32 ಸಾಧಕರಿಗೆ ಶ್ರೀಕೃಷ್ಣದೇವರಾಯ ಪ್ರಶಸ್ತಿ ಪ್ರದಾನ

| Published : Feb 19 2025, 12:46 AM IST

ಸಾರಾಂಶ

ಕನ್ನಡ ಸಾಹಿತ್ಯ ಪರಿಷತ್‌ ಭವನ ಇದ್ದೂ ಇಲ್ಲದಂತಾಗಿದೆ. ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸ್ಥಳದ ಕೊರತೆ ಬರಬಾರದು. ಈ ನಿಟ್ಟಿನಲ್ಲಿ ಕಸಾಪ ಪದಾಧಿಕಾರಿಗಳು ಗಮನಹರಿಸಿ ಭವನದ ಸ್ವಚ್ಛತೆ ಕಾಪಾಡಬೇಕು.

ಗಂಗಾವತಿ:ವಿವಿಧ ಕ್ಷೇತ್ರದ 32 ಸಾಧಕರನ್ನು ಗುರುತಿಸಿ ಶ್ರೀಕೃಷ್ಣದೇವರಾಯ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಿರುವುದು ಶ್ಲಾಘನೀಯ ಎಂದು ರಾಜವಂಶಸ್ಥೆ ಲಲಿತಾರಾಣಿ ಶ್ರೀರಂಗದೇವರಾಯಲು ಹೇಳಿದರು.

ನಗರದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಶ್ರೀಚನ್ನಬಸವ ಪ್ರಕಾಶನ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಹೊಸಳ್ಳಿಯ ವಿಶ್ವರತ್ನ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಶ್ರೀಕೃಷ್ಣದೇವರಾಯ ಪ್ರಶಸ್ತಿ ಪ್ರದಾನ, ರಾಜ್ಯಮಟ್ಟದ ಮಹಿಳಾ ಕವನ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ದಿ. ವೇದವ್ಯಾಸ ರಾವ್ ನವಲಿ ಸ್ಮರಣಾರ್ಥ ಕಾವ್ಯಲೋಕದ 108ನೇ ಕವಿಗೋಷ್ಠಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಬಿಜೆಪಿ ಮುಖಂಡ ವಿರೂಪಾಕ್ಷಪ್ಪ ಸಿಂಗನಾಳ ಮಾತನಾಡಿ, ಕಸಾಪ ಭವನ ಇದ್ದೂ ಇಲ್ಲದಂತಾಗಿದೆ. ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸ್ಥಳದ ಕೊರತೆ ಬರಬಾರದು. ಈ ನಿಟ್ಟಿನಲ್ಲಿ ಕಸಾಪ ಪದಾಧಿಕಾರಿಗಳು ಗಮನಹರಿಸಿ ಭವನದ ಸ್ವಚ್ಛತೆ ಕಾಪಾಡಬೇಕು ಎಂದರು.

ಪಂಪಾನಗರ ಗೃಹ ನಿರ್ಮಾಣ ಸಹಕಾರ ಸಂಘದ ಮಾಜಿ ಅಧ್ಯಕ್ಷ ಗುರುರಾಜ ಬೆಳ್ಳುಬ್ಬಿಅವರು, ದಿ. ನವಲಿ ವೇದವ್ಯಾಸರಾವ್ ಅವರ 50 ವರ್ಷದ ಪತ್ರಿಕಾ ಕ್ಷೇತ್ರ ಮತ್ತು ಸಮಾಜ ಸೇವೆಯನ್ನು ಸ್ಮರಿಸಿದರು. ಮಾಜಿ ಕಾಡಾ ಅಧ್ಯಕ್ಷ, ರೈತ ಮುಖಂಡ ತಿಪ್ಪೇರುದ್ರಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.ಈ ವೇಳೆ ಪತ್ರಕರ್ತರಾದ ಎಸ್.ಎಂ. ಪಟೇಲ್, ರಾಮಮೂರ್ತಿ ನವಲಿ, ಡಾ. ಸಿ. ಮಹಾಲಕ್ಷ್ಮೀ, ಡಾ. ಶಿವಕುಮಾರ ಮಾಲಿಪಾಟೀಲ್, ಬಿ.ಸಿ. ಐಗೋಳ, ಪಂಚಾಕ್ಷರಕುಮಾರ, ಮಾರುತಿ ಐಲಿ, ಚನ್ನಬಸಪ್ಪ ಬಳಗಾರ ಉಡುಪಿ, ಡಾ. ಪ್ರಭುಸ್ವಾಮಿ ಹಾಲೇವಾಡಿಮಠ ಹಾವೇರಿ, ವಿಷ್ಣುತೀರ್ಥ ಜೋಶಿ, ವಿ.ಎಸ್. ಶಿವಪ್ಪಯ್ಯನಮಠ ಯಲಬುರ್ಗಾ ಸೇರಿದಂತೆ 32 ಸಾಧಕರಿಗೆ ಶ್ರೀಕೃಷ್ಣದೇವರಾಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಆನಂತರ ಪತ್ರಕರ್ತ ದಿ. ವೇದವ್ಯಾಸರಾವ್ ನವಲಿ ಸ್ಮರಣಾರ್ಥ ಕಾವ್ಯಲೋಕದಿಂದ ನಡೆದ 108ನೇ ಕವಿಗೋಷ್ಠಿಯಲ್ಲಿ ಶಾಮೀದ್ ಲಾಠಿ, ಶಶಿಕಲಾ ಕುರುಗೋಡು, ಚಿದಾನಂದ ಕೀರ್ತಿ, ಭೀಮನಗೌಡ ಕೇಸರಹಟ್ಟಿ, ಜಯಶ್ರೀ ಹಕ್ಕಂಡಿ ಮತ್ತಿತರರು ಕವನ ವಾಚಿಸಿದರು. ಕಸಾಪ ತಾಲೂಕು ಅಧ್ಯಕ್ಷ ರುದ್ರೇಶ ಆರ್ಹಾಳ, ಗುರುರಾಜ ಬೆಳ್ಳುಬ್ಬಿ, ಪಿ.ಎಂ. ಸುಬ್ರಮಣ್ಯಂ, ಎಂ. ಪರಶುರಾಮ ಪ್ರಿಯ, ಕೃಷ್ಣ ಆಶೀಶ, ರಗಡಪ್ಪ ಹೊಸಳ್ಳಿ, ಶಿಕ್ಷಕರಾದ ಸುಂಕಪ್ಪ, ಜಯಶ್ರೀ ಹಕ್ಕಂಡಿ ಇದ್ದರು.