ಸಾರಾಂಶ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಾವೇರಿ ಜಿಲ್ಲಾ, ತಾಲೂಕು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಸಹಯೋಗದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಮಾರಂಭ ಅ. 7ರಂದು ಬೆಳಗ್ಗೆ 11 ಗಂಟೆಗೆ ಹಾವೇರಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜರುಗಲಿದೆ. ಇದಕ್ಕೂ ಮೊದಲು ಬೆಳಗ್ಗೆ 9 ಗಂಟೆಗೆ ನಗರದ ಮುರುಘರಾಜೇಂದ್ರ ಮಠದಿಂದ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರ ಮೆರವಣಿಗೆ ಜರುಗಲಿದೆ.
ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಾವೇರಿ ಜಿಲ್ಲಾ, ತಾಲೂಕು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಸಹಯೋಗದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಮಾರಂಭ ಅ. 7ರಂದು ಬೆಳಗ್ಗೆ 11 ಗಂಟೆಗೆ ಹಾವೇರಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜರುಗಲಿದೆ. ಇದಕ್ಕೂ ಮೊದಲು ಬೆಳಗ್ಗೆ 9 ಗಂಟೆಗೆ ನಗರದ ಮುರುಘರಾಜೇಂದ್ರ ಮಠದಿಂದ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರ ಮೆರವಣಿಗೆ ಜರುಗಲಿದೆ.
ಜವಳಿ, ಕಬ್ಬು ಅಭಿವೃದ್ಧಿ ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಉದ್ಘಾಟನೆ ನೆರವೇರಿಸಲಿದ್ದಾರೆ.ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರ ಗೌರವ ಉಪಸ್ಥಿತಿಯಲ್ಲಿ, ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಅಧ್ಯಕ್ಷ ಸೈಯದ್ ಅಜೀಮ್‌ಪೀರ್ ಖಾದ್ರಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್. ಪಾಟೀಲ, ವಿಧಾನ ಪರಿಷತ್ ಶಾಸಕರಾದ ಪ್ರೊ. ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ, ಶಾಸಕರಾದ ಶ್ರೀನಿವಾಸ ಮಾನೆ, ಯು.ಬಿ. ಬಣಕಾರ, ಪ್ರಕಾಶ ಕೋಳಿವಾಡ, ಯಾಸೀರ ಅಹ್ಮದಖಾನ್ ಪಠಾಣ, ಕರ್ನಾಟಕ ಗಡಿ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ.ಹಿರೇಮಠ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ. ಮೈದೂರ, ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ ಹಾಗೂ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾಧ್ಯಕ್ಷ ರಮೇಶ ಆನವಟ್ಟಿ ಪಾಲ್ಗೊಳ್ಳಲಿದ್ದಾರೆ.2020ನೇ ಸಾಲಿನ ಪರಿಸರ ಪತ್ರಿಕೋದ್ಯಮ ರಾಜ್ಯ ಪ್ರಶಸ್ತಿ ವಿಜೇತ ಪತ್ರಕರ್ತ ಮಾಲತೇಶ ಅಂಗೂರ ಅವರು ಉನ್ಯಾಸಕರಾಗಿ ಭಾಗವಹಿಸಲಿದ್ದು, ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಲಾಗುತ್ತಿದೆ.