ಶ್ರೀ ದೇವಿರಮ್ಮ ಜಾತ್ರಾ ಮಹೋತ್ಸವ: ಒಂದು ಸಾವಿರ ಪೊಲೀಸರ ನಿಯೋಜನೆ

| Published : Nov 12 2023, 01:00 AM IST

ಶ್ರೀ ದೇವಿರಮ್ಮ ಜಾತ್ರಾ ಮಹೋತ್ಸವ: ಒಂದು ಸಾವಿರ ಪೊಲೀಸರ ನಿಯೋಜನೆ
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀ ದೇವಿರಮ್ಮ ಜಾತ್ರಾ ಮಹೋತ್ಸವ: ಒಂದು ಸಾವಿರ ಪೊಲೀಸರ ನಿಯೋಜನೆ

ಬೆಟ್ಟ ಹತ್ತುವವರಿಗೆ ಹಲವು ಮುಂಜಾಗ್ರತಾ ಕ್ರಮ । ಪಾರ್ಕಿಂಗ್ ವ್ಯವಸ್ಥೆ । ಸುದ್ದಿಗೋಷ್ಠಿಯಲ್ಲಿ ಎಸ್ಪಿ ಡಾ. ವಿಕ್ರಂ ಅಮಟೆ ಮಾಹಿತಿ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುತಾಲೂಕಿನ ಮಲ್ಲೇನಹಳ್ಳಿಯ ಶ್ರೀ ದೇವಿರಮ್ಮ ಜಾತ್ರೆ ಅಂಗವಾಗಿ ಬೆಟ್ಟಕ್ಕೆ ಬರುವ ಭಕ್ತರು ಸಂಪ್ರದಾಯ ಪಾಲಿಸಬೇಕು. ಬೆಟ್ಟ ಹತ್ತುವ ಮಾರ್ಗ ಮಧ್ಯದಲ್ಲಿ ಯಾರೂ ಕೂಡ ಪಟಾಕಿ ಸಿಡಿಸಬಾರದು. ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಂ ಅಮಟೆ ಹೇಳಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ. 12 ರಿಂದ 18 ರವರೆಗೆ ತಾಲೂಕಿನ ಬಿಂಡಿಗ ಮಲ್ಲೇನಹಳ್ಳಿಯ ಆದಿಶಕ್ತ್ಯಾತ್ಮಕ ಶ್ರೀ ದೇವಿರಮ್ಮನ ಜಾತ್ರೆಯನ್ನು ಪ್ರತಿ ವರ್ಷದಂತೆ ಈ ವರ್ಷವೂ ಆಚರಣೆ ಮಾಡಲಾಗುತ್ತಿದೆ. ನಾಲ್ಕು ದಿನಗಳ ಕಾಲ ನಡೆಯಲಿರುವ ಈ ಜಾತ್ರಾ ಮಹೋತ್ಸವದಲ್ಲಿ ಮಹಿಳೆಯರು ಮತ್ತು ಮಕ್ಕಳು ಭಾಗವಹಿಸುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತೆ ಕೈಗೊಳ್ಳಲಾಗಿದೆ. ದೇವಸ್ಥಾನ ಸಮಿತಿಯಿಂದಲೂ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ಭದ್ರತೆ ದೃಷ್ಟಿಯಿಂದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್ಪಿಗಳು, 10 ಮಂದಿ ಇನ್ಸ್‌ಸ್ಪೆಕ್ಟರ್, 5 ಡಿಎಆರ್ ತುಕಡಿ, 3 ಕೆಎಸ್‌ಆರ್‌ಪಿ ತುಕಡಿ ಸೇರಿದಂತೆ ಒಂದು ಸಾವಿರ ಮಂದಿ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಜನಸಂದಣಿ ಹೆಚ್ಚಾಗಿರುವ ಕಾರಣ ಪೊಲೀಸರ ಸಂವಹನಕ್ಕಾಗಿ 30 ಮೆಘಾ ಫೋನ್, ಟಾರ್ಚ್ ಲೈಟ್‌ಗಳನ್ನು ಬಳಸಿಕೊಳ್ಳಲಾಗುತ್ತಿದೆ. ದೇವೀರಮ್ಮ ಬೆಟ್ಟ ನೈಸರ್ಗಿಕ ಪ್ರದೇಶ ವಾಗಿರುವುದರಿಂದ ಸಾಮಾನ್ಯವಾಗಿ ಇತ್ತೀಚೆಗೆ ಹೋಗುವವರು ಕೂಡ ಹೆಚ್ಚಾಗಿದ್ದಾರೆ. ಆದ್ದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಅಗ್ನಿ ಶಾಮಕ ದಳದ ಒಂದು ತಂಡದಲ್ಲಿ ಐದು ಮಂದಿ ಒಳಗೊಂಡಂತೆ ಈಗಾಗಲೇ ಐದು ತಂಡಗಳನ್ನು ನಿಯೋಜನೆ ಮಾಡಲು ತಿಳಿಸಿದ್ದು, ಇನ್ನೂ ಎರಡು ಹೆಚ್ಚುವರಿ ತಂಡಗಳ ನಿಯೋಜಿಸುವಂತೆ ಮನವಿ ಮಾಡಲಾಗಿದೆ. ಒಟ್ಟು 7 ತಂಡಗಳಲ್ಲಿ 35 ಮಂದಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ಭಕ್ತಾಧಿಗಳ ರಕ್ಷಣೆ ದೃಷ್ಟಿಯಿಂದ ಚಿಕ್ಕಮಗಳೂರು ವಿಷನ್ ಮತ್ತು ಚಿಕ್ಕಮಗಳೂರು ರಕ್ಷಣಾ ಪಡೆಯ ತಂಡ, ಎಸ್‌ಡಿಆರ್‌ಎಫ್‌ನಿಂದ ತರಬೇತಿ ಪಡೆದವರೂ ಕೂಡಾ ರಕ್ಷಣಾ ತಂಡದಲ್ಲಿ ಭಾಗವಹಿಸುವಂತೆ ಕೇಳಿಕೊಳ್ಳಲಾಗುವುದು. ಬೆಟ್ಟಕ್ಕೆ ಬರುವ ಭಕ್ತಾಧಿಗಳು, ಸಾರ್ವಜನಿಕರು ಜಿಲ್ಲಾ ಡಳಿತ, ಪೊಲೀಸ್ ಇಲಾಖೆ ನೀಡುವ ಸೂಚನೆಗಳನ್ನು ಪಾಲಿಸಬೇಕು. ಬೆಟ್ಟ ಹತ್ತುವ ಮಾರ್ಗದಲ್ಲಿ ಆರೋಗ್ಯ, ರಕ್ಷಣಾ ತಂಡಗಳು ಕಾರ್ಯ ನಿರ್ವಹಿಸಲಿದ್ದು, ಶನಿವಾರ ಮಧ್ಯಾಹ್ನದಿಂದಲೇ ಪೊಲೀಸರ ನಿಯೋಜನೆ ಮಾಡಲಾಗಿದ್ದು, ಬೆಟ್ಟದಲ್ಲಿ ಭಾನುವಾರ ಸಂಜೆಯವರೆಗೂ ಪೊಲೀಸರು ಕಾರ್ಯ ನಿರ್ವಹಿಸ ಲಿದ್ದಾರೆ. ಆರೋಗ್ಯ ಇಲಾಖೆಯಿಂದ 4 ಆಂಬುಲೆನ್ಸ್, ಹೆಲ್ತ್ ಟೀಮ್ ಬೆಟ್ಟದ ಭಾಗದಲ್ಲಿ ಕಾರ್ಯ ನಿರ್ವಹಿಸಿದರೆ ತಜ್ಞ ವೈದ್ಯರನ್ನೊಳಗೊಂಡ ಒಂದು ತಂಡ ಮಲ್ಲೇನಹಳ್ಳಿಯಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ಹೇಳಿದರು. ಬೆಟ್ಟಕ್ಕೆ ಹೋಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಸಾರಿಗೆ ಬಳಸುವ ಮೂಲಕ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಸಹಕರಿಸಬೇಕು. ವಾಹನ ಪಾರ್ಕಿಂಗ್‌ಗೆ ಸಂಬಂಧಿಸಿದಂತೆ ತರೀಕೆರೆ ಭಾಗದಿಂದ ಬರುವ ವಾಹನಗಳ ನಿಲುಗಡೆಗೆ ಕುಮಾರಗಿರಿ ಬಳಿ ವ್ಯವಸ್ಥೆ ಮಾಡಲಾಗಿದ್ದು, ಚಿಕ್ಕಮಗಳೂರು ಕಡೆಯಿಂದ ಬರುವ ವಾಹನಗಳ ನಿಲುಗಡೆಗೆ ಮಲ್ಲೇನಹಳ್ಳಿ ಗ್ರಾಮದ ಪ್ರೌಢಶಾಲೆ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

11 ಕೆಸಿಕೆಎಂ 5