ವಿಜಯಪುರ ನಗರದ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ಇಂಡಿ ಮಂಡಲ ವತಿಯಿಂದ ಜನಸಂಘದ ಸಂಸ್ಥಾಪಕರಾದ ಡಾ.ಶ್ಯಾಮಪ್ರಸಾದ್ ಮುಖರ್ಜಿ ಅವರ ಜನ್ಮ ದಿನಾಚರಣೆ ಹಾಗೂ ಬಾಬು ಜಗಜೀವನ್ ರಾಂ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಇಂಡಿ

ಭಾರತೀಯ ಜನಸಂಘದ ಸಂಸ್ಥಾಪಕ ಶ್ಯಾಮ್‌ ಪ್ರಸಾದ್‌ ಮುಖರ್ಜಿ ಅವರು ವೃತ್ತಿಯಲ್ಲಿ ವಕೀಲರಾಗಿ ಸಮಾಜ ಸುಧಾರಣೆಗೆ ದಾರಿದೀಪವಾಗಿದ್ದರು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಹಣಮಂತ್ರಾಯಗೌಡ ಪಾಟೀಲ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ಇಂಡಿ ಮಂಡಲ ವತಿಯಿಂದ ಜನಸಂಘದ ಸಂಸ್ಥಾಪಕರಾದ ಡಾ.ಶ್ಯಾಮಪ್ರಸಾದ್ ಮುಖರ್ಜಿ ಅವರ ಜನ್ಮ ದಿನಾಚರಣೆ ಹಾಗೂ ಬಾಬು ಜಗಜೀವನ್ ರಾಂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸ್ವಾತಂತ್ರ್ಯೋತ್ತರದಲ್ಲಿ ಹಿಂದೂಗಳ ಮೇಲಿನ ಶೋಷಣೆ ವಿರುದ್ಧ ಧ್ವನಿ ಎತ್ತಿದ ಮುಖರ್ಜಿ ಅವರ ಪ್ರತಿ ಕಾರ್ಯದಲ್ಲೂ ದೇಶಾಭಿಮಾನ ಎದ್ದು ಕಾಣುತ್ತಿತ್ತು. ದುಷ್ಟ ಶಕ್ತಿಗಳಿಂದ ದೇಶ ವಿಭಜಿಸುವ ಹುನ್ನಾರ ನಡೆದಾಗ ಪ್ರತಿ ಹಂತದಲ್ಲೂ ಪ್ರಬಲವಾಗಿ ವಿರೋಧಿಸುತ್ತಾ ಬಂದರು. ದೇಶದ ಏಕತೆ ಅಖಂಡತೆಗೆ ಅವರಿಗಿದ್ದ ಪ್ರೇಮ, ಕಾಳಜಿ ಪ್ರತಿ ಭಾರತೀಯನಿಗೆ ಅವರ ಮೇಲೆ ಅಪಾರ ಗೌರವ ಮೂಡಿಸುತ್ತದೆ ಎಂದು ತಿಳಿಸಿದರು.

ದೇಶದಲ್ಲಿ ಆಹಾರ ಕೊರತೆ ನೀಗಿಸಿದವರು ಮಾಜಿ ಪ್ರಧಾನಿ ಮಹಾನ್ ನಾಯಕ ಬಾಬು ಜಿಗಜೀವನ್ ರಾಂ ಎಂದು ಬಣ್ಣಿಸಿದರು. ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ರಾಘವೇಂದ್ರ ಕಾಪಸೆ, ಬಿಜೆಪಿ ಮುಖಂಡರಾದ ಕಾಸುಗೌಡ ಬಿರಾದಾರ, ಶೀಲವಂತ ಉಮರಾಣಿ, ಎಸ್.ಎ.ಪಾಟೀಲ ಡೊಮನಾಳ,ಮಲ್ಲಿಕಾರ್ಜುನ ಕಿವಡೆ, ಅನೀಲ ಜಮಾದಾರ ಮಾತನಾಡಿದರು.

ಯುವ ಮೋರ್ಚಾ ಅಧ್ಯಕ್ಷ ಶಿವು ಬಗಲಿ, ಮಹಿಳಾ ಮೊರ್ಚಾ ಅಧ್ಯಕ್ಷೆ ಬಸಮ್ಮ ಮರಡಿ, ಒಬಿಸಿ ಮೊರ್ಚಾ ಅಧ್ಯಕ್ಷ ಮಹೇಶ ಹೂಗಾರ, ರೈತ ಮೋರ್ಚಾ ಅಧ್ಯಕ್ಷ ಚನ್ನಯ್ಯ ಹಿರೇಮಠ, ಎಸ್ಸಿ ಮೊರ್ಚಾ ಅಧ್ಯಕ್ಷ ಮೋಹನ ರಾಠೋಡ, ಎಸ್ಟಿ ಮೊರ್ಚಾ ಅಧ್ಯಕ್ಷ ರಮೇಶ ಕೋಳಿ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರಫೀಕ್‌ ಶೇಖ, ದೇವೇದ್ರ ಕುಂಬಾರ, ಅನೀಲಗೌಡ ಬಿರಾದಾರ, ರಾಜಕುಮಾರ ಸಗಾಯಿ, ಬಾಳು ಮುಳಜಿ, ಸಂತೋಷಗೌಡ ಪಾಟೀಲ, ಅಶೋಕ ಅಕಲಾದಿ, ವಿಜಯಕುಮಾರ ಮಾನೆ, ರಾಮಸಿಂಗ ಕನ್ನೊಳ್ಳಿ, ಭಾಗೇಶ ಮಲಘಾಣ, ಶ್ರೀಮಂತ ಮೊಗಲಾಯಿ, ಸೋಮು ನಿಂಬರಗಿಮಠ, ಮಲ್ಲು ಗುಡ್ಲ,ಮಲ್ಲು ವಾಲಿಕಾರ, ಶಿವಯೋಗಯ್ಯ ರೂಗಿಮಠ,ದತ್ತಾ ಬಂಡೆನವರ ಇತರರು ಭಾಗವಹಿಸಿದ್ದರು.