ಸಾರಾಂಶ
ಕನ್ನಡಪ್ರಭ ವಾರ್ತೆ ರಾಮದುರ್ಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊದಲಿನಂತಿಲ್ಲ. ತತ್ವ ಸಿದ್ಧಾಂತ ಕೂಡ ಉಳಿದಿಲ್ಲ. ಬೆಂಗಳೂರಿನ ವ್ಯಕ್ತಿಗಳ ಕೈಯಲ್ಲಿ ಸಿಕ್ಕ ಸಿದ್ದರಾಮಯ್ಯನವರು ಏನೂ ಮಾತನಾಡುವ ಸ್ಥಿತಿಯಲ್ಲಿಲ್ಲ. ವೈಯಕ್ತಿಕವಾಗಿ ಇವತ್ತಿಗೂ ಸಿದ್ದರಾಮಯ್ಯನವರೇ ನಮ್ಮ ನಾಯಕರು, ನಾನು ಅವರ ಅಭಿಮಾನಿಯಾಗಿದ್ದೇನೆ ಎಂದು ಮಾಜಿ ಸಚಿವ ರಮೇಶ ಜಾರಕಿಹೋಳಿ ಹೇಳಿದರು.
ಕನ್ನಡಪ್ರಭ ವಾರ್ತೆ ರಾಮದುರ್ಗ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊದಲಿನಂತಿಲ್ಲ. ತತ್ವ ಸಿದ್ಧಾಂತ ಕೂಡ ಉಳಿದಿಲ್ಲ. ಬೆಂಗಳೂರಿನ ವ್ಯಕ್ತಿಗಳ ಕೈಯಲ್ಲಿ ಸಿಕ್ಕ ಸಿದ್ದರಾಮಯ್ಯನವರು ಏನೂ ಮಾತನಾಡುವ ಸ್ಥಿತಿಯಲ್ಲಿಲ್ಲ. ವೈಯಕ್ತಿಕವಾಗಿ ಇವತ್ತಿಗೂ ಸಿದ್ದರಾಮಯ್ಯನವರೇ ನಮ್ಮ ನಾಯಕರು, ನಾನು ಅವರ ಅಭಿಮಾನಿಯಾಗಿದ್ದೇನೆ ಎಂದು ಮಾಜಿ ಸಚಿವ ರಮೇಶ ಜಾರಕಿಹೋಳಿ ಹೇಳಿದರು.ಪಟ್ಟಣದ ತೇರಬಜಾರದಲ್ಲಿ ಅಭ್ಯರ್ಥಿ ಜಗದೀಶ ಶೆಟ್ಟರ ಪರ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಮನದಾಳ ಹಂಚಿಕೊಂಡರು. ಈ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಬರುತ್ತವೆ. ನಂತರ ರಾಜ್ಯ ಸರ್ಕಾರ ಬದಲಾಗುತ್ತದೆ. ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಇದ್ದರೆ ಅಭಿವೃದ್ಧಿಗೆ ಸಹಾಯವಾಗುತ್ತದೆ ಎಂದರು.
ಕಾಂಗ್ರೆಸ್‌ನವರು ಹತಾಶೆಯಿಂದ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ. ಇದಕ್ಕೆ ಪ್ರಜ್ಞಾವಂತ ಮತದಾರರು ಕಿವಿಗೊಡದೆ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿಕೊಂಡರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಗುಂಗಿನಲ್ಲಿದ್ದಾರೆ. ಆದರೆ, ಒಂದು ಕಿಮೀ ರಸ್ತೆ ಅಭಿವೃದ್ಧಿಪಡಿಸಲು ಸಾಧ್ಯವಾಗಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಅಭ್ಯರ್ಥಿ ಜಗದೀಶ ಶೆಟ್ಟರ ಮಾತನಾಡಿ, ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗುತ್ತಿದ್ದು, ಇದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಹೀಗಾಗಿ, ಬಿಜೆಪಿ ಕೈ ಬಲಪಡಿಸುವಂತೆ ಕೋರಿದರು.
ಬಿಜೆಪಿ ಮುಖಂಡ ಚಿಕ್ಕರೇವಣ್ಣ ಮಾತನಾಡಿ, ಭಾರತವನ್ನು ವಿಶ್ವಗುರುವಾಗಿ ಮಾಡಲು ಹೊರಟಿರುವ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡಲು ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು.ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಡಾ.ಕೆ.ವಿ.ಪಾಟೀಲ, ಬಿ.ಎಸ್.ಬೆಳವಣಕಿ, ಶ್ರೀದೇವಿ ಮಾದನ್ನವರ, ಐ.ಎಸ್.ಹರನಟ್ಟಿ ಸೇರಿದಂತೆ ಇತರರು ಇದ್ದರು.