ಸಾರಾಂಶ
ಜಾತಿ ಸಮೀಕ್ಷೆ ಹೆಸರಿನಲ್ಲಿ ವಿವಿಧ ಜನಾಂಗಗಳನ್ನು ವಿಭಜಿಸುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ,
ಕೊಳ್ಳೇಗಾಲ: ಜಾತಿ ಸಮೀಕ್ಷೆ ಹೆಸರಿನಲ್ಲಿ ವಿವಿಧ ಜನಾಂಗಗಳನ್ನು ವಿಭಜಿಸುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ, ಅವರ ಮಾತಿನ ದಾಟಿ ನಿಜಕ್ಕೂ ಘನತೆವೆತ್ತ ಮುಖ್ಯಮಂತ್ರಿ ಸ್ಥಾನಕ್ಕೆ ತರವಲ್ಲ. ಆ ಸ್ಥಾನಕ್ಕೆ ಗೌರವ ತರುವಂತದ್ದಾಗಿಲ್ಲ ಎಂದು ಸಂಸದ ಜಗದೀಶ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಮಾನಸ ಶಿಕ್ಷಣ ಸಂಸ್ಥೆಯಲ್ಲಿ ಅಭಿನಂದನೆ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸ್ಥಾನದಲ್ಲಿರುವರು ಎಲ್ಲರೊಂದಿಗೆ ಗೌರವಯುತವಾಗಿ ವರ್ತಿಸಬೇಕು. ಒಬ್ಬ ಲೋಕಸಭಾ ಸದಸ್ಯರೊಂದಿಗೆ ಲಘುವಾಗಿ ಮಾತನಾಡುವುದು ಸಮಂಜಸವಲ್ಲ. ಸಿದ್ದರಾಮಯ್ಯ ಅವರ ಶೈಲಿಯಲ್ಲಿ ಮಾತನಾಡುವುದು ಮುಖ್ಯಮಂತ್ರಿಯ ಸ್ಥಾನಕ್ಕೆ ಯೋಗ್ಯವಲ್ಲ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭ್ರಷ್ಟಾಚಾರ ಹೆಚ್ಚಾಗಿದೆ ಎಂದರು. ಮಾಜಿ ಸಚಿವ ಎನ್. ಮಹೇಶ್, ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್, ಮಾಜಿ ಶಾಸಕ ಎಸ್.ಬಾಲರಾಜು, ಡಾ.ದತ್ತೇಶ್ ಕುಮಾರ್, ಸಿದ್ದಪ್ಪಾಜಿ, ಚಿಂತು ಪರಮೇಶ್, ಚಂದು, ಮೂತಿ೯ ಇನ್ನಿತರಿದ್ದರು.
;Resize=(128,128))
;Resize=(128,128))