರಮಗಳೊಂದಿಗೆ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಏ.13ರ ಮೇಷ ಸಂಕ್ರಮಣದಿಂದ ಏಪ್ರಿಲ್‌ 23ರ ವರೆಗೆ ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಏ.13 ಕ್ರೋಧಿ ಸಂವತ್ಸರದ ಮೇಷ ಸಂಕ್ರಮಣದಂದು ರಾತ್ರಿ ಧ್ವಜಾರೋಹಣ, ಏ.14 ರಂದು ಸೌರಮಾನ (ವಿಷು)ಯುಗಾದಿ, ಧರ್ಮನೇಮ, ಏ.15ರಂದು ಅಣ್ಣಪ್ಪ ದೈವಗಳ ನೇಮ, ಶ್ರೀ ಮಂಜುನಾಥ ಸ್ವಾಮಿ ಉತ್ಸವ, ಏ.16 ರಂದು ಶ್ರೀ ಮಂಜುನಾಥ ಸ್ವಾಮಿ ಉತ್ಸವ, ಏ.17ರಂದು ಬೈಗಿನ ಬಲಿ ಹೊರಡುವುದು, ಹೊಸಕಟ್ಟೆ ಉತ್ಸವ, ಏ.18 ರಂದು ಕಂಚಿಮಾರುಕಟ್ಟೆ ಉತ್ಸವ, ಏ.19ರಂದು ಲಲಿತೋದ್ಯಾನವನಕಟ್ಟೆ ಉತ್ಸವ, ಏ.20ರಂದು ಕೆರೆಕಟ್ಟೆ ಉತ್ಸವ, 21 ರಂದು ಗೌರಿಮಾರುಕಟ್ಟೆ ಉತ್ಸವ, ಚಂದ್ರಮಂಡಲ ರಥೋತ್ಸವ, ಏ.22ರಂದು ರಾತ್ರಿ ಶ್ರೀ ಮನ್ಮಹಾರಥೋತ್ಸವ, ಏ.23ರಂದು ನೇತ್ರಾವತಿ ನದಿಯಲ್ಲಿ ಶ್ರೀ ದೇವರ ಅವಭೃತಸ್ನಾನ ಹಾಗೂ ರಾತ್ರಿ ಧ್ವಜಾವರೋಹಣ ಕಾರ್ಯಕ್ರಮಗಳೊಂದಿಗೆ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ.