ಕೊರಟಗೆರೆಯಲ್ಲಿ ವಿಜೃಂಭಣೆಯಿಂದ ನಡೆದ ಶ್ರೀ ಮಹಾಲಕ್ಷ್ಮೀ ಬ್ರಹ್ಮರಥೋತ್ಸವ

| Published : Nov 30 2024, 12:47 AM IST

ಕೊರಟಗೆರೆಯಲ್ಲಿ ವಿಜೃಂಭಣೆಯಿಂದ ನಡೆದ ಶ್ರೀ ಮಹಾಲಕ್ಷ್ಮೀ ಬ್ರಹ್ಮರಥೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದ ಸುಪ್ರಸಿದ್ದ ಪುಣ್ಯಕ್ಷೇತ್ರ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಿಯ ಕಾರ್ತಿಕ ಮಾಸದ ವೈಭವದ ಲಕ್ಷ ದೀಪೋತ್ಸವ ಮತ್ತು ಮುತ್ತಿನ ಪಲ್ಲಕ್ಕಿ ಉತ್ಸವ ಕಾರ್ಯಕ್ರಮವನ್ನ ಸಾವಿರಾರು ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ಶುಕ್ರವಾರ ನಡೆಯಿತು.

ರಾಜ್ಯ, ನೆರೆ ರಾಜ್ಯಗಳ ಭಕ್ತಾಧಿಗಳು ಭಾಗಿ । ದೀಪೋತ್ಸವದಲ್ಲಿ ಸಾವಿರಾರು ಜನರಿಂದ ಭಕ್ತಿ ಸಮರ್ಪಣೆ ಕನ್ನಡಪ್ರಭ ವಾರ್ತೆ ಕೊರಟಗೆರೆ

ರಾಜ್ಯದ ಸುಪ್ರಸಿದ್ದ ಪುಣ್ಯಕ್ಷೇತ್ರ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಿಯ ಕಾರ್ತಿಕ ಮಾಸದ ವೈಭವದ ಲಕ್ಷ ದೀಪೋತ್ಸವ ಮತ್ತು ಮುತ್ತಿನ ಪಲ್ಲಕ್ಕಿ ಉತ್ಸವ ಕಾರ್ಯಕ್ರಮವನ್ನ ಸಾವಿರಾರು ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ಶುಕ್ರವಾರ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ತುಮಕೂರು ಜಿಲ್ಲೆಯ ವಿವಿಧ ಕಡೆಗಳಿಂದ ಸಾವಿರಾರು ಭಕ್ತಾಧಿಗಳು ಆಗಮಿಸಿ ಸಾವಿರಾರು ದೀಪಗಳನ್ನು ಬೆಳಗಿಸುವ ಮೂಲಕ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದರು.

ಮಹಾಲಕ್ಷ್ಮೀ ದೇವಿಯ ಬ್ರಹ್ಮ ರಥೋತ್ಸವವನ್ನ ಮಧುಗಿರಿ ತಗ್ಗಿಹಳ್ಳಿ ಶ್ರೀ ಮಠದ ತಗ್ಗಿಹಳ್ಳಿ ರಾಮಾನಂದ ಸ್ವಾಮೀಜಿ ಸಾವಿರಾರು ಮಂದಿ ಭಕ್ತಾದಿಗಳ ಸಮ್ಮುಖದಲ್ಲಿ ಚಾಲನೆ ನೀಡಿದರು. ಬ್ರಹ್ಮರಥೋತ್ಸವಕ್ಕೂ ಮುನ್ನ ಶ್ರೀ ಗಣಪತಿ ಹೋಮ, ನವಗ್ರಹ ಹೋಮ, ಶ್ರೀ ಮಹಾಲಕ್ಷ್ಮಿ ಹೋಮ, ಗ್ರಾಮ ದೇವತೆ ದುರ್ಗಾ ಹೋಮದಲ್ಲಿ ಭಾಗವಹಿಸಿದರು.

ಮಧುಗಿರಿ ತಗ್ಗಿಹಳ್ಳಿ ಶ್ರೀ ಮಠದ ರಾಮಾನಂದ ಸ್ವಾಮೀಜಿ ಮಾತನಾಡಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ಪ್ರತಿ ವರ್ಷ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮಗಳಿಂದ ಸಮಸ್ತ ಜನತೆಗೆ ಶ್ರೀ ಮಹಾಲಕ್ಷ್ಮಿ ದೇವಿ ಸಕಲ ಐಶ್ವರ್ಯ, ಅರೋಗ್ಯ ಕೊಟ್ಟು ಕಾಪಾಡಲಿ ಎಂದರು.

ಶ್ರೀ ಮಹಾಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಬಿ.ಜಿ.ವಾಸುದೇವ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವು ಕಾರ್ತಿಕ ಮಾಸದ ಕಡೇ ಶುಕ್ರವಾರ ವಿಜೃಂಭಣೆಯಿಂದ ಸಾವಿರಾರು ಭಕ್ತರ ಸಮುಖದಲ್ಲಿ ಬ್ರಹ್ಮರಥೋತ್ಸವ ನಡೆದಿದೆ. ದೇವಿಯ ದರ್ಶನಕ್ಕೆ ಆಗಮಿಸಿದ ಭಕ್ತರಿಗೆ ಬೆಳಿಗ್ಗೆ ಯಿಂದ ರಾತ್ರಿ ೧೦ ಗಂಟೆಯವೆರಗೂ ದೇವಿಯ ದರ್ಶನದೊಂದಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.ಮಹಾಲಕ್ಷ್ಮೀ ಸನ್ನೀಧಾನದಲ್ಲಿ ವಿವಿಧ ಕಾಮಗಾರಿಗಳ ಯೋಜನೆ ರೂಪಿಸಲಾಗಿದ್ದು ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ತರಲಾಗುವುದು. ೯ ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಏಕಕಾಲದಲ್ಲಿ ೨ ಸಾವಿರಕ್ಕೂ ಹೆಚ್ಚು ಭಕ್ತರು ಪ್ರಸಾನ ನೀಡುವ ದಾಸೋಹ ಭವನ ಲೋಕಾರ್ಪಣೆಗೆ ಸಿದ್ದವಿದ್ದು ಶೀಘ್ರದಲ್ಲಿ ಲೋಕಾರ್ಪಣೆ ಮಾಡಲಾಗುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಮಹಾಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ಕಾರ್ಯದರ್ಶಿ ಆರ್,ಮುರಳಿಕೃಷ್ಣ, ಖಜಾಂಚಿ ಆರ್.ಜಗದೀಶ್, ಧರ್ಮದರ್ಶಿಗಳಾದ ಡಾ.ಟಿ.ಎಸ್.ಲಕ್ಷ್ಮೀಕಾಂತ. ಟಿ.ಆರ್.ನಟರಾಜು, ಎಸ್.ಶ್ರೀಪ್ರಸಾದ್ ರವಿರಾಜೇಅರಸ್, ಮಂಜುನಾಥ್, ಓಂಕಾರೇಶ್, ಚಿಕ್ಕನರಸಯ್ಯ, ವಿ.ಬಾಲಕೃಷ್ಣ, ಲಕ್ಷ್ಮಿನರಸಯ್ಯ, ಎನ್.ಜಿ.ನಾಗರಾಜು, ಅರ್ಚಕರಾದ ಸುಬ್ರಹ್ಮಣ್ಯ, ಗಿರೀಶ್ ರಾವ್, ದೇವಾಲಯದ ವಿಶೇಷ ಅಧಿಕಾರಿ ಕೇಶಮೂರ್ತಿ, ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ್, ಮಂಜುನಾಥ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.