ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದ ಸಿದ್ದರಾಮಯ್ಯ: ಮಾಜಿ ಸಚಿವ ಎಚ್. ಆಂಜನೇಯ

| Published : Feb 14 2025, 12:30 AM IST

ಸಾರಾಂಶ

ತರೀಕೆರೆ, ಶ್ರಮಿಕ ಮತ್ತು ಹಿಂದುಳಿದ ವರ್ಗಕ್ಕೆ ಶಕ್ತಿ ತುಂಬಿದ್ದ ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ ರಾಮ್, ಮಾಜಿ ಪ್ರಧಾನಿ ಇಂದಿರಾಗಾಂಧಿಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪಂಚ ಗ್ಯಾರಂಟಿಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್. ಆಂಜನೇಯ ಹೇಳಿದರು.

ಲಿಂಗದಹಳ್ಳಿ ಗ್ರಾಮ ದೇವತೆ ಶ್ರೀ ಚಿಕ್ಕಮ್ಮ ದೇವಿಯ ನೂತನ ದೇವಾಲಯ ಉದ್ಘಾಟನಾ ಸಮಾರಂಭ

ಕನ್ನಡಪ್ರಭ ವಾರ್ತೆ, ತರೀಕೆರೆ

ಶ್ರಮಿಕ ಮತ್ತು ಹಿಂದುಳಿದ ವರ್ಗಕ್ಕೆ ಶಕ್ತಿ ತುಂಬಿದ್ದ ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ ರಾಮ್, ಮಾಜಿ ಪ್ರಧಾನಿ ಇಂದಿರಾಗಾಂಧಿಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪಂಚ ಗ್ಯಾರಂಟಿಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್. ಆಂಜನೇಯ ಹೇಳಿದರು.ಲಿಂಗದಹಳ್ಳಿ ಗ್ರಾಮ ದೇವತೆ ಶ್ರೀ ಚಿಕ್ಕಮ್ಮ ದೇವಿಯ ನೂತನ ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಗ್ಯಾರಂಟಿಗಳ ಮೂಲಕ ತಲುಪುವ ಹಣದ ಸದುಪಯೋಗದ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಹೋಗಬೇಕು. ದುಡಿಮೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಆರ್ಥಿಕವಾಗಿ ಸಬಲರಾಗಿ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿ ಎಂದುಸಲಹೆ ಮಾಡಿದರು.

ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ ತಾವು ಮೊದಲಬಾರಿ ಶಾಸಕರಾದ ಸಂದರ್ಭದಲ್ಲಿ ಮಾಜಿ ಸಚಿವರಾದ ಆಂಜನೇಯ ಅವರು ಸಮಾಜ ಕಲ್ಯಾಣ ಸಚಿವರಾಗಿ ತರೀಕೆರೆ ಕ್ಷೇತ್ರಕ್ಕೆ 2 ಮೊರಾರ್ಜಿ ವಸತಿ ಶಾಲೆಗಳು, ನೂರಾರು ಸಮುದಾಯ ಭವನಗಳು, ಗ್ರಾಮೀಣ ಭಾಗದ ರಸ್ತೆ, ಚರಂಡಿ, ಮುಂತಾದ ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಅನುದಾನ ನೀಡಿದ್ದರಿಂದ ಆ ಸಮಯದಲ್ಲಿ ಸಾವಿರಾರು ಕೋಟಿ ಅನುದಾನದ ಮೂಲಕ ನಡೆದ ಅಭಿವೃದ್ಧಿ ಕಾರ್ಯ ತರೀಕೆರೆ ಕ್ಷೇತ್ರದ ಜನರು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು. ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಮಾತನಾಡಿ ಚಿಕ್ಕಮಗಳೂರು ಜಿಲ್ಲೆಯವರಾದ ತಮ್ಮನ್ನು ಚಿತ್ರದುರ್ಗಕ್ಕೆ ಕರೆದೊಯ್ದು ಸಂಸದರಾಗಿ ಮಾಡಲು ಮುಖ್ಯ ಕಾರಣಕರ್ತರು ಮಾಜಿ ಸಚಿವ ಆಂಜನೇಯ. ಅವರು ಸಚಿವರಾಗಿದ್ದ ಸಂದರ್ಭದಲ್ಲಿ ಸಮಾಜ ಕಲ್ಯಾಣ ಖಾತೆಯನ್ನು ಅತ್ಯುತ್ತಮವಾಗಿ ನಿಭಾಯಿಸಿ ರಾಜ್ಯದ ಎಲ್ಲಾ ಸಮಾಜಕ್ಕೂ ಸಮಾನ ಅವಕಾಶನೀಡುವ ಮೂಲಕ ಅಭಿವೃದ್ಧಿಗೆ ಕೊಡುಗೆ ನೀಡಿದ ಮಹನೀಯರು ಎಂದರು. ಹುಣಸಘಟ್ಟ ಹಾಲುಸ್ವಾಮಿ ಮಠಾಧೀಶ ಶ್ರೀ ಗುರುಮೂರ್ತಿ ಶಿವಾಚಾರ್ಯಸ್ವಾಮೀಜಿ ಮಾತನಾಡಿ ಮಾನವ ಸಂಘ ಜೀವಿ ಯಾಗಿದ್ದು, ದೇವಸ್ಥಾನ ಮಠ ಮಂದಿರಗಳು ನೆಮ್ಮದಿ ನೀಡುವ ಸ್ಥಾನಗಳಾಗಿವೆ. ಭಕ್ತರು ದೇವಾಲಯಗಳಿಗೆ ತೆಗೆದು ಕೊಂಡು ಹೋಗುವ ಪೂಜಾ ಸಾಮಾಗ್ರಿಗಳು ದೇವರಿಗೆ ನೈವೇದ್ಯ ಮಾಡಿದ ನಂತರ ಪ್ರಸಾದ ರೂಪ ಪಡೆದುಕೊಳ್ಳುತ್ತವೆ ಎಂದು ತಿಳಿಸಿದರು. ಕೋಡಿಹಳ್ಳಿ ಆದಿ ಜಾಂಬವ ಮಠಾಧೀಶ ಶ್ರೀ ಷಡಾಕ್ಷರಿ ಮುನಿಸ್ವಾಮಿ, ತಾಪಂ ಮಾಜಿ ಅಧ್ಯಕ್ಷ ಬಿ.ಆರ್.ರವಿ, ದೇವಾಲಯ ಸಮಿತಿ ಅಧ್ಯಕ್ಷ ಕೆ. ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎನ್.ಜಿ ರಮೇಶ್, ಬೀರೂರು ದೇವರಾಜಣ್ಣ, ಗ್ರಾಪಂ ಅಧ್ಯಕ್ಷೆ, ರತ್ನಮ್ಮ, ಉಪಾಧ್ಯಕ್ಷೆ ಇಂದ್ರಮ್ಮ, ಪ್ರಧಾನ ಕಾರ್ಯದರ್ಶಿ ಅಣ್ಣಯ್ಯ, ಗ್ರಾಪಂ ಸದಸ್ಯ ಎಂ.ಕೆ ಚಂದ್ರಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಆರ್. ತಮ್ಮಯ್ಯ, ದೇವಾಲಯ ಸಮಿತಿ ಖಜಾಂಚಿ ರುದ್ರೇಶ್ ಪದಾಧಿಕಾರಿಗಳು, ವಿವಿಧ ಗ್ರಾಮಗಳ ಮುಖಂಡರು ಭಾಗವಹಿಸಿದ್ದರು.

13ಕೆಟಿಆರ್.ಕೆ.14ಃ

ತರೀಕೆರೆ ಸಮೀಪದ ಲಿಂಗದಹಳ್ಳಿಯಲ್ಲಿ ಗ್ರಾಮ ದೇವತೆ ಶ್ರೀ ಚಿಕ್ಕಮ್ಮ ದೇವಿ ನೂತನ ದೇವಾಲಯದ ಉದ್ಘಾಟನೆ ವೇಳೆ ನಡೆದ ಧಾರ್ಮಿಕ ಸಮಾರಂಭವನ್ನು ಮಾಜಿ ಸಚಿವ ಎಚ್. ಆಂಜನೇಯ, ಶಾಸಕ ಜಿ.ಎಚ್.ಶ್ರೀನಿವಾಸ್, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ. ದೇವಾಲಯ ಸಮಿತಿ ಅಧ್ಯಕ್ಷ ಕೆ. ಕುಮಾರ್, ಅಣ್ಣಯ್ಯ, ರುದ್ರೇಶ್ ಮತ್ತಿತರರು ಜ್ಯೋತಿ ಬೆಳೆಗಿಸುವ ಮೂಲಕ ಉದ್ಘಾಟಿಸಿದರು.