ಡಾ.ತಲ್ಲೂರುಗೆ ಶ್ರೀ ಜಗಜ್ಯೋತಿ ಬಸವೇಶ್ವರ ಸದ್ಭಾವನಾ ಪ್ರಶಸ್ತಿ

| Published : Apr 02 2024, 01:01 AM IST / Updated: Apr 02 2024, 01:02 AM IST

ಡಾ.ತಲ್ಲೂರುಗೆ ಶ್ರೀ ಜಗಜ್ಯೋತಿ ಬಸವೇಶ್ವರ ಸದ್ಭಾವನಾ ಪ್ರಶಸ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಶ್ರೀ ಜಗಜ್ಯೋತಿ ಬಸವೇಶ್ವರ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಬೆಂಗಳೂರಿನ ಶ್ರೀ ಸರ್ವೆಜನಾಃ ಆರ್ಟ್ಸ್ ಮತ್ತು ಕಲ್ಚರಲ್ ಟ್ರಸ್ಟ್‌ ಇದರ 7ನೇ ವಾರ್ಷಿಕೋತ್ಸವದ ಪ್ರಯುಕ್ತ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ರಂಗ ಮಂದಿರದಲ್ಲಿ ಇತ್ತೀಚೆಗೆ ಹಮ್ಮಿಕೊಂಡ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಶ್ರೀ ಜಗಜ್ಯೋತಿ ಬಸವೇಶ್ವರ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರು ಸಮಾಜ ಸೇವಕರಾಗಿ, ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷರಾಗಿ ಸಮಾಜಕ್ಕೆ ನೀಡಿದ ಅನುಪಮ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಿಕ್ಷಣ ತಜ್ಞ ಡಾ. ಕೆ. ಪಿ. ಪುತ್ತೂರಾಯ, ಸಂಸ್ಥೆಯ ಗೌರವಾಧ್ಯಕ್ಷ ಕೆಂಚನೂರು ಶಂಕರ್, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷೆ ಮಾಲತಿ ಸುಧೀರ್, ಖ್ಯಾತ ನಟಿ ಪದ್ಮಾ ವಸಂತಿ, ಖ್ಯಾತ ಗಾಯಕ ಶಶಿಧರ್ ಕೋಟೆ, ಡಾ. ವಿ. ಶ್ರೀನಿವಾಸ ಗುರೂಜಿ, ಡಾ. ಶಿವಕುಮಾರ ಗುರೂಜಿ, ಚಲನ ಚಿತ್ರ ನಟ ಶಿವಕುಮಾರ ಆರಾಧ್ಯ, ಉದ್ಯಮಿ ಶ್ರೀ ಮಹೇಂದ್ರ ಸಿಂಗ್ ಕಾಳಪ್ಪ, ಸಂಸ್ಥೆಯ ರಾಜ್ಯಾಧ್ಯಕ್ಷೆ ಲಕ್ಷಿತಾ ಗಂಗಾವತಿ, ಸಾಹಿತಿ ಡಾ.ಮಾಲತಿ ಶೆಟ್ಟಿ ಮಾಣೂರು ಉಪಸ್ಥಿತರಿದ್ದರು.