ಸರ್ವ ಸಮಾಜಗಳ ಅಭಿವೃದ್ಧಿಗೆ ಸಿದ್ದರಾಮಯ್ಯ ಸರ್ಕಾರ ಶ್ರಮ

| Published : Nov 09 2024, 01:01 AM IST

ಸಾರಾಂಶ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸರ್ವ ಸಮಾಜಗಳ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ನೀಡಿ, ಬಡವರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ಹೇಳಿದ್ದಾರೆ.

- ರಸ್ತೆ ಅಭಿವೃದ್ಧಿ, ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಶಾಸಕ ಬಿ.ದೇವೇಂದ್ರಪ್ಪ ಅಭಿಮತ- - - ಕನ್ನಡಪ್ರಭ ವಾರ್ತೆ ಜಗಳೂರು

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸರ್ವ ಸಮಾಜಗಳ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ನೀಡಿ, ಬಡವರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿ ಶುಕ್ರುವಾರ 20೨೩- 20೨೪ನೇ ಸಾಲಿನ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಸಮಗ್ರ ಅಭಿವೃದ್ಧಿ ಹಾಗೂ ಮೂಲಸೌಕರ್ಯಗಳನ್ನು ಒದಗಿಸುವ ಸಲುವಾಗಿ ₹೨ ಕೋಟಿ ವೆಚ್ಚದಲ್ಲಿ ಪಟ್ಟಣದ ಸಾರ್ವಜನಿಕರ ಆಸ್ಪತ್ರೆಯಿಂದ ಉಜ್ಜಿನಿ ರಸ್ತೆವರೆಗೆ ರಸ್ತೆ ಅಭಿವೃದ್ಧಿ, ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಹಳೇ ತಾಲೂಕು ಕಚೇರಿ ಕಟ್ಟಡ ನೆಲಸಮಗೊಳಿಸಿ ಹೊಸ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ₹೧೦ ಕೋಟಿ, ಪಟ್ಟಣದ ಅಭಿವೃದ್ದಿಗಾಗಿ ₹೮ ಕೋಟಿ ಸೇರಿದಂತೆ ಇತರೆ ಪಟ್ಟಣ ಅಭಿವೃದ್ದಿ ಕಾಮಗಾರಿಗಳಿಗೆ ಮೊದಲ ಹಂತದಲ್ಲಿ ಸುಮಾರು ₹೨೦ ಕೋಟಿ ಅನುದಾನ ನೀಡಿರುವ ನಮ್ಮದೇ ಪಕ್ಷದ ರಾಜ್ಯದಲ್ಲಿನ ಆಡಳಿತಾರೂಢ ಸರ್ಕಾರದ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ವಿವಿಧ ಇಲಾಖೆ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಅಲ್ಪಸಂಖ್ಯಾತರ ಸರ್ವತೋಮುಖ ಅಭಿವೃದ್ಧಿಗಾಗಿ ತಾಲೂಕಿಗೆ ₹೫ ಕೋಟಿ ನೀಡಿದೆ. ಕೆಆರ್‌ಡಿಎಲ್‌ರವರು ₹೨ ಕೋಟಿ ವೆಚ್ಚದಲ್ಲಿ ಕೆಲಸ ಮಾಡುತ್ತಿದ್ದಾರೆ. ಕಾಮಗಾರಿಯನ್ನು ಉತ್ತಮವಾಗಿ ನಿರ್ವಹಿಸಬೇಕು. ಕಳಪೆ ಕಾಮಗಾರಿ ಎಂಬ ದೂರು ಬಂದರೆ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ರಸ್ತೆ ನಿರ್ಮಾಣ ಮಾಡಬೇಕಾದರೆ ಸಾರ್ವಜನಿಕರು ಸಹಕರಿಸಬೇಕು. ₹೨ ಕೋಟಿ ವೆಚ್ಚದಲ್ಲಿ ವಾರ್ಡ್‌ಗಳಲ್ಲಿ ಅಭಿವೃದ್ಧಿ ಕೆಲಸ ಮಾಡಲಾಗುವುದು. ₹೧ ಕೋಟಿ ವೆಚ್ಚದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡಲಾಗುವುದು ಎಂದು ವಿವರಿಸಿದರು.

ಈ ಸಂದರ್ಭ ಪ.ಪಂ. ಅಧ್ಯಕ್ಷ ನವೀನ್ ಕುಮಾರ್, ಕೆಪಿಸಿಸಿ ಎಸ್‌.ಟಿ. ಘಟಕದ ರಾಜ್ಯ ಮುಖಂಡ ಕೆ.ಪಿ. ಪಾಲಯ್ಯ, ಕೆಪಿಸಿಸಿ ಎಸ್‌.ಟಿ. ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೀರ್ತಿಕುಮಾರ್, ಮುಖ್ಯಾಧಿಕಾರಿ ಲೋಕ್ಯಾ ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮ್ಮದ್, ಸದಸ್ಯರಾದ ಆರ್.ತಿಪ್ಪೇಸ್ವಾಮಿ, ಶಕೀಲ್‌ ಅಹಮ್ಮದ್, ಪಾಪಲಿಂಗಪ್ಪ, ರಮೇಶ್, ಮಹಮ್ಮದ್ ಆಲಿ, ಲುಕ್ಮಾನ್ ಖಾನ್, ಓಬಳೇಶ್, ಗೌರಿಪುರ ಶಿವಣ್ಣ, ಮಂಜುನಾಥ್, ದೇವರಾಜ್, ನಾಮನಿರ್ದೇಶಿತ ಸದಸ್ಯರಾದ ಕುರಿ ಜಯಣ್ಣ, ಶಾಂತಪ್ಪ, ತಾನೋಜಿ ಗೋಸಾಯಿ, ಅಲ್ಪ ಸಂಖ್ಯಾತ ಇಲಾಖೆ ಜಿಲ್ಲಾ ಅಧಿಕಾರಿ ಶಿವಕುಮಾರ್, ಎಇಇ ಭಾರತಿ, ಬಿ.ಮಹೇಶ್ವರಪ್ಪ, ಮಹಮ್ಮದ್ ಗೌಸ್, ಆಪ್ತ ಸಹಾಯಕ ಮಧು ಇತರರು ಇದ್ದರು.

- - - -08ಜೆ.ಜಿ.ಎಲ್.1:

ಜಗಳೂರು ಪಟ್ಟಣದ ಸಾರ್ವಜನಿಕರ ಆಸ್ಪತ್ರೆಯಿಂದ ಉಜ್ಜಿನಿ ರಸ್ತೆಯವರೆಗೆ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಬಿ ದೇವೇಂದ್ರಪ್ಪ ಭೂಮಿ ಪೂಜೆ ನೆರವೇರಿಸಿದರು.