ಸಾರಾಂಶ
ವಿದ್ಯಾ ಪ್ರೋತ್ಸಾಹ ಧನ ವಿತರಣಾ ಸಮಾರಂಭವನ್ನು ಉಡುಪಿ ಶಾಸಕರು ಉದ್ಘಾಟಿಸಿದರು. ಶಿರೂರು ಶ್ರೀಗಳ ಸಮಾಜಮುಖಿ ಸೇವಾ ಚಿಂತನೆ ನಮಗೆಲ್ಲಾ ಸದಾ ಆದರ್ಶ ಎಂದು ಗಣ್ಯರು ತಿಳಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಇಲ್ಲಿನ ಶ್ರೀ ಶೀರೂರು ಮಠ ಹಾಗೂ ಜಿಲ್ಲಾ ಹಿಂದೂ ಯುವಸೇನೆ ವತಿಯಿಂದ, ಕೀರ್ತಿಶೇಷ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ 6ನೇ ಆರಾಧಾನ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಸ್ಥಳೀಯ ಮತ್ತು ರಾಜ್ಯ ಮಟ್ಟದ ಕುಣಿತ ಭಜನಾ ಸ್ಪರ್ಧೆ, ಮುದ್ದು ಕೃಷ್ಣ ಸ್ಪರ್ಧೆ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣಾ ಸಮಾರಂಭವನ್ನು ಉಡುಪಿ ಶಾಸಕರ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಯಶ್ ಪಾಲ್ ಸುವರ್ಣ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರು ಧಾರ್ಮಿಕ ಕಾರ್ಯಕ್ರಮಗಳ ಜೊತೆ ಜೊತೆಗೆ ಸಮಾಜ ಸೇವೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ವಿಶೇಷ ಪ್ರೋತ್ಸಾಹ ನೀಡುತ್ತಾ ಹಿಂದುತ್ವದ ಪ್ರಬಲ ಪ್ರತಿಪಾದಕರಾಗಿ ಸಂಘಟನೆಯ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡುವ ಮೂಲಕ ಹಿಂದೂ ಸಮಾಜಕ್ಕೆ ಪ್ರೇರಕ ಶಕ್ತಿಯಾಗಿದ್ದರು ಎಂದರು.
ಕಾಪು ಶಾಸಕ ಸುರೇಶ್ ಶೆಟ್ಟಿ ಪರಮಪೂಜ್ಯ ಶಿರೂರು ಶ್ರೀಗಳ ಸಮಾಜಮುಖಿ ಸೇವಾ ಚಿಂತನೆ ನಮಗೆಲ್ಲ ಸದಾ ಆದರ್ಶವಾಗಿರಲಿದೆ ಎಂದರು.ಸಮಾರಂಭದಲ್ಲಿ ಹಿಂದೂ ಯುವ ಸೇನೆ ಜಿಲ್ಲಾಧ್ಯಕ್ಷ ಅಜಿತ್ ಕೊಡವೂರು, ಶಿರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಹಿಂದೂ ಯುವಸೇನೆಯ ಪ್ರಮುಖರಾದ ಶೇಖರ್ ಶೆಟ್ಟಿ ಹಿರಿಯಡ್ಕ, ಕಾರ್ಯದರ್ಶಿ ಅರುಣ್, ಉಡುಪಿ ನಗರ ಅಧ್ಯಕ್ಷ ಸುನೀಲ್ ನೇಜಾರ್, ಪ್ರದೀಪ್ ಶೆಟ್ಟಿ ಶೀರೂರು, ರೋಹಿತ್ ಶೆಟ್ಟಿ ಬೆಳ್ಳರ್ಪಾಡಿ, ಸುರೇಶ್ ಸಾಲ್ಯಾನ್, ಮೋಹನ್ ಭಟ್, ಬೆಳ್ಳರ್ಪಾಡಿ ಘಟಕದ ಅಧ್ಯಕ್ಷರಾದ ಸದಾಶಿವ ಪೂಜಾರಿ, ಪವನ್ ಹೆರ್ಗ, ನವೀನ್ ಪುತ್ರನ್, ಉದಯ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))