ಹಿಂದೂ ಹೆಣ್ಣು ಮಕ್ಕಳ ಹತ್ಯೆಗೆ ಸಿದ್ದರಾಮಯ್ಯ ಸರ್ಕಾರ ಕಾರಣ: ಚಂದ್ರಶೇಖರ್

| Published : Apr 23 2024, 12:51 AM IST

ಹಿಂದೂ ಹೆಣ್ಣು ಮಕ್ಕಳ ಹತ್ಯೆಗೆ ಸಿದ್ದರಾಮಯ್ಯ ಸರ್ಕಾರ ಕಾರಣ: ಚಂದ್ರಶೇಖರ್
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಗಳಿಗೆ ಉಳಿಗಾಲವಿಲ್ಲದಂತಾಗಿದೆ. ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಮತಕ್ಕಾಗಿ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ವಕ್ತಾರ ಚಂದ್ರಶೇಖರ್ ಆರೋಪಿಸಿದರು.

ಕನ್ನಡಪ್ರಭ ವಾರ್ತೆ ತುರುವೇಕೆರೆ

ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಗಳಿಗೆ ಉಳಿಗಾಲವಿಲ್ಲದಂತಾಗಿದೆ. ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಮತಕ್ಕಾಗಿ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ವಕ್ತಾರ ಚಂದ್ರಶೇಖರ್ ಆರೋಪಿಸಿದರು.

ಪಟ್ಟಣದಲ್ಲಿ ಎಬಿವಿಪಿ ಹಾಗೂ ಬಿಜೆಪಿ ವತಿಯಿಂದ ಆಯೋಜಿಸಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಭೀಕರ ಹತ್ಯೆಯನ್ನು ಖಂಡಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಹಾದಿಗಳಿಗೆ ಬೆಂಬಲ ನೀಡುತ್ತಿದ್ದಾರೆ. ಕೊಲೆಗಾರ ಆರೋಪಿ ಫಯಾಜ್ ಲವ್ ಮಾಡುವಂತೆ ನಿರಂತರವಾಗಿ ತೊಂದರೆ ನೀಡುತ್ತಿದ್ದ. ವಿದ್ಯಾರ್ಥಿನಿ ಒಪ್ಪದಿದ್ದಾಗ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಆದರೆ ಈ ದರಿದ್ರ ಸರ್ಕಾರ ಫಯಾಜ್ ಮಾಡಿದ ಕೊಲೆಯನ್ನು ಸಾಮಾನ್ಯ ಘಟನೆ ಎಂದು ಬಣ್ಣಿಸಲು ಹೊರಟಿದೆ ಎಂದರು.

ಹಿಂದೂ ಹೆಣ್ಣು ಮಕ್ಕಳ ಹತ್ಯೆಗೆ ಸಿದ್ದರಾಮಯ್ಯರ ಸರ್ಕಾರವೇ ನೇರ ಕಾರಣವಾಗಿದೆ. ಹಿಂದೂ ಧರ್ಮ ನಾಶಕ್ಕೆ ಜಿಹಾದಿಗಳಿಗೆ ಬೆಂಬಲ ನೀಡುತ್ತಿದೆ. ಜಿಹಾದಿಗಳು ಹಿಂದೂ ಅಮಾಯಕ ಹೆಣ್ಣು ಮಕ್ಕಳನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಕೂಡಲೇ ಕೊಲೆಗಾರನನ್ನು ಗಲ್ಲಿಗೆ ಏರಿಸಬೇಕು. ಕೇಸ್‌ನ್ನು ಸಿಬಿಐಗೆವಹಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆ ಮುನ್ನ ಬಾಣಸಂದ್ರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರ ಹಾಗೂ ಜಿಹಾದಿಗಳ ವಿರುದ್ದ ಘೋಷಣೆ ಕೂಗಲಾಯಿತು. ನಂತರ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಮಾಜಿ ಶಾಸಕ ಮಸಾಲ ಜಯರಾಮ್, ಬಿಜೆಪಿ ಮಂಡಲ ಅಧ್ಯಕ್ಷ ಮುತ್ತಣ್ಣ, ಮುಖಂಡರಾದ ವಿ.ಬಿ.ಸುರೇಶ್, ನವೀನ್‌ಬಾಬು, ಜಗದೀಶ್, ವೆಂಕಟೇಶ್, ಮಾಚೇನಹಳ್ಳಿ ಅಶ್ವಿನ್, ಶ್ರೀಹರಿ, ರಾಕೇಂದ್, ಪ್ರಕಾಶ್, ಭರತ್, ಸಿದ್ದಪ್ಪಾಜಿ, ಪ್ರಸಾದ್, ಅಕ್ಷಯ್, ಪಾಂಡು, ಭರತ್, ನಾಗರತ್ನಮ್ಮ, ಆಶಾ, ಶಿವಗಂಗಮ್ಮ, ಗೀತಾ ಸುರೇಶ್, ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಎಸ್.ಎಸ್.ಜಯಂತ್, ಗಣೇಶ್ ಸೇರಿದಂತೆ ಪದಾದಿಕಾರಿಗಳು ಕಾಲೇಜು ವಿದ್ಯಾರ್ಥಿಗಳು ಇದ್ದರು.