ಜಿಗುಪ್ಸೆಗೊಂಡು ರೈಲಿಗೆ ತಲೆಕೊಟ್ಟು ಶ್ರುಶೂಷಕ ಆತ್ಮಹತ್ಯೆ

| Published : Apr 19 2024, 01:06 AM IST

ಜಿಗುಪ್ಸೆಗೊಂಡು ರೈಲಿಗೆ ತಲೆಕೊಟ್ಟು ಶ್ರುಶೂಷಕ ಆತ್ಮಹತ್ಯೆ
Share this Article
  • FB
  • TW
  • Linkdin
  • Email

ಸಾರಾಂಶ

ಜೀವನದಲ್ಲಿ ಜಿಗುಪ್ಸೆಗೊಂಡು ಖಾಸಗಿ ಆಸ್ಪತ್ರೆಯ ಶುಶ್ರೂಷಕನೊಬ್ಬ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ದೀಪಾಂಜಲಿ ನಗರ ಸಮೀಪ ನಡೆದಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಜೀವನದಲ್ಲಿ ಜಿಗುಪ್ಸೆಗೊಂಡು ಖಾಸಗಿ ಆಸ್ಪತ್ರೆಯ ಶುಶ್ರೂಷಕನೊಬ್ಬ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ದೀಪಾಂಜಲಿ ನಗರ ಸಮೀಪ ನಡೆದಿದೆ.

ಮೂಲತಃ ವಿಜಯಪುರ ಜಿಲ್ಲೆಯ ಕಾರಜೋಳದ, ಹಾಲಿ ಮಾಗಡಿ ರಸ್ತೆಯ ಚೋಳರಪಾಳ್ಯದ ನಿವಾಸಿ ಚನ್ನಬಸು ಅಶೋಕ್‌ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ದೀಪಾಂಜಲಿ ನಗರದ ಸಮೀಪ ರೈಲಿಗೆ ಬುಧವಾರ ರಾತ್ರಿ ಸಿಲುಕಿ ಚನ್ನಬಸು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈಲ್ವೆ ಹಳಿಗಳ ಬಳಿ ಅಪರಿಚಿತ ಮೃತದೇಹ ಕಂಡು ಪೊಲೀಸರಿಗೆ ಗುರುವಾರ ಬೆಳಗ್ಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ತೆರಳಿ ಪೊಲೀಸರು ಪರಿಶೀಲಿಸಿದಾಗ ಮೃತದೇಹದ ಗುರುತು ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ವಿಜಯಪುರ ಜಿಲ್ಲೆ ಕಾರಜೋಳದ ಮೃತ ಅಶೋಕ್‌, ಕಳೆದ ಹದಿನೈದು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಶುಶ್ರೂಷಕನಾಗಿ ಕೆಲಸ ಮಾಡುತ್ತಿದ್ದ. ತಮ್ಮ ಚಿಕ್ಕಮ್ಮನ ಮನೆಯಲ್ಲಿ ನೆಲೆಸಿದ್ದ ಆತ, ಬುಧವಾರ ರಾತ್ರಿ ಕೆಲಸಕ್ಕೆ ಮುಗಿಸಿ ಮರಳುವಾಗ ದೀಪಾಂಜಲಿನಗರದ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಟಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.