ದಾಳಿಯಲ್ಲಿ ಭಾಗಿಯಾಗಿರುವ ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಸಂಘಟಿತ ಸಂಚು ಇರುವುದಾದರೆ ಸಂಪೂರ್ಣ ತನಿಖೆ ನಡೆಸಿ ಸತ್ಯಾಂಶ ಬಹಿರಂಗಪಡಿಸಬೇಕು. ಗಾಯಗೊಂಡವರಿಗೆ ತಕ್ಷಣ ಚಿಕಿತ್ಸೆ, ಪರಿಹಾರ ಮತ್ತು ಭದ್ರತಾ ಭರವಸೆ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.
ಕನ್ನಡಪ್ರಭವಾರ್ತೆ ಕನಕಪುರ
ಬಾಗಲಕೋಟೆ ನಗರದಲ್ಲಿ ಫೆ.19ರಂದು ನಡೆದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ಸಂದರ್ಭ ನಡೆದ ಕಲ್ಲು ಹಾಗೂ ಚಪ್ಪಲಿ ದಾಳಿಯನ್ನು ಖಂಡಿಸಿ ಕನಕಪುರ ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ಶ್ರೀರಾಮ ಸೇನಾ ದಕ್ಷಿಣ ಪ್ರಾಂತ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗರ್ಜುನಗೌಡ, ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಶಾಂತಿಯುತವಾಗಿ ಸಾಗುತ್ತಿದ್ದ ಮೆರವಣಿಗೆ ಮೇಲೆ ನಡೆದ ದಾಳಿ ದುಃಖಕರ ಮತ್ತು ಅಕ್ಷಮ್ಯ ಘಟನೆ ಎಂದು ವಿಷಾದಿಸಿದರು.ದಾಳಿಯಲ್ಲಿ ಭಾಗಿಯಾಗಿರುವ ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಸಂಘಟಿತ ಸಂಚು ಇರುವುದಾದರೆ ಸಂಪೂರ್ಣ ತನಿಖೆ ನಡೆಸಿ ಸತ್ಯಾಂಶ ಬಹಿರಂಗಪಡಿಸಬೇಕು. ಗಾಯಗೊಂಡವರಿಗೆ ತಕ್ಷಣ ಚಿಕಿತ್ಸೆ, ಪರಿಹಾರ ಮತ್ತು ಭದ್ರತಾ ಭರವಸೆ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.
ಮಂಡ್ಯ ವಿಭಾಗೀಯ ಅಧ್ಯಕ್ಷ ರಾಜೇಶ್ ಡಿ.ಎಂ., ಪ್ರಧಾನ ಕಾರ್ಯದರ್ಶಿ ನವೀನ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಪರಮೇಶ್ ಗೌಡ, ಬೆಂಗಳೂರು ಕಾರ್ಯದರ್ಶಿ ಗಿರೀಶ್ ಬಿ.ಎಂ., ಕಾರ್ಯದರ್ಶಿ ರಾಜಗೋಪಾಲ್ ಹಾಗೂ ಪದಾಧಿಕಾರಿಗಳಾದ ಸಾಗರ್, ಸ್ವಾಮಿ, ಮಲ್ಲಿಕಾರ್ಜುನ್, ಪ್ರಭು ಸೇರಿ ಅನೇಕ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹಾಜರಿದ್ದರು.------------------ಕೆ ಕೆ ಪಿ ಸುದ್ದಿ 02:
ಬಾಗಲಕೋಟೆಯಲ್ಲಿ ನಡೆದ ಘಟನೆ ಖಂಡಿಸಿ ಶ್ರೀ ರಾಮ ಸೇನೆ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು.