ಸಿಎಂ ಹುದ್ದೆಗೆ ಸಿದ್ದರಾಮಯ್ಯ ಒಬ್ಬರೇ ಸಮರ್ಥ ವ್ಯಕ್ತಿ: ಜಯದೇವ ನಾಯ್ಕ

| Published : Jul 01 2024, 01:47 AM IST / Updated: Jul 01 2024, 01:48 AM IST

ಸಿಎಂ ಹುದ್ದೆಗೆ ಸಿದ್ದರಾಮಯ್ಯ ಒಬ್ಬರೇ ಸಮರ್ಥ ವ್ಯಕ್ತಿ: ಜಯದೇವ ನಾಯ್ಕ
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿ ಆಗಬೇಕೆಂಬ ಆಸೆ ಸಹಜವಾಗಿಯೇ ಎಲ್ಲರಲ್ಲೂ ಇರುತ್ತದೆ. ಆದರೆ, ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ಒಬ್ಬರೇ ಫಿಟ್‌ ಇರುವುದು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನೂತನ ಅಧ್ಯಕ್ಷ, ಹಿರಿಯ ವಕೀಲ ಎನ್.ಜಯದೇವ ನಾಯ್ಕ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ, ದಾವಣಗೆರೆ, ಜೂ.30

ಮುಖ್ಯಮಂತ್ರಿ ಆಗಬೇಕೆಂಬ ಆಸೆ ಸಹಜವಾಗಿಯೇ ಎಲ್ಲರಲ್ಲೂ ಇರುತ್ತದೆ. ಆದರೆ, ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ಒಬ್ಬರೇ ಫಿಟ್‌ ಇರುವುದು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನೂತನ ಅಧ್ಯಕ್ಷ, ಹಿರಿಯ ವಕೀಲ ಎನ್.ಜಯದೇವ ನಾಯ್ಕ ಹೇಳಿದರು.

ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ನಂತರ ನಗರಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ಒಬ್ಬರ ಫಿಟ್‌ ಇದ್ದು, ಸಮರ್ಥರೂ ಆಗಿದ್ದಾರೆ. ಬಡವರ ಹಸಿವನ್ನು ನೀಗಿಸಿದವರು ಸಿದ್ದರಾಮಯ್ಯ. ರಾಜ್ಯದಲ್ಲಿ ಸಮರ್ಥವಾಗಿ ಆಡಳಿತ ನಡೆಸುತ್ತಿದ್ದಾರೆ. ಉತ್ತಮ ಆಡಳಿತವನ್ನೂ ಜನರಿಗೆ ನೀಡುತ್ತಿದ್ದಾರೆ. ಬಡವರು, ದಲಿತರು, ಹಿಂದುಳಿದವರು, ಶೋಷಿತರ ಧ್ವನಿಯಾಗಿ ಸಿದ್ದರಾಮಯ್ಯ ಇದ್ದಾರೆ ಎಂದು ತಿಳಿಸಿದರು.

ಸಿಎಂ ಬದಲಾವಣೆಯ ವಿಚಾರವು ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು. ಸಿದ್ದರಾಮಯ್ಯ ಸಮರ್ಥವಾಗಿದ್ದಾರೆ. ಉತ್ತಮ ಆಡಳಿತವನ್ನೇ ನಡೆಸುತ್ತಿದ್ದಾರೆ. ಹಾಗಾಗಿ, ಸಿಎಂ ಬದಲಾವಣೆ ಅಷ್ಟು ಸುಲಭವೂ ಅಲ್ಲ ಎಂದು ಜಯದೇವ ನಾಯ್ಕ ಹೇಳಿದರು.

- - - -30ಕೆಡಿವಿಜಿ3:

ಜಯದೇವ ನಾಯ್ಕ