ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀವೆಂಕಟರಮಣಸ್ವಾಮಿ ಹುಂಡಿ ಎಣಿಕೆ
KannadaprabhaNewsNetwork | Published : Oct 13 2023, 12:16 AM IST
ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀವೆಂಕಟರಮಣಸ್ವಾಮಿ ಹುಂಡಿ ಎಣಿಕೆ
ಸಾರಾಂಶ
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ರಥಬೀದಿಯಲ್ಲಿರುವ ಇತಿಹಾಸದ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯದ ಹುಂಡಿ ಎಣಿಕೆ ಕಾರ್ಯ ಕಂದಾಯ ಇಲಾಖೆ ಅಧಿಕಾರಿಗಳ ಹಾಗು ದೇವಾಲಯದ ವ್ಯವಸ್ಥಾಪನಾ ಸಮಿತಿ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು.
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ರಥಬೀದಿಯಲ್ಲಿರುವ ಇತಿಹಾಸದ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯದ ಹುಂಡಿ ಎಣಿಕೆ ಕಾರ್ಯ ಕಂದಾಯ ಇಲಾಖೆ ಅಧಿಕಾರಿಗಳ ಹಾಗು ದೇವಾಲಯದ ವ್ಯವಸ್ಥಾಪನಾ ಸಮಿತಿ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು. ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು, ಗ್ರಾಮದ ಮುಖಂಡರು, ತೂಬಗೆರೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ತೊಡಗಿದ್ದರು. ಹುಂಡಿಯಲ್ಲಿ ಈ ಬಾರಿ ಒಟ್ಟು 3,71,950 ರುಪಾಯಿ ನಗದು ಸಂಗ್ರಹವಾಗಿತ್ತು. ಸರ್ಕಾರದ ನಿಯಮಾನುಸಾರ ಹುಂಡಿ ಎಣಿಕೆ ಕಾರ್ಯ ಮಾಡಲಾಗಿದ್ದು, ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಹಣ ಸಂಗ್ರಹವಾಗಿದೆ ಎಂದು ಎಣಿಕೆ ಕಾರ್ಯದ ನೇತೃತ್ವ ವಹಿಸಿದ್ದ ಹೋಬಳಿ ರಾಜಸ್ವ ನಿರೀಕ್ಷಕ ಲಕ್ಷ್ಮೀ ನರಸಿಂಹ ಮಾಹಿತಿ ನೀಡಿದರು.