2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ರ‍್ಯಾಂಕ್ ಪಡೆದ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವ್ಯಾಪ್ತಿಯ ಸದಸ್ಯರ ಮಕ್ಕಳನ್ನು ಸಂಘದ ವತಿಯಿಂದ ಗೌರವಿಸಲಾಯಿತು.
ಬಂಟ್ವಾಳ: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ರ‍್ಯಾಂಕ್ ಪಡೆದ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವ್ಯಾಪ್ತಿಯ ಸದಸ್ಯರ ಮಕ್ಕಳನ್ನು ಸಂಘದ ವತಿಯಿಂದ ಗೌರವಿಸಲಾಯಿತು.
ಸಂಘದ ಸದಸ್ಯ ಡೊಂಬಯ ಡಿ. ಅರಳ ಅವರ ಪುತ್ರಿ ಜ್ಞಾನಶ್ರೀ, ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 596 ಅಂಕಗಳನ್ನು ಗಳಿಸಿ ರಾಜ್ಯ ಮಟ್ಟದಲ್ಲಿ ನಾಲ್ಕನೇ ಸ್ಥಾನ, ಆಳ್ವಾಸ್ ಸಂಸ್ಥೆಯಲ್ಲಿ ಮೂರನೇ ಸ್ಥಾನ ಹಾಗೂ ಬಂಟ್ವಾಳ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.ಸಂಘದ ಸದಸ್ಯ ನವೀನ ಶೆಟ್ಟಿ ಕರಿಂಕಿಜೆ ಅವರ ಪುತ್ರಿ ಕೃತ್ವಿ ಎನ್. ಶೆಟ್ಟಿ, ರೋಟರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, 600ರಲ್ಲಿ 590 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ಹತ್ತನೇ ಸ್ಥಾನ ಹಾಗೂ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ಇವರಿಬ್ಬರನ್ನು ಸಂಘದ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.ಈ ಸಂದರ್ಭ ಮಾತನಾಡಿದ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಸಿದ್ದಕಟ್ಟೆ, ಸಂಘದ ಸದಸ್ಯರ ಮಕ್ಕಳು ಸಾಧಿಸಿರುವ ಶೈಕ್ಷಣಿಕ ಯಶಸ್ಸು ಸಂಘಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಮುಂದಿನ ವರ್ಷಗಳಲ್ಲೂ ಇದೇ ರೀತಿಯ ಸಾಧನೆಗಳು ಮುಂದುವರಿಯಲಿ ಎಂದು ಶುಭ ಹಾರೈಸಿದರು.
ಸಂಘದ ಉಪಾಧ್ಯಕ್ಷ ಸಂದೇಶ ಶೆಟ್ಟಿ ಪೊಡುಂಬ, ನಿರ್ದೇಶಕರಾದ ಸತೀಶ್ ಪೂಜಾರಿ ಅಲಕ್ಕೆ, ರಶ್ಮಿತ್ ಶೆಟ್ಟಿ, ದಿನೇಶ್ ಪೂಜಾರಿ, ಚಂದ್ರಶೇಖರ ಶೆಟ್ಟಿ, ವಿಶ್ವನಾಥ್ ಶೆಟ್ಟಿಗಾರ್, ಜಾರಪ್ಪ ನಾಯ್ಕ, ವೀರಪ್ಪ ಪರವ, ಎ. ಶಿವ ಗೌಡ, ಮಂದಾರತಿ ಎಸ್. ಶೆಟ್ಟಿ, ಪುಷ್ಪಲತಾ ಎಸ್.ಆರ್., ರಾಜೇಶ್ ಶೆಟ್ಟಿ ಕೊನೆರಬೆಟ್ಟು, ನವೀನ ಹೆಗ್ಡೆ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ, ಪೋಷಕರಾದ ನವೀನ ಶೆಟ್ಟಿ ಮತ್ತಿತರರಿದ್ದರು.ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರ್ವಹಿಸಿದರು.