ಸಾರಾಂಶ
ಯಮಕನಮರಡಿ: ಸಮೀಪದ ಹೊಸವಂಟಮೂರಿ ಗ್ರಾಮದ ಶ್ರೀ ಪ್ರಭುಲಿಂಗೇಶ್ವರ ಜಾತ್ರಾ ಮಹೋತ್ಸವ ಸಂಭ್ರಮದಿಂದ ಜರುಗಿತು. ಯುಗಾದಿ ನಿಮಿತ್ತ ಶ್ರೀ ಪ್ರಭುಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ರಾಷ್ಟ್ರೀಯ ಹೆದ್ದಾರಿಯಿಂದ ಪ್ರಭುಲಿಂಗೇಶ್ವರ ದೇವಸ್ಥಾನದವರೆಗೆ ಕುಂಭೋತ್ಸವದ ಭವ್ಯ ಮೆರವಣಿಗೆ ನಡೆಯಿತು.
ಯಮಕನಮರಡಿ: ಸಮೀಪದ ಹೊಸವಂಟಮೂರಿ ಗ್ರಾಮದ ಶ್ರೀ ಪ್ರಭುಲಿಂಗೇಶ್ವರ ಜಾತ್ರಾ ಮಹೋತ್ಸವ ಸಂಭ್ರಮದಿಂದ ಜರುಗಿತು. ಯುಗಾದಿ ನಿಮಿತ್ತ ಶ್ರೀ ಪ್ರಭುಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ರಾಷ್ಟ್ರೀಯ ಹೆದ್ದಾರಿಯಿಂದ ಪ್ರಭುಲಿಂಗೇಶ್ವರ ದೇವಸ್ಥಾನದವರೆಗೆ ಕುಂಭೋತ್ಸವದ ಭವ್ಯ ಮೆರವಣಿಗೆ ನಡೆಯಿತು. ಭೂತರಾಮನಹಟ್ಟಿಯ ಮುಕ್ತಿಮಠದ ಶಿವಸಿದ್ದ ಸೋಮೇಶ್ವರ ಸ್ವಾಮೀಜಿ ನೂತನ ಮಹಾದ್ವಾರ ಉದ್ಘಾಟಿಸಿ ಆಶೀರ್ವಚನ ನೀಡಿ, ವಂಟಮೂರಿ ಗ್ರಾಮಸ್ಥರು ಸಂಸ್ಥಾನ ಪರಂಪರೆಯಿಂದ ಬಂದಿದ್ದು, ಅದನ್ನು ಮುಂದುವರಿಸಿಕೊಂಡು ಹೋಗಬೇಕೆಂದು ಹೇಳಿದರು.
ಹಿರೇಮುನ್ನವಳ್ಳಿ-ಪಾರಿಶ್ವಾಡದ ಶಂಭುಲಿಂಗ ಸ್ವಾಮೀಜಿ ಉಪಸ್ಥಿತರಿದ್ದರು. ಗ್ರಾಮಸ್ಥರು ಭಕ್ತಾದಿಗಳು ಪಾಲ್ಗೊಂಡಿದ್ದರು. ನಂತರ ಮಹಾಪ್ರಸಾದ ನಡೆಯಿತು.