ಸಾರಾಂಶ
ಕನ್ನಡಪ್ರಭ ವಾರ್ತೆ, ತುಮಕೂರುಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ. ಪತ್ರದ ಮೂಲಕ ಸಂತಾಪ ಸಂದೇಶ ನೀಡಿದ ಸಿದ್ದಲಿಂಗ ಸ್ವಾಮೀಜಿ ಅವರು ಶ್ರೀಯುತರು ದೇಶದ ರಾಜಕೀಯ ಮುತ್ಸದ್ದಿಗಳಲ್ಲಿ ಒಬ್ಬರಾಗಿದ್ದರು. ರಾಜ್ಯದ ಶಾಸಕರು, ಮಂತ್ರಿಗಳು, ಉಪಮುಖ್ಯಮಂತ್ರಿಗಳು ಮತ್ತು ಮುಖ್ಯಮಂತ್ರಿಗಳಾಗಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಕಾರಣರಾಗಿದ್ದರು. ಭಾರತದ ವಿದೇಶಾಂಗ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದಾರೆ. ಬೆಂಗಳೂರಿನ ಸರ್ವತೋಮುಖ ಬೆಳವಣಿಗೆಗೆ, ಮಾಹಿತಿ ತಂತ್ರಜ್ಞಾನದ ಮುಖ್ಯ ಕೇಂದ್ರವನ್ನಾಗಿಸುವಲ್ಲಿ ಕಾರಣರಾಗಿದ್ದಾರೆ. ಮಧ್ಯಾಹ್ನದ ಬಿಸಿಯೂಟವನ್ನು ಜಾರಿಗೊಳಿಸಿದವರಾಗಿದ್ದು ಶ್ರೀಯುತರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವುಂಟಾಗಿದೆ ಎಂದಿದ್ದಾರೆ. ಇವರ ಅಗಲುವಿಕೆಯಿಂದ ಶ್ರೀಯುತರ ಕುಟುಂಬ ವರ್ಗಕ್ಕೆ, ಅಭಿಮಾನಿಗಳಿಗೆ ದುಃಖ ಸಹಿಸಿಕೊಳ್ಳುವಂತೆ ಹಾಗೂ ಅವರ ಆತ್ಮಕ್ಕೆ ಚಿರಶಾಂತಿ ನೀಡುವಂತೆ ಪರಮಾತ್ಮನಲ್ಲಿ ಪ್ರಾರ್ಥಿಸುತ್ತೇವೆ ಎಂದಿದ್ದಾರೆ.
;Resize=(128,128))
;Resize=(128,128))