ಬಸವಲಿಂಗ ಸ್ವಾಮೀಜಿ ಪಟ್ಟಾಧಿಕಾರ ರಜತ ಮಹೋತ್ಸವಕ್ಕೆ ಸಿದ್ದಯ್ಯನಕೋಟೆ ಸಜ್ಜು

| Published : Feb 15 2024, 01:16 AM IST

ಬಸವಲಿಂಗ ಸ್ವಾಮೀಜಿ ಪಟ್ಟಾಧಿಕಾರ ರಜತ ಮಹೋತ್ಸವಕ್ಕೆ ಸಿದ್ದಯ್ಯನಕೋಟೆ ಸಜ್ಜು
Share this Article
  • FB
  • TW
  • Linkdin
  • Email

ಸಾರಾಂಶ

ಇಳಕಲ್ ವಿಜಯ ಮಹಂತೇಶ್ವರ ಮಠದ ಶ್ರೀ ಗುರು ಮಹಾಂತ ಸ್ವಾಮೀಜಿ ಉಪಸ್ಥಿತಿಯಲ್ಲಿ ಸಮಾಜ ಸೇವಕಿ ರೂಪಾ ಲಾಡ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಸಮಾಜ ಸೇವಕಿ ರೂಪಾ ಲಾಡ್‌ ಅವರಿಂದ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ

ಕನ್ನಡಪ್ರಭ ವಾರ್ತೆ ಮೊಳಕಾಲ್ಮುರು

ಸಿದ್ದಯ್ಯನಕೋಟೆ ಚಿತ್ತರಗಿ ವಿಜಯ ಮಹಂತೇಶ್ವರ ಶಾಖಾ ಮಠದಲ್ಲಿ ಕಾಯಕ ಯೋಗಿ ಶ್ರೀ ಬಸವಲಿಂಗ ಸ್ವಾಮೀಜಿ ಪಟ್ಟಾಧಿಕಾರ ರಜತ ಮಹೋತ್ಸವ ಸಮಾರಂಭ ಗುರುವಾರ ವಿಧ್ಯುಕ್ತವಾಗಿ ಆರಂಭವಾಗಲಿದೆ.

ಫೆ.15ರಿಂದ 19ರವರೆಗೆ ನಡೆಯಲಿರುವರಜತ ಮಹೋತ್ಸವಕ್ಕೆ ಗುರುವಾರ ಬೆಳಗ್ಗೆ ಹುಬ್ಬಳ್ಳಿ ಮೂರು ಸಾವಿರ ಮಠದ ಜಗದ್ಗುರು ಗುರುಸಿದ್ದ ರಾಜ ಯೋಗೇಂದ್ರ ಸ್ವಾಮೀಜಿ, ನಿರಂಜನ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಶರಣರ ಪಾತ್ರ ವಿಷಯವಾಗಿ ಕಾರ್ಯಕ್ರಮ ಜರುಗಲಿದೆ. ಇಳಕಲ್ ವಿಜಯ ಮಹಂತೇಶ್ವರ ಮಠದ ಶ್ರೀ ಗುರು ಮಹಾಂತ ಸ್ವಾಮೀಜಿ ಉಪಸ್ಥಿತಿಯಲ್ಲಿ ಸಮಾಜ ಸೇವಕಿ ರೂಪಾ ಲಾಡ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಜೆ ಯುವಜನ ಗೋಷ್ಠಿ ನಡೆಯಲಿದ್ದು, ಚಿತ್ರದುರ್ಗ ಬೃಹನ್ಮಠದ ಶ್ರೀ ಬಸವ ಪ್ರಭು ಸ್ವಾಮೀಜಿ, ರಾಜ್ಯ ವಕ್ಫ್‌ ಬೋರ್ಡ್ ಅಧ್ಯಕ್ಷ ಅನ್ವರ್ ಭಾಷ, ಯುವ ಮುಖಂಡ ಡಾ.ಬಿ.ಯೋಗೇಶ ಬಾಬು, ಶಾಸಕ ಪ್ರದೀಪ್ ಈಶ್ವರ್ ಉಪಸ್ಥಿತರಿರಲಿದ್ದಾರೆ.

ಫೆ.16ರಂದು ಬೆಳಗ್ಗೆ ಗಡಿ ನಾಡಿಗರ ಬದುಕು ಮತ್ತು ಬರಹ ಕುರಿತಂತೆ ಕಾರ್ಯಕ್ರಮ ನಡೆಯಲಿದ್ದು, ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಪಂಡಿತರಾದ್ಯ ಡಾ.ಶಿವಾಚಾರ್ಯ ಸ್ವಾಮೀಜಿ, ಪಾಂಡೋಮಟ್ಟಿ ವಿರುಕ್ತ ಮಠದ ಡಾ.ಗುರು ಬಸವ ಸ್ವಾಮೀಜಿ, ಗುಳೇದಗುಡ್ಡ ಜಗದ್ಗುರು ಗುರುಸಿದ್ದೇಶ್ವರ ಬೃಹನ್ಮಠದ ಗುರುಸಿದ್ದ ಪಟ್ಟಾದಾರ್ಯ ಸ್ವಾಮೀಜಿ, ಸಂಡೂರು ವಿರಕ್ತ ಮಠದ ಶ್ರೀ ಪ್ರಭು ಸ್ವಾಮೀಜಿ ಭಾಗವಹಿಸಲಿದ್ದಾರೆ. ಸಂಜೆ 6 ಗಂಟೆಗೆ ನಡೆಯಲಿರುವ ಮಹಿಳಾ ಗೋಷ್ಠಿಯಲ್ಲಿ ಮರೇಗುದ್ದಿ ಗುರು ಮಹಾಂತ ಮಠದ ಮಾತೆ ನೀಲ ವಿಜಯ ಮಹಾಂತಮ್ಮ, ಸಮಾಜ ಸೇವಕಿ ಜೀವರತ್ನಮ್ಮ, ಮಾಜಿ ಶಾಸಕಿ ಜಯಮ್ಮ ಬಾಲರಾಜ್ ಬಾಗವಹಿಸಲಿದ್ದಾರೆ.

ಫೆ.17ರಂದು ಬೆಳಗ್ಗೆ ಕವಿ ಗೋಷ್ಠಿ ಜರುಗಲಿದೆ. ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಿಡುಸೋಸಿ ಸಿದ್ದ ಸಂಸ್ಥಾನ ಮಠದ ನಿರಂಜನ ಜಗದ್ಗುರು ನಿಜಲಿಂಗೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕೂಡಲ ಸಂಗಮ ಪಂಚಮಸಾಲಿ ಗುರುಪೀಠದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ, ಹೊಸದುರ್ಗ ಕುಂಚಟಿಗ ಗುರುಪೀಠದ ಡಾ.ಶಾಂತ ವೀರ ಸ್ವಾಮೀಜಿ, ಕೃಷಿ ಪಂಡಿತ ಬಿ.ಜಿ.ಕೆರೆ ಎಸ್.ಸಿ ವೀರಭದ್ರಪ್ಪ, ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಯುವಜನ ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಎಸ್. ನಾಗೇಂದ್ರ ಉಪಸ್ಥಿತರಿರಲಿದ್ದಾರೆ. ಸಂಜೆ 6ಗಂಟೆಗೆ ಡಾ. ಮಹಾಂತ ಶಿವಯೋಗಿಗಳ ಸ್ಮರಣೆ ನಡೆಯಲಿದೆ. ಕಾರ್ಯಕ್ರಮವನ್ನು ಗೃಹ ಸಚಿವ ಡಾ.ಜಿ.ಪರಮೇಶ ಉದ್ಘಾಟಿಸಲಿದ್ದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುದಾಕರ್. ಶಾಸಕ ಎನ್.ವೈ.ಗೋಪಾಲಕೃಷ್ಣ, ಅರಣ್ಯ ಸಚಿವ ಈಶ್ವರ ಖಂಡ್ರೆ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಭಾಗವಹಿಸಲಿದ್ದಾರೆ.

ಫೆ.18ರಂದು ಭಾನುವಾರ ಬೆಳಗ್ಗೆ ಬಸವ ತತ್ವ ಸಮಾವೇಶ ಜರುಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಸಚಿವರಾದ ಎಚ್.ಸಿ. ಮಹದೇವಪ್ಪ, ಸಚಿವ ಸತೀಶ್ ಜಾರಕಿ ಹೊಳಿ, ದಿನೇಶ ಗುಂಡೂರಾವ್, ಮಾಜಿ ಸಚಿವ ಎಚ್.ಆಂಜನೇಯ, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಟಿ.ರಘುಮೂರ್ತಿ, ವಿಜಯಾನಂದ ಕಾಶಪ್ಪನವರ್, ಜಿ.ಎಂ.ಗಣೇಶ, ಡಾ.ಎನ್.ಟಿ. ಶ್ರೀನಿವಾಸ, ನಾರ ಭರತ್ ರೆಡ್ಡಿ ಭಾಗವಹಿಸಲಿದ್ದಾರೆ. ಸಂಜೆ 6ಗಂಟೆಗೆ ಕಾಯಕ ಯೋಗಿ ಶ್ರೀ ಬಸಲಿಂಗ ಸ್ವಾಮೀಜಿ ರಜತ ಮಹೋತ್ಸವ ಗುರುವಂದನೆ ಹಾಗೂ ಚಿತ್ತರಗಿ ಮಹಾಂತಗುರು ಕಾರುಣ್ಯ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.

ಫೆ.19ರಂದು ಬೆಳಗ್ಗೆ ಜನಪದ ಜಾತ್ರೆ ಸಮಾರೋಪ ಸಮಾರಂಭ ನಡೆಯಲಿದ್ದು, ಬಾಲ್ಕಿ ಹಿರೇಸಂಸ್ಥಾನ ಮಠದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು, ಇಳಕಲ್ ವಿಜಯ ಮಹಂತೇಶ್ವರ ಮಠದ ಗುರು ಮಹಾಂತ ಸ್ವಾಮೀಜಿ, ಕಾಗಿನಲೆ ಕನಕ ಗುರುಪೀಠದ ನಿರಂಜನಾನಂದ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ, ಮಾದಾರ ಚೆನ್ನಯ್ಯ ಗುರುಪೀಠದ ಮಾದಾರ ಚೆನ್ನಯ್ಯ ಸ್ವಾಮೀಜಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಮೆರವಣಿಗೆ ನಡೆಯಲಿದೆ.