ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ಸಂಪೂರ್ಣ ದಿವಾಳಿಯಾಗಿದೆ. ಹಲವು ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರು ವ್ಯಕ್ತಿಯ ಶಿಸ್ತು ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಕುಡಚಿ ಆರೋಪಿಸಿದರು.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್‌ನಲ್ಲಿ 13,500 ಕೋಟಿ ಸಾಲವನ್ನು ತೋರಿಸಿದ್ದಾರೆ. ಎರಡನೇ ಬಜೆಟ್‌ನಲ್ಲಿ 25,000 ಕೋಟಿ ಸಾಲವನ್ನು ತೋರಿಸಿದ್ದಾರೆ. ಮೂರನೇ ಬಾರಿಯೂ ಕೂಡ ಈ ಸಾಲದ ಮಿತಿ ಹೆಚ್ಚಳವಾಗುವ ಸಾಧ್ಯತೆ ಇದೆ. ಇಡೀ ರಾಜ್ಯ ಸರ್ಕಾರ ಸಾಲದ ಸುಳಿಯಲ್ಲಿ ಸಿಲುಕಿದೆ ಎಂದು ದೂರಿದರು
ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯದ ಮಹಿಳೆಯರಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣವನ್ನು ಕಲ್ಪಿಸಿಕೊಟ್ಟಿರುವ ಸಿದ್ದರಾಮಯ್ಯನ ಕ್ರಮ ಸ್ವಾಗತ. ಆದರೆ ಕೆಎಸ್‌ಆರ್‌ಟಿಸಿ ನಿಗಮಗಳಿಗೆ 520 ಕೋಟಿ ಬಾಕಿ ಹಣ ಕೊಡಬೇಕಾಗಿದೆ. ರಾಜ್ಯದಲ್ಲಿ ಸಂಚರಿಸುತ್ತಿರುವ ಶೇ.80ರಷ್ಟು ಬಸ್‌ಗಳು 15 ಲಕ್ಷ ಕಿಲೋಮೀಟರ್ ಜಾಸ್ತಿ ಕ್ರಮಿಸಿದೆ. ಈ ಎಲ್ಲಾ ಬಸ್‌ಗಳು ದುರಸ್ತಿ ಹಂತ ದಲ್ಲಿವೆ ಎಂದು ಹೇಳಿದರು.ಕೆಐಎಡಿಬಿ ನಿವೇಶನ ಪಡೆದಿರುವ ಸಚಿವ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ನಾವು ಸಲ್ಲಿಸುವ ಸಂದರ್ಭದಲ್ಲಿ ನಾಲ್ಕು ಕೋಟಿ ಸಾಲವನ್ನು ತೋರಿಸಿದ್ದಾರೆ. ಅದೇ ವ್ಯಕ್ತಿಗೆ ಕೆಐಎಡಿಬಿ ನಿವೇಶನವನ್ನು ಮಂಜೂರು ಮಾಡಿದ್ದಾರೆ. ಆರೋಗ್ಯ ಇಲಾಖೆ ಯಲ್ಲಿಯೂ ಕೂಡ ವ್ಯಾಪಕ ಭ್ರಷ್ಟಾಚಾರ ವ್ಯಾಪಿಸಿದೆ. ಕಾರ್ಮಿಕ ಇಲಾಖೆಯಲ್ಲಿ ಸಂತೋಷ್ ಲಾಡ್ ಅವರು ತಪಾಸಣೆ ಮಾಡದೆ ಕಾರ್ಮಿಕರ ಕಲ್ಯಾಣ ನಿಧಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಪ್ರಮುಖರಾದ ಎಸ್ ದತ್ತಾತ್ರಿ, ಜ್ಞಾನೇಶ್ವರ್, ಕೆ.ಜಿ.ಕುಮಾರಸ್ವಾಮಿ ಉಪಸ್ಥಿತರಿದ್ದರು.ವಿಜಯೇಂದ್ರ ಯಶಸ್ವಿ ರಾಜ್ಯಾಧ್ಯಕ್ಷಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಯಶಸ್ವಿ ರಾಜ್ಯಾಧ್ಯಕ್ಷರಾಗಿದ್ದಾರೆ. ಸದನದ ಒಳಗೆ ಹಾಗೂ ಹೊರಗೆ ರಾಜ್ಯ ಸರ್ಕಾರದ ಕಿವಿ ಹಿಂಡುವ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸಿದ್ದಾರೆ. ಪ್ರಭಾವಿ ರಾಜಕಾರಣಿಯಾಗಿ ಹೊರಹೊಮ್ಮಿರುವ ವಿಜಯೇಂದ್ರ ಪಕ್ಷ ಕೈಗೊಂಡಿರುವ ಸದಸ್ಯತ್ವ ಅಭಿಯಾನವನ್ನು ಸ್ವತಃ ಖುದ್ದಾಗಿ ಪರಿಶೀಲನೆ ಮಾಡುತ್ತಿರುವುದು ಅವರ ಕಾರ್ಯವೈಖರಿಗೆ ಒಂದು ನಿದರ್ಶನ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಕುಡಚಿ ಅಭಿಪ್ರಾಯಪಟ್ಟರು.