ಸಿದ್ದಾಪುರ: ಜಿಲ್ಲೆಯಾದ್ಯಂತ ಎಸ್‌ಎನ್‌ಡಿಪಿ ಯೂನಿಯನ್ ಬಲಿಷ್ಠ ಸಂಘಟನೆಯಾಗಿ ಬೆಳೆದಿರುವುದರಿಂದಲೇ ಇಂದು ಸರ್ಕಾರದ ಅನುದಾನ ಸಂಘಟನೆಗೆ ದೊರಕಲು ಸಾಧ್ಯವಾಗಿದೆ ಎಂದು ಎಸ್‌ಎನ್‌ಡಿಪಿ ಕೊಡಗು ಯೂನಿಯನ್ ಅಧ್ಯಕ್ಷ ವಿ.ಕೆ. ಲೋಕೇಶ್ ಅಭಿಪ್ರಾಯಪಟ್ಟಿದ್ದಾರೆ.

ಸಿದ್ದಾಪುರದ ಎಸ್‌ಎನ್‌ಡಿಪಿ ಸಭಾಂಗಣದಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರುಗಳ 122ನೇ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ಜಿಲ್ಲೆಯ ಪ್ರತಿಯೊಂದು ಗ್ರಾಮದಲ್ಲೂ ಎಸ್‌ಎನ್‌ಡಿಪಿ ಶಾಖೆಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಮಾಜದ ಜನರ ಸಂಕಷ್ಟಗಳಿಗೆ ಸ್ಪಂದಿಸಿ ನೆರವಾಗುತ್ತಿರುವುದು ಶ್ಲಾಘನೀಯ ಎಂದರು.ಬ್ರಹ್ಮರ್ಷಿ ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ ಸಂಬಂಧ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಆಚರಣೆ ಸಮಿತಿ ಸೇರಿದಂತೆ ವಿವಿಧ ಸಮಿತಿಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಯೂನಿಯನ್ ಉಪಾಧ್ಯಕ್ಷ ಆರ್. ರಾಜನ್, ಮಹಿಳಾ ಯೂನಿಯನ್ ಅಧ್ಯಕ್ಷೆ ರೀಶಾ, ಆಚರಣೆ ಸಮಿತಿ ಅಧ್ಯಕ್ಷ ಹರಿದಾಸ್, ಕಾರ್ಯದರ್ಶಿ ರೆಜಿತ್ ಕುಮಾರ್ ಮತ್ತಿತರರಿದ್ದರು.