ಸಾರಾಂಶ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 77ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗದ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ಸ್ವಾಮಿಗೆ ಪಂಚಾಮೃತ ಅಭಿಷೇಕ, ಎಳನೀರು ಅಭಿಷೇಕವನ್ನು ಸಿದ್ದರಾಮಯ್ಯ ಹೆಸರಿನಲ್ಲಿ ಅರ್ಚನೆ ಮಾಡಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 77ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗದ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ಸ್ವಾಮಿಗೆ ಪಂಚಾಮೃತ ಅಭಿಷೇಕ, ಎಳನೀರು ಅಭಿಷೇಕವನ್ನು ಸಿದ್ದರಾಮಯ್ಯ ಹೆಸರಿನಲ್ಲಿ ಅರ್ಚನೆ ಮಾಡಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಸಿದ್ದರಾಮಯ್ಯ ಅಭಿಮಾನಿ ಬಳಗದ ಅಧ್ಯಕ್ಷ ಬೆಳ್ಳೇಗೌಡ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟುಹಬ್ಬದ ಅಂಗವಾಗಿ ಶ್ರೀಚಾಮರಾಜೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಲಾಯಿತು. ಅವರು ಪೂರ್ಣಾವಧಿ ಮುಖ್ಯಮಂತ್ರಿಯಾಗಿರಲಿ ಎಂದು ಆಶಿಸಿದರು.ತಾಲೂಕು ಕುರುಬರ ಸಂಘದ ಅಧ್ಯಕ್ಷ ಉಮೇಶ್ ಎಸ್.ಪಿ.ಕೆ. ಮಾತನಾಡಿ, ಶ್ರೀ ಚಾಮರಾಜೇಶ್ವರ, ಶ್ರೀ ಚಾಮುಂಡೇಶ್ವರಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇರುವ ದುಷ್ಟ ಶಕ್ತಿಗಳನ್ನು ಸಂಹಾರ ಮಾಡಿ 5 ವರ್ಷಗಳ ಕಾಲ ಯಶಸ್ವಿಯಾಗಿ ಅಧಿಕಾರದಲ್ಲಿ ಮುಂದುವರೆಯುವಂತಾಗಲಿ ಎಂದು ಆಶಿಸಿದರು.ಇದಕ್ಕೂ ಮುನ್ನ ನಗರದ ದೀನಬಂಧು ಆಶ್ರಮದಲ್ಲಿ ಮಕ್ಕಳಿಗೆ ಉಪಾಹಾರ ವ್ಯವಸ್ಥೆ ಮಾಡಲಾಯಿತು. ಸಿದ್ದರಾಮಯ್ಯ ಅಭಿಮಾನಿ ಬಳಗದ ಪ್ರಧಾನ ಕಾರ್ಯದರ್ಶಿ ಕುದೇರು ಲಿಂಗಣ್ಣ, ಸಂಘಟನಾ ಕಾರ್ಯದರ್ಶಿ ಕೆ.ಕೆ. ಹುಂಡಿ ನಾಗರಾಜು, ಕೆರೆಹಳ್ಳಿರೇವಣ್ಣ ಉಪಾಧ್ಯಕ್ಷ ಸೊತ್ತನಹುಂಡಿ ಸೋಮಣ್ಣ, ಕಾರ್ಯದರ್ಶಿ ಮಹದೇವಸ್ವಾಮಿ, ಎಂ.ಸ್ವಾಮಿ ಕರಿನಂಜನಪುರ, ನಂದಕುಮಾರ್, ಮಹದೇವಸ್ವಾಮಿ, ಮಹದೇವಸ್ವಾಮಿ, ಯಳಂದೂರು ಮಲ್ಲು, ತಮ್ಮಡೇಗೌಡ, ಹೆಗ್ಗಡೆಹುಂಡಿ ಸುಂದರ ಇದ್ದರು.