ಸಿದ್ದರಾಮೇಶ್ವರರ ಆದರ್ಶಗಳು ಅವಶ್ಯಕ: ತಹಸೀಲ್ದಾರ್ ಸುಧಾ

| Published : Jan 16 2024, 01:46 AM IST

ಸಾರಾಂಶ

ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ಶಿವಯೋಗಿ ಸಿದ್ದರಾಮೇಶ್ವರರ 852ನೇ ಜಯಂತಿ ಸೋಮವಾರ ಆಚರಿಸಲಾಯಿತು.

ಮಸ್ಕಿ: ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ಶಿವಯೋಗಿ ಸಿದ್ದರಾಮೇಶ್ವರರ 852ನೇ ಜಯಂತಿ ಸೋಮವಾರ ಆಚರಿಸಲಾಯಿತು. ತಹಸೀಲ್ದಾರ್‌ ಅರಮನೆ ಸುಧಾ ಅವರು ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ತಹಸೀಲ್ದಾರ್ ಸುಧಾ ಮಾತನಾಡಿ, ಸಿದ್ದರಾಮೇಶ್ವರ ಅವರ ಆದರ್ಶಗಳು ಆಧುನಿಕ ಜಗತ್ತಿನಲ್ಲಿ ಎಲ್ಲರಿಗೂ ಅವಶ್ಯಕವಾಗಿದೆ ಸಿದ್ಧರಾಮೇಶ್ವರರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಶಿವಯೋಗಿ ಸಿದ್ಧರಾಮೇಶ್ವರ ಅವರು ತಮ್ಮ ವಚನಗಳ ಮೂಲಕ ಸಮಾಜದ ಅಂಕುಡೊಂಕು ತಿದ್ದಲು ಪ್ರಯತ್ನಿಸಿದ್ದರು. ಸಮಸ್ಯೆಗಳಿಗೆ ಹೆದರದೇ ಮುನ್ನುಗ್ಗಿ ಜನರ ಮನಸ್ಸಿನಲ್ಲಿ ಅರಿವು ಮೂಡಿಸುವ ಕೆಲಸ ಮಾಡಿದ್ದರು. ಬಸವಣ್ಣನವರ ಅನುಭವ ಮಂಟಪದಲ್ಲಿ ಸಾಮಾಜಿಕ ಸಮಾನತೆ ತತ್ವ ಸಂದೇಶಗಳನ್ನು ಸಾರಿದ ಶ್ರೇಷ್ಠ ವ್ಯಕ್ತಿಯಾಗಿದ್ದಾರೆ. ಅವರ ವಚನಗಳು ಇಂದಿಗೂ ಪ್ರಸ್ತುತ. ಪಾಲಕರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ನೀಡಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ವಿವಿಧ ಕ್ಷೇತ್ರಗಳಲ್ಲಿ ಅಪಾರ ಸಾಧನೆ ಮಾಡಿದಾಗ ಮಾತ್ರ ಒಂದು ಸಮಾಜ ಬಲಿಷ್ಟವಾಗಲು ಸಾಧ್ಯವಾಗುತ್ತದೆ. ಮಹಾನ್ ವ್ಯಕ್ತಿಗಳ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಾರ್ಥಕವಾಗುತ್ತದೆ ಎಂದರು.

ಮಸ್ಕಿ ತಾಲೂಕು ಭೋವಿ ಸಮಾಜದ ಅಧ್ಯಕ್ಷ ದುರುಗಪ್ಪ ಚಿಗರಿ, ಶ್ರೀಶೈಲಪ್ಪ ಬ್ಯಾಳಿ, ಕರಿಬಸನಗೌಡ ಗುಡದೂರು, ಮಲ್ಲಯ್ಯ ಪೂಜಾರಿ, ಪಂಪನಗೌಡ ಉದ್ದಿನಹಾಳ, ರವಿಕುಮಾರ ಚಿಗರಿ, ಮಲ್ಲಯ್ಯ ನಾಗರಾಳ, ಕೃಷ್ಣ ಚಿಗರಿ, ಜಿ.ಎಸ್.ಆನಂದ, ರಮೇಶ ಗುಡಸಲಿ, ಶಿವರಾಜ ಬುಕ್ಕಣ್ಣ, ವಿಜಯಕುಮಾರ, ನಾಗರಾಜ ರಾಯಚೂರು, ಅಂಬು ಬೋವಿ, ಮಂಜುನಾಥ ಬೆಳಗಲ್ಲ, ರಾಘವೇಂದ್ರ ದೇವರಮನಿ, ಹಜರತ್ ದಿನ್ನಿಬಾವಿ ಹಾಗೂ ಇತರರು ಭಾಗವಹಿಸಿದ್ದರು. ಬಿಜೆಪಿ, ಕಾಂಗ್ರೆಸ್ ಕಚೇರಿಯಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಶಿವಯೋಗಿ ಸಿದ್ದರಾಮೇಶ್ವರರ ಜಯಂತಿಯನ್ನು ಆಚರಿಸಲಾಯಿತು.