ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಮಡಿಕೇರಿ ತಾಲೂಕು ಮಟ್ಟದ ಅಂತರ ಶಾಲಾ ಅಂಡರ್ 14 ಬಾಲಕರ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ನಾಪೋಕ್ಲು: ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಮಡಿಕೇರಿ ತಾಲೂಕು ಮಟ್ಟದ ಅಂತರ ಶಾಲಾ ಅಂಡರ್ 14 ಬಾಲಕರ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಂಡದಲ್ಲಿ ಯಶಸ್ ಮಂದಣ್ಣ, ಶೋಧನ್, ಅಕ್ಷಯ್, ಜೀವಿತ್ ಭಾಗವಹಿಸಿದ್ದರು. ಅಂಡರ್ 17 ವಿಭಾಗದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.