ಸಾರಾಂಶ
ರಾಮನಗರ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಹಿಂದೂ ಸಂಘಟನೆಗಳು ಹಾಗೂ ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡಿ ಸುಳ್ಳು ಮೊಕದ್ದಮೆ ದಾಖಲಿಸಿ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಶ್ರೀ ರಾಮ ಸೇನಾ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನಾ ಧರಣಿ ನಡೆಸಿದರು.
ನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಧರಣಿ ನಡೆಸಿದ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹಿಂದೂಗಳು ನೆಮ್ಮದಿಯಿಂದ ಇರದಂತೆ, ತಮ್ಮ ಹಬ್ಬಗಳನ್ನೂ ಸಂತಸದಿಂದ ಮಾಡದಂತೆ ಅರಾಜಕತೆ, ಕೋಮು ದ್ವೇಷವನ್ನು ಹರಡುತ್ತಿದೆ ಎಂದು ದೂರಿದರು.ದೊಡ್ಡಬಳ್ಳಾಪುರದಲ್ಲಿ ಅಕ್ರಮವಾಗಿ 35 ಟನ್ ಗೋಮಾಂಸ ವಾಹನಹಿಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ರಮೇಶ್ ಗೌಡ ಸೇರಿದಂತೆ 16 ಗೋ ರಕ್ಷಕರ್ನು ಜೈಲಿಗೆ ಕಳುಹಿಸಲಾಗಿದೆ. ಶ್ರೀ ರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ರವರಿಗೆ ಶಿವಮೊಗ್ಗ , ಚಿಕ್ಕಮಗಳೂರು ಜಿಲ್ಲಾ ಪ್ರವೇಶ ನಿರ್ಬಂಧ ಹೇರುವ ಜೊತೆಗೆ ಹುಬ್ಬಳ್ಳಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶ್ರೀರಾಮ ಸೇನಾ ರಾಜ್ಯಾಧ್ಯಕ್ಷ ಗಂಗಾಧಱ ಕುಲಕರ್ಣಿರವರಿಗೆ ಚಿಕ್ಕಮಗಳೂರು ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ ಎಂದು
ಟೀಕಿಸಿದರು.ಮಂಗಳೂರಿನ ಹಿಂದೂ ಕಾರ್ಯಕರ್ತರಿಗೆ ಗಡಿಪಾರು, ಬೆಂಗಳೂರಲ್ಲಿ ಹಿಂದೂ ಹೋರಾಟಗಾರರ ಬಂಧನ, ಕಲ್ಬುರ್ಗಿ ಹಿಂದೂ ಕಾರ್ಯಕರ್ತರಿಗೆ ರೌಡಿ ಶೀಟ್ ದಾಖಲು, ಹುಬ್ಬಳ್ಳಿಯಲ್ಲಿ ಅಯೋಧ್ಯೆ ಕರಸೇವಕನ ಬಂಧನ, ರಾಮನಗರ ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಣಿಕೆ ತಡೆದ ನಾಲ್ವರ ವಿರುದ್ಧ ಪ್ರಕರಣ, ಚಿಕ್ಕಮಗಳೂರಿನಲ್ಲಿ 14 ಹಿಂದೂ ಕಾರ್ಯಕರ್ತರ 17 ವರ್ಷ ಹಳೆಯ ಪ್ರಕರಣಕ್ಕೆ ಮರು ಜೀವ ನೀಡಿ ಕಾಂಗ್ರೆಸ್ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸಂಘಟನೆ ಜಿಲ್ಲಾಧ್ಯಕ್ಷ ನಾಗರ್ಜುನಗೌಡ ಮಾತನಾಡಿ, ರಾಮನಗರದ ರಾಮದೇವರ ಬೆಟ್ಟವನ್ನು ದಕ್ಷಿಣ ಭಾರತದ ಅಯೋಧ್ಯೆ ರೀತಿ ಅಭಿವೃದ್ಧಿ ಪಡಿಸಲು ಬಿಜೆಪಿ ಸರ್ಕಾರ ಬಜೆಟ್ ನಲ್ಲಿ ಅನುಮೋದನೆ ನೀಡಿ ಸಂಪೂರ್ಣ ತಯಾರಿ ನಡೆಸಿತ್ತು. ಆದರೆ, ಸ್ಥಳೀಯ ಶಾಸಕರು ರಾಮೋತ್ಸವ ಮಾಡುತ್ತೇನೆ ಎನ್ನುತ್ತಾರೆ. ಆದರೆ, ಈ ಯೋಜನೆ ಬಗ್ಗೆ ಕಾಂಗ್ರೆಸ್ ಸರ್ಕಾರ ಈವರೆಗೂ ಸ್ಪಷ್ಟೀಕರಣ ನೀಡಿಲ್ಲ. ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಉಪಮುಖ್ಯಮಂತ್ರಿಗಳು ಯೋಜನೆ ತ್ವರಿತವಾಗಿ ಕಾರ್ಯಗತಗೊಳಿಸಬೇಕುಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಶ್ರೀ ರಾಮ ಸೇನಾನ ತಾಲೂಕು ಉಪಾಧ್ಯಕ್ಷ ರಾಜಗೋಪಾಲ್ , ಶರತ್ ಚೀರಣಕುಪ್ಪೆ, ಕೆ.ಎನ್ .ನವೀನ್ , ಪವನ್ ಕುಮಾರ್ , ಅರುಣ್ ಉದಾರಹಳ್ಳಿ, ದಿಲೀಪ್ ಕುಮಾರ್ , ಇಂದ್ರೇಶ್ , ಸತೀಶ್ ಭಾಗವಹಿಸಿದ್ದರು.9ಕೆಆರ್ ಎಂಎನ್ 1.ಜೆಪಿಜಿ
ರಾಮನಗರ ಜಿಲ್ಲಾ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಪ್ರತಿಭಟನೆ ನಡೆಸಿದ ಶ್ರೀ ರಾಮ ಸೇನಾ ಕಾರ್ಯಕರ್ತರು ಅಧಿಕಾರಿಗೆ ಮನವಿ ಸಲ್ಲಿಸಿದರು.