ಸಾರಾಂಶ
ಬೆಂಗಳೂರು ಟು ಮೈಸೂರು ಪಾದಯಾತ್ರೆ ಬಿಜೆಪಿ- ಜೆಡಿಎಸ್ ಕುತಂತ್ರದ್ದಾಗಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಜನಪ್ರಿಯ ಯೋಜನೆಗಳ ನೀಡಿದ ಸಿದ್ದರಾಮಯ್ಯರ ಇಮೇಜಿಗೆ ಧಕ್ಕೆ ತರಲು ಷಡ್ಯಂತ್ರ ರೂಪಿಸಿರುವುದು ಗೊತ್ತಾಗುತ್ತದೆ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಕಿಡಿಕಾರಿದ್ದಾರೆ.
ಕನ್ನಡಪ್ರಭ ವಾರ್ತೆ, ದಾವಣಗೆರೆ
ಬೆಂಗಳೂರು ಟು ಮೈಸೂರು ಪಾದಯಾತ್ರೆ ಬಿಜೆಪಿ- ಜೆಡಿಎಸ್ ಕುತಂತ್ರದ್ದಾಗಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಜನಪ್ರಿಯ ಯೋಜನೆಗಳ ನೀಡಿದ ಸಿದ್ದರಾಮಯ್ಯರ ಇಮೇಜಿಗೆ ಧಕ್ಕೆ ತರಲು ಷಡ್ಯಂತ್ರ ರೂಪಿಸಿರುವುದು ಗೊತ್ತಾಗುತ್ತದೆ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಕಿಡಿಕಾರಿದ್ದಾರೆ.ಮುಖ್ಯಮಂತ್ರಿಗಳಾದ್ದಾಗ ಬಿ.ಎಸ್.ಯಡಿಯೂರಪ್ಪ ಭ್ರಷ್ಟಾಚಾರ ಆರೋಪದಲ್ಲಿ ಜೈಲಿಗೆ ಹೋಗಿ ಬಂದಿದ್ದನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮರೆತಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಸಹ ₹150 ಕೋಟಿ ಗಣಿ ಹಗರಣದ ಆರೋಪ ಬಂದಿತ್ತು. ಆಗ ಯಡಿಯೂರಪ್ಪ, ಕುಮಾರಸ್ವಾಮಿ ರಾಜೀನಾಮೆ ನೀಡಿದ್ದರಾ ಎಂದು ಪ್ರಶ್ನಿಸಿದ್ದಾರೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರ ಪಾತ್ರ ಇಲ್ಲವೆಂದು ಗೊತ್ತಿದ್ದರೂ ಹೆಸರಿಗೆ ಕಳಂಕ ತರಲು ಷಡ್ಯಂತ್ರ ರೂಪಿಸಿರುವುದು ಸ್ಪಷ್ಟವಾಗುತ್ತಿದೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ನೇರವಾಗಿ ಎದುರಿಸಲು ಸಾಧ್ಯವಾಗುತ್ತಿಲ್ಲ. ಎಚ್.ಡಿ. ಕುಮಾರಸ್ವಾಮಿ ಅಣ್ಣ ಎಚ್.ಡಿ.ರೇವಣ್ಣ, ಭವಾನಿ ರೇವಣ್ಮ ವಿರುದ್ಧ ಮಹಿಳೆ ಕಿಡ್ನಾಪ್ ಕೇಸ್ ಇದೆ. ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣರ ಸಾಧನೆಯನ್ನು ರಾಜ್ಯದ ಜನತೆ ನೋಡಿದ್ದಾರೆ ಎಂದಿದ್ದಾರೆ.ಸಂತ್ರಸ್ತರ ಪರ ನಿಲ್ಲಬೇಕಾದ ಕುಮಾರಸ್ವಾಮಿ ಯಾವ ರೀತಿ ಮಾತನಾಡುತ್ತಿದ್ದಾರೆ? ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣರಿಂದ ತೊಂದರೆಗೆ ಒಳಗಾದವರ ಭೇಟಿ ಯಾಕೆ ಮಾಡಿಲ್ಲ? ಹಾಸನದಲ್ಲಿ ಏನೇನೆಲ್ಲಾ ನಡೆದಿದೆ ಎಂಬ ಕುರಿತಂತೆ ಪ್ರತಿಕ್ರಿಯೆ ನೀಡುತ್ತಿಲ್ಲ. ತನ್ನ ಅಣ್ಣನ ಕುಟುಂಬದವರ ವಿರುದ್ಧ ಕ್ರಮಕ್ಕೆ ಇದೇ ರೀತಿಯಲ್ಲಿ ಹಾಸನದಲ್ಲಿ ಕುಮಾರಸ್ವಾಮಿ ಪಾದಯಾತ್ರೆ ನಡೆಸಲಿ. ಆಗಲಾದರೂ ಜನರು ಕುಮಾರಸ್ವಾಮಿ ನಿಲುವು ಬೆಂಬಲಿಸಬಹುದು ಎಂದು ಸೈಯದ್ ಖಾಲಿದ್ ಲೇವಡಿ ಮಾಡಿದ್ದಾರೆ.
- - - -5ಕೆಡಿವಿಜಿ31ಃ: ಸೈಯದ್ ಖಾಲಿದ್ ಅಹ್ಮದ್