ಇತ್ತೀಚಿನ ದಿನಗಳಲ್ಲಿ ಕನಕದಾಸರು ಮತ್ತು ಸಂಗೊಳ್ಳಿ ರಾಯಣ್ಣ ಅವರ ವಿಚಾರಗಳು ಹೆಚ್ಚು ಪ್ರಸ್ತುತವಾಗುತ್ತಿವೆ. ಕನಕದಾಸರು ಸಂತರು ಹಾಗೂ ತಿರುಪತಿ ತಿಮ್ಮಪ್ಪನ ಭಕ್ತರಾಗಿದ್ದರು. ಅವರ ಮೂಲ ಹೆಸರು ತಿಮ್ಮಪ್ಪ ನಾಯಕನಾಗಿದ್ದು, ನಂತರ ಕನಕದಾಸರಾದರು ಎಂದು ಸಿದ್ದರಾಮಯ್ಯ ಸ್ಮರಿಸಿದರು. ಜಾತಿ ವ್ಯವಸ್ಥೆಯನ್ನು ಪಟ್ಟಭದ್ರ ಹಿತಾಸಕ್ತಿಗಳು ಹುಟ್ಟುಹಾಕಿ, ಅದನ್ನು ಪೋಷಿಸಿಕೊಂಡು ಬಂದಿವೆ. ಜಾತಿ ವ್ಯವಸ್ಥೆ ಸಮಾಜದಲ್ಲಿ ಜಡತ್ವವನ್ನು ಸೃಷ್ಟಿಸಿದ್ದು, ಅದು ಹೋಗಲಾಡದ ಹೊರತು ಸಮಾನತೆಯ ಸಮಾಜ ನಿರ್ಮಾಣವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು. ಕನಕದಾಸರು ತಮ್ಮ ಕಾಲದಲ್ಲಿಯೇ ಜಾತಿ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿದ್ದರು. ಪ್ರತಿಯೊಂದು ಸಮುದಾಯಕ್ಕೂ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಶಕ್ತಿ ದೊರೆಯಬೇಕು. ಈ ಆಶಯವನ್ನು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರೂ ಪ್ರತಿಪಾದಿಸಿದ್ದರು ಎಂದು ಹೇಳಿದರು.
ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಜಾತಿ ವ್ಯವಸ್ಥೆ ಇರುವವರೆಗೂ ಸಮಸಮಾಜ ನಿರ್ಮಾಣ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಕನಕದಾಸರ ಪ್ರತಿಮೆ ಸ್ಥಾಪಿಸಿದರೆ ಮಾತ್ರ ಸಾಲದು, ಅವರ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡು ಅವರ ಮಾರ್ಗದಲ್ಲಿ ನಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ಶನಿವಾರ ನಡೆದ ಶ್ರೀ ಭಕ್ತ ಕನಕದಾಸರ ಪ್ರತಿಮೆ ಅನಾವರಣ ಹಾಗೂ ತಮ್ಮ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನಕದಾಸರ ಸಾಮಾಜಿಕ ಚಿಂತನೆ, ಜಾತಿ ವ್ಯವಸ್ಥೆಯ ನಿರ್ಮೂಲನೆ ಮತ್ತು ಸಾಮಾಜಿಕ ನ್ಯಾಯದ ಅಗತ್ಯವನ್ನು ವಿವರಿಸಿದರು. ಕನಕದಾಸರು, ಸಂಗೊಳ್ಳಿ ರಾಯಣ್ಣ ಇಂದಿಗೂ ಪ್ರಸ್ತುತ
ಇತ್ತೀಚಿನ ದಿನಗಳಲ್ಲಿ ಕನಕದಾಸರು ಮತ್ತು ಸಂಗೊಳ್ಳಿ ರಾಯಣ್ಣ ಅವರ ವಿಚಾರಗಳು ಹೆಚ್ಚು ಪ್ರಸ್ತುತವಾಗುತ್ತಿವೆ. ಕನಕದಾಸರು ಸಂತರು ಹಾಗೂ ತಿರುಪತಿ ತಿಮ್ಮಪ್ಪನ ಭಕ್ತರಾಗಿದ್ದರು. ಅವರ ಮೂಲ ಹೆಸರು ತಿಮ್ಮಪ್ಪ ನಾಯಕನಾಗಿದ್ದು, ನಂತರ ಕನಕದಾಸರಾದರು ಎಂದು ಸಿದ್ದರಾಮಯ್ಯ ಸ್ಮರಿಸಿದರು. ಜಾತಿ ವ್ಯವಸ್ಥೆಯನ್ನು ಪಟ್ಟಭದ್ರ ಹಿತಾಸಕ್ತಿಗಳು ಹುಟ್ಟುಹಾಕಿ, ಅದನ್ನು ಪೋಷಿಸಿಕೊಂಡು ಬಂದಿವೆ. ಜಾತಿ ವ್ಯವಸ್ಥೆ ಸಮಾಜದಲ್ಲಿ ಜಡತ್ವವನ್ನು ಸೃಷ್ಟಿಸಿದ್ದು, ಅದು ಹೋಗಲಾಡದ ಹೊರತು ಸಮಾನತೆಯ ಸಮಾಜ ನಿರ್ಮಾಣವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು. ಕನಕದಾಸರು ತಮ್ಮ ಕಾಲದಲ್ಲಿಯೇ ಜಾತಿ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿದ್ದರು. ಪ್ರತಿಯೊಂದು ಸಮುದಾಯಕ್ಕೂ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಶಕ್ತಿ ದೊರೆಯಬೇಕು. ಈ ಆಶಯವನ್ನು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರೂ ಪ್ರತಿಪಾದಿಸಿದ್ದರು ಎಂದು ಹೇಳಿದರು.ಅಂಬೇಡ್ಕರ್ ಎಲ್ಲ ಅವಕಾಶವಂಚಿತರ ನಾಯಕರು
ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕೇವಲ ದಲಿತ ಸಮುದಾಯದ ನಾಯಕರಾಗಿ ಪರಿಗಣಿಸಬಾರದು. ಅವರು ಎಲ್ಲ ಜಾತಿಗಳಲ್ಲಿರುವ ಅವಕಾಶವಂಚಿತರ ಪರವಾಗಿ ಧ್ವನಿ ಎತ್ತಿದ ನಾಯಕರಾಗಿದ್ದರು. ಎಲ್ಲಿಯವರೆಗೆ ಅಸಮಾನತೆ ಇರುತ್ತದೆಯೋ, ಅಲ್ಲಿಯವರೆಗೆ ಸಮಸಮಾಜ ನಿರ್ಮಾಣ ವಾಗುವುದಿಲ್ಲ. ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸ ನಡೆಯುತ್ತಿದೆ. ಜಾತಿ ವ್ಯವಸ್ಥೆ ನಿರ್ಮೂಲನೆಯಾಗದ ಹೊರತು ನಿಜವಾದ ಸಾಮಾಜಿಕ ಸಮಾನತೆ ಸಾಧ್ಯವಿಲ್ಲ. ಸರ್ಕಾರಗಳನ್ನು ನಡೆಸುವವರು ಸಮಾಜದಲ್ಲಿರುವ ಅಸಮಾನತೆಗಳನ್ನು ನಿವಾರಿಸಿ, ಎಲ್ಲ ವರ್ಗದವರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವ ಕೆಲಸ ಮಾಡಬೇಕು ಇಂದು ಒತ್ತಾಯಿಸಿದರು. ಸಮಾಜದ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ಮತ್ತು ಸೌಲಭ್ಯಗಳು ದೊರೆತಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಇಲ್ಲವಾದರೆ ಪಟ್ಟಭದ್ರ ಹಿತಾಸಕ್ತಿಗಳು ಜಾತಿ ವ್ಯವಸ್ಥೆಯನ್ನು ಜೀವಂತವಾಗಿಡುತ್ತವೆ ಎಂದು ಎಚ್ಚರಿಸಿದರು.ಕಾರ್ಯಕ್ರಮದಲ್ಲಿ ಕನಕ ಗುರುಪೀಠದ ಶಿವಾನಂದಪುರಿ ಸ್ವಾಮೀಜಿ, ಸಂಸದ ಶ್ರೇಯಸ್ ಪಟೇಲ್, ಮಾಜಿ ಎಂಎಲ್ಸಿ ಎ ಗೋಪಾಲಸ್ವಾಮಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ ಬಿ ಶಶಿಧರ್, ಉದ್ಯಮಿ ಎಂ ಶಂಕರ್, ಅಣತಿ ಆನಂದ್, ಕಬ್ಬಾಳು ಯತೀಶ್, ದೊಡ್ಡೆಗೌಡ ಸೇರಿದಂತೆ ಹಲವರು ಇದ್ದರು.