ಸಿದ್ದಾಪುರ: ಬಿ.ಜಿ.ಎಸ್. ವಿದ್ಯಾಸಂಸ್ಥೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ

| Published : Jan 12 2024, 01:46 AM IST

ಸಿದ್ದಾಪುರ: ಬಿ.ಜಿ.ಎಸ್. ವಿದ್ಯಾಸಂಸ್ಥೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಬಿ.ಜಿ.ಎಸ್. ವಿದ್ಯಾಸಂಸ್ಥೆಯ 6ನೇ ವಾರ್ಷಿಕೋತ್ಸವ ಸಂಭ್ರಮ ಸಡಗರದಿಂದ ನಡೆಯಿತು. ಸ್ಥಳೀಯರ ಮನವಿ ಹಿನ್ನೆಲೆಯಲ್ಲಿ ಪ್ರಸ್ತುತ ವರ್ಷದಿಂದ ಬಿ.ಎ. ಮತ್ತು ಬಿ.ಕಾಂ ಪ್ರಾರಂಭಗೊಂಡಿದ್ದು, ಮುಂದೆ ಹಂತ ಹಂತವಾಗಿ ಮುಂದಿನ ತರಗತಿಗಳು ಪ್ರಾರಂಭಗೊಳ್ಳಲಿದೆ ಎಂದು ಕುಲಸಚಿವ ಸೀನಪ್ಪ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಸಿದ್ದಾಪುರ

ಬಿ.ಜಿ.ಎಸ್. ವಿದ್ಯಾಸಂಸ್ಥೆಯ 6ನೇ ವಾರ್ಷಿಕೋತ್ಸವ ಸಂಭ್ರಮ ಸಡಗರದಿಂದ ನಡೆಯಿತು.ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಸಚಿವ ಸೀನಪ್ಪ, ಪ್ರಸಕ್ತ ವರ್ಷದಿಂದಲೇ ಪದವಿ ಶಿಕ್ಷಣಕ್ಕೆ ಚಾಲನೆ ನೀಡಲಾಗುತ್ತಿದ್ದು, ಕಾರ್ಮಿಕರು, ಮಧ್ಯಮ ವರ್ಗದವರೇ ಹೆಚ್ಚಿರುವ ಈ ಭಾಗದಲ್ಲಿ ಪದವಿಪೂರ್ವ ಶಿಕ್ಷಣಕ್ಕೆ ಮಾತ್ರ ಅವಕಾಶ ವಿದೆ. ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿಗಳು ದೂರದ ಊರುಗಳನ್ನು ಅವಲಂಬಿಸ ಬೇಕಾಗಿದ್ದರಿಂದ ಹಲವು ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ದ್ವಿತೀಯ ಪಿಯುಸಿಗೆ ಮೊಟಕುಗೊಳಿಸುತ್ತಿದ್ದರು. ಸ್ಥಳೀಯರ ಮನವಿ ಹಿನ್ನೆಲೆಯಲ್ಲಿ ಪ್ರಸ್ತುತ ವರ್ಷದಿಂದ ಬಿ.ಎ. ಮತ್ತು ಬಿ.ಕಾಂ ಪ್ರಾರಂಭಗೊಂಡಿದ್ದು, ಮುಂದೆ ಹಂತ ಹಂತವಾಗಿ ಮುಂದಿನ ತರಗತಿಗಳು ಪ್ರಾರಂಭಗೊಳ್ಳಲಿದೆ ಎಂದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಯುವ ಸಮೂಹ ದೇಶವನ್ನು ಸದೃಢವಾಗಿ ಕಟ್ಟುವ ಮಹತ್ತರ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ ನವ ರಾಷ್ಟ್ರ ನಿರ್ಮಾಣಕ್ಕೆ ಮುನ್ನುಡಿಯಾಗಬೇಕು ಕರೆ ನೀಡಿದರು.ಆದಿ ಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಶ್ರೀ ಸೋಮನಾಥ ಸ್ವಾಮೀಜಿ ಆರ್ಶೀವಚನ ನೀಡಿದರು.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಗ್ರಾ.ಪಂ. ಅಧ್ಯಕ್ಷೆ ಪ್ರೇಮಾ ಗೋಪಾಲ್, ಗ್ರಾ.ಪಂ. ಸದಸ್ಯೆ ದೇವಜಾನು ಮತ್ತಿತರರಿದ್ದರು.