ವಿಕಸಿತ ಭಾರತ್ ಯಾತ್ರೆಗೆ ಸಿದ್ದರಾಮಯ್ಯ ಅಡ್ಡಿ: ಶೋಭಾ ಕಿಡಿ

| Published : Dec 01 2023, 12:45 AM IST

ವಿಕಸಿತ ಭಾರತ್ ಯಾತ್ರೆಗೆ ಸಿದ್ದರಾಮಯ್ಯ ಅಡ್ಡಿ: ಶೋಭಾ ಕಿಡಿ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದ ಮೂಲೆಮೂಲೆಗೆ ತಲುಪಿಸಲು ಸಿದ್ದರಾಮಯ್ಯನವರ ಅವಶ್ಯಕತೆ ಇಲ್ಲ. ಜನರೇ ನರೇಂದ್ರ ಮೋದಿ ಅವರು ಜನತೆಗಾಗಿ ರೂಪಿಸಿರುವ ಯೋಜನೆಗಳ ಮಾಹಿತಿಯನ್ನು ಎಲ್ಲ ಮನೆಮನಗಳಿಗೆ ತಲುಪಿಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಗುರುವಾರ ಅಂಬಲಪಾಡಿ ಪಂಚಾಯಿತಿನಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಅಭಿಯಾನಕ್ಕೆ ರಾಜ್ಯ ಸರ್ಕಾರದ ಅಸಹಕಾರದ ಕುರಿತು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಅನುದಾನ ಪಡೆಯುವ ರಾಜ್ಯ ಸರ್ಕಾರ, ಕೇಂದ್ರದಿಂದ ಜನತೆಗೆ ದೊರಕುವ ಸೌಲಭ್ಯಗಳನ್ನು ಜನರಿಗೆ ತಲುಪಿಸಲು ಸಾಥ್ ನೀಡುತ್ತಿಲ್ಲ. ಇದು ದುರದೃಷ್ಟಕರ ಎಂದು ಶೋಭಾ, ನ.15 ರಂದು ಸಿದ್ದರಾಮಯ್ಯ, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಮತ್ತು ಜಿಪಂ ಸಿಇಓ ಅವರಿಗೆ ಮೌಖಿಕವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಸೂಚಿಸಿದ್ದಾರೆ. ಹೀಗಾಗಿ ಯಾವುದೇ ಅಧಿಕಾರಿಗಳು ಭಾಗವಹಿಸಿಲ್ಲ. ಇದು ಬಿಜೆಪಿ ಕಾರ್ಯಕ್ರಮವಲ್ಲ, ಕೇಂದ್ರ ಸರ್ಕಾರದ ಕಾರ್ಯಕ್ರಮ, ಇದಕ್ಕೆ ರಾಜ್ಯ ಸರ್ಕಾರ ನಡವಳಿಕೆ ಅವರಿಗೆ ಜನರ ಬಗ್ಗೆ ಇರುವ ಕಾಳಜಿಯನ್ನು ತೋರಿಸಿದೆ ಎಂದು ಆರೋಪಿಸಿದರು.

ಶಾಸಕರಾದ ಯಶಪಾಲ್ ಸುವರ್ಣ, ಗುರುರಾಜ್ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ, ಕೆನರಾ ಬ್ಯಾಂಕ್ ನ ಪ್ರಧಾನ ವ್ಯವಸ್ಥಾಪಕ ಪುರಂದರ, ಅಂಬಲಪಾಡಿ ಪಂಚಾಯಿತಿ ಅಧ್ಯಕ್ಷೆ ಸುಜಾತ ಶೆಟ್ಟಿ, ಉಪಾಧ್ಯಕ್ಷೆ ಸುಜಾತ ಸುಧಾಕರ್ ಇದ್ದರು.

ಲೀಡ್ ಬ್ಯಾಂಕಿನ ವ್ಯವಸ್ಥಾಪಕ ಪಿ.ಎಂ.ಪಿಂಜಾರ ಸ್ವಾಗತಿಸಿದರು. ಅಂಬಲಪಾಡಿ ಪಂಚಾಯಿತಿ ಪಿಡಿಓ ವಸಂತಿ ನಿರೂಪಿಸಿದರು.

ಸೇರಿದ್ದ ಜನರು, ಪ್ರಧಾನಿ ನರೇಂದ್ರ ಮೋದಿಯವರ ಸಂದೇಶವನ್ನು ಎಲ್.ಡಿ.ಪರದೆಯ ಮೂಲಕ ವೀಕ್ಷಿಸಿದರು. ಈ ಯಾತ್ರೆಯೂ ದಿನಕ್ಕೆರಡು ಗ್ರಾಪಂಗಳಂತೆ 75 ದಿನಗಳ ಕಾಲ ಜಿಲ್ಲೆಯಾದ್ಯಂತ ನಡೆಯಲಿದೆ.