ಸಾರಾಂಶ
ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಲೆಕ್ಕ ಪರಿಶೋಧಕ ಗುಜ್ಜಾಡಿ ಪ್ರಭಾಕರ ನಾಯಕ್ ಉಪನ್ಯಾಸ ನಡೆಸಿಕೊಟ್ಟರು.
ಕನ್ನಡಪ್ರಭ ವಾರ್ತೆ ಉಡುಪಿ
ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸಂಸ್ಮರಣೆಯ ಪ್ರಯುಕ್ತ ಅವರ ಜೀವನಾದರ್ಶಗಳ ಯಶೋಗಾಥೆ ಕುರಿತು ಉಪನ್ಯಾಸ ಕಾರ್ಯಕ್ರಮವು ಸೋಮವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು.ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಲೆಕ್ಕ ಪರಿಶೋಧಕ ಗುಜ್ಜಾಡಿ ಪ್ರಭಾಕರ ನಾಯಕ್ ಉಪನ್ಯಾಸ ನಡೆಸಿಕೊಟ್ಟರು.
ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಗುಜ್ಜಾಡಿ ಪ್ರಭಾಕರ ನಾಯಕ್ ಉಪನ್ಯಾಸ ನಡೆಸಿ, ಒಂದು ದೇಶದಲ್ಲಿ ಎರಡು ಧ್ವಜ, ಎರಡು ಪ್ರಧಾನಿ, ಎರಡು ಸಂವಿಧಾನ ಇರಲು ಸಾಧ್ಯವಿಲ್ಲ ಎಂಬ ತತ್ವವನ್ನು ಪ್ರತಿಪಾದಿಸಿ ಕಾಶ್ಮೀರದ ವಿಮೋಚನೆಗಾಗಿ ಹೋರಾಡಿ ಹುತಾತ್ಮರಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ದೇಶಭಕ್ತಿ, ಸಾಧನೆ, ಹೋರಾಟಗಳು ಮತ್ತು ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಪರಿ, ತ್ಯಾಗ, ಬಲಿದಾನದ ಯಶೋಗಾಥೆಯನ್ನು ಎಳೆ ಎಳೆಯಾಗಿ ಬಿಡಿಸಿ ಅವರ ಜೀವನಾದರ್ಶಗಳ ಚಿತ್ರಣವನ್ನು ಸಭೆಯ ಮಂದಿಟ್ಟರು.
ಈ ಸಂದರ್ಭ ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು, ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಯರಾಮ್ ಸಾಲ್ಯಾನ್, ಜಿಲ್ಲಾ ಪ್ರ. ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಅನಿತಾ ಶ್ರೀಧರ್, ಶ್ರೀಕಾಂತ್ ನಾಯಕ್, ರಾಘವೇಂದ್ರ ಕುಂದರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ವಕ್ತಾರ ವಿಜಯಕುಮಾರ್ ಉದ್ಯಾವರ, ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಪ್ರ.ಕಾರ್ಯದರ್ಶಿಗಳಾದ ನಳಿನಿ ಪ್ರದೀಪ್ ರಾವ್, ಅನಿತಾ ಆರ್.ಕೆ., ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ವಿಜಯ ಕೊಡವೂರು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕನ್ನಾರು ಕಮಲಾಕ್ಷ ಹೆಬ್ಬಾರ್, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಕುಮಾರದಾಸ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜ, ಉಡುಪಿ ನಗರ ಮಂಡಲ ಪ್ರ.ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.