ಕಾರು ಅಪಘಾತದಲ್ಲಿ ಸಿದ್ದನಕೊಳ್ಳ ಸ್ವಾಮೀಜಿ ಗಂಭೀರ ಗಾಯ

| Published : May 05 2024, 02:11 AM IST

ಕಾರು ಅಪಘಾತದಲ್ಲಿ ಸಿದ್ದನಕೊಳ್ಳ ಸ್ವಾಮೀಜಿ ಗಂಭೀರ ಗಾಯ
Share this Article
  • FB
  • TW
  • Linkdin
  • Email

ಸಾರಾಂಶ

ಸುಕ್ಷೇತ್ರ ಸಿದ್ದನಕೊಳ್ಳದ ಪೀಠಾಧಿಕಾರಿ ಡಾ.ಶಿವಕುಮಾರ ಸ್ವಾಮೀಜಿ ಕಾರು ಅಪಘಾತಕ್ಕೀಡಾಗಿದ್ದು, ಶ್ರೀಗಳು ಗಂಭೀರ ಗಾಯಗೊಂಡ ಘಟನೆ ಅಮಿನಡ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.

ಕನ್ನಡಪ್ರಭ ವಾರ್ತೆ ಅಮೀನಗಡ

ಸುಕ್ಷೇತ್ರ ಸಿದ್ದನಕೊಳ್ಳದ ಪೀಠಾಧಿಕಾರಿ ಡಾ.ಶಿವಕುಮಾರ ಸ್ವಾಮೀಜಿ ಕಾರು ಅಪಘಾತಕ್ಕೀಡಾಗಿದ್ದು, ಶ್ರೀಗಳು ಗಂಭೀರ ಗಾಯಗೊಂಡ ಘಟನೆ ಅಮಿನಡ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಶ್ರೀಗಳು ಗಂಭೀರ ಗಾಯಗೊಂಡಿದ್ದು, ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಆಗಿದ್ದೇನು?:

ಶನಿವಾರ ಶ್ರೀಗಳು ಹುನಗುಂದದಿಂದ ಬಾಗಲಕೋಟೆ ಕಡೆಗೆ ಬೊಲೆರೋ ಕಾರಿನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು, ಬೊಲೆರೋ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ಶ್ರೀಗಳಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆ್ಯಂಬುಲೆನ್ಸ್ ಮೂಲಕ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಶ್ರೀಗಳ ಕಾರು ನಜ್ಜುಗುಜ್ಜಾಗಿದೆ. ಈ ಕುರಿತು ಅಮೀನಗಡ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.