ಸಿಎಂ ಸಿದ್ದರಾಮಯ್ಯ 7ವರ್ಷ 239 ದಿನ ಪೂರೈಸಿದ ಹಿನ್ನಲೆಯಲ್ಲಿ ಮಾಜಿ ಸಚಿವ ವೆಂಕಟರಮಣಪ್ಪ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಪಕ್ಷದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಕನ್ನಡಪ್ರಭ ವಾರ್ತೆ ಪಾವಗಡ

ಈ ವೇಳೆ ಮಾತನಾಡಿದ ಮುಖಂಡರು, ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಸಿಎಂ ಆಗಿ ಸುದೀರ್ಘವಧಿ ಸೇವೆ ಸಲ್ಲಿಸಿ ಇತಿಹಾಸ ಸೃಷ್ಟಿಸಿರುವ ಅವರ ಕಾರ್ಯ ವೈಖರಿ ಮೆಚ್ಚಿ ಜನ ಬಹುಮತ ನೀಡಿದ್ದಾರೆ ಎಂದು ಹೇಳಿದರು. ಇನ್ನೂ ಪಟ್ಟಣದ ಎಸ್‌ಎಸ್‌ಕೆ ವೃತ್ತದಲ್ಲಿ ಕೇಕ್ ಕತ್ತರಿಸಿ ಸಿಹಿ ಹಂಚಲಾಯಿತು. ಅದೇ ರೀತಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ತುಮಕೂರು ರಸ್ತೆ ಮಾರ್ಗದಲಿರುವ ಕನಕದಾಸ ಪುತ್ತಳಿಗೆ ಮಾಲಾರ್ಪಣೆ ನೆರೆವೇರಿಸಲಾಯಿತು. ಈ ವೇಳೆ ಪುರಸಭಾ ಅಧ್ಯಕ್ಷ ಸುದೇಶ್ ಬಾಬು, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಾಂಜಿನಪ್ಪ, ಮಹಿಳಾ ಅಧ್ಯಕ್ಷೆ ಸುಮಾ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಶೇಷಗಿರಿ, ಕಾಳಿದಾಸ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಮೈಲಾರಪ್ಪ, ಗುತ್ತಿಗೆದಾರರಾದ ಆರ್.ಎ. ಹನುಮಂತರಾಯಪ್ಪ, ಈರಾರೆಡ್ಡಿ, ತಾಪಂ ಮಾಜಿ ಅಧ್ಯಕ್ಷ ಆದಿ ನಾರಾಯಣಪ್ಪ, ಮಾಜಿ ಉಪಾಧ್ಯಕ್ಷರಾದ ಐ.ಜಿ.ನಾಗರಾಜ್,ವೇಲುರಾಜು ಇತರರಿದ್ದರು.