ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದಾ ನುಡಿದಂತೆ ನಡೆದುಕೊಂಡಿದ್ದಾರೆ. ಅಧಿಕಾರಕ್ಕೆ ಅಂಟಿಕೊಳ್ಳದೆ, ಸಿದ್ಧಾಂತ ಎತ್ತಿ ಹಿಡಿಯುವ ಮೂಲಕ ದೇಶದಲ್ಲೇ ಮಾದರಿ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ ಎಂದು ಕಾಂಗ್ರೆಸ್ ರೈತ ಮುಖಂಡ ಬಿ.ಎಸ್. ಸಿಂಧೂರ ಶ್ಲಾಘಿಸಿದರು.

ಕನ್ನಡಪ್ರಭ ವಾರ್ತೆ ಜಮಖಂಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದಾ ನುಡಿದಂತೆ ನಡೆದುಕೊಂಡಿದ್ದಾರೆ. ಅಧಿಕಾರಕ್ಕೆ ಅಂಟಿಕೊಳ್ಳದೆ, ಸಿದ್ಧಾಂತ ಎತ್ತಿ ಹಿಡಿಯುವ ಮೂಲಕ ದೇಶದಲ್ಲೇ ಮಾದರಿ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ ಎಂದು ಕಾಂಗ್ರೆಸ್ ರೈತ ಮುಖಂಡ ಬಿ.ಎಸ್. ಸಿಂಧೂರ ಶ್ಲಾಘಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಣದೀಪ್‌ ಸಿಂಗ ಸುರ್ಜೇವಾಲಾ ಹಾಗೂ ಕೆ.ಸಿ. ವೇಣುಗೋಪಾಲ ಅವರ ಮಾತಿಗೆ ಗೌರವ ನೀಡಿ ಸಿದ್ದರಾಮಯ್ಯ ಅವರು ತ್ಯಾಗದ ನಿರ್ಧಾರ ತಗೆದುಕೊಂಡಿದ್ದಾರೆ. ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರ ಕಳೆದುಕೊಂಡಾಗ ಕಣ್ಣೀರು ಹಾಕಿ ಬಿಜೆಪಿಗೆ ಶಾಪ ಹಾಕಿದಂತೆ ಸಿದ್ದರಾಮಯ್ಯ ಅವರು ಮಾಡಿಲ್ಲ. ಬಿಜೆಪಿಯವರಿಗೆ ಅಧಿಕಾರದ ಹುಚ್ಚಿದ್ದರೆ, ಕಾಂಗ್ರೆಸ್‌ನವರಿಗೆ ಅಭಿವೃದ್ಧಿಯ ಹುಚ್ಚಿದೆ. ಸಿದ್ದರಾಮಯ್ಯ ಅವರು ನಾಡಿನ ಜನರ ನಾಡಿಮಿಡಿತ ಅರಿತುಕೊಂಡು ಬಡವರ ಅಭಿವೃದ್ಧಿಗಾಗಿ ಅನೇಕ ಜನಪರ ಯೋಜನೆ ಕಾರ್ಯರೂಪಕ್ಕೆ ತಂದಿದ್ದಾರೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗಲಿರುವ ಡಿ.ಕೆ. ಶಿವಕುಮಾರ್ ಅವರು ಉತ್ತರ ಕರ್ನಾಟಕದ ಮಹತ್ವಾಕಾಂಕ್ಷಿ ಕೃಷ್ಣಾ ಮೇಲ್ದಂಡೆ ಯೋಜನೆ ಯಶಸ್ವಿಯಾಗಿ ಪೂರ್ಣಗೊಳಿಸುತ್ತಾರೆ ಎನ್ನುವ ದೃಢ ವಿಶ್ವಾಸ ನಮಗಿದೆ ಎಂದು ಆಶಯ ವ್ಯಕ್ತಪಡಿಸಿದರು.