ಸಾರಾಂಶ
ಕನ್ನಡಪ್ರಭ ವಾರ್ತೆ ಹರಿಹರ
ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ ಆಗಿರುತ್ತಾರೆ. ಯಾವುದೇ ಬದಲಾವಣೆ ಇಲ್ಲವೇ ಇಲ್ಲ ಎಂದು ಸ್ವಂತಃ ಸಿದ್ದರಾಮಯ್ಯ ಅವರೇ ಹೇಳಿದ್ದಾರಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.ತಾಲೂಕಿನ ರಾಜನಹಳ್ಳಿಯ ಮಹರ್ಷಿ ಶ್ರೀ ವಾಲ್ಮೀಕಿ ಗುರುಪೀಠಕ್ಕೆ ಶನಿವಾರ ಹೆಲಿಕಾಪ್ಟರ್ ಮೂಲಕ ಆಗಮಿಸಿ ಶ್ರೀಗಳನ್ನು ಭೇಟಿ ಮಾಡಿ ನಂತರ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿ ಸುದ್ದಿಗಾರರ ಜತೆ ಮಾತನಾಡಿದರು.
ಸಿದ್ದರಾಮಯ್ಯನವರು ಗಟ್ಟಿಯಾಗಿದ್ದಾರೆ. ಸಿಎಂ ಬದಲಾವಣೆ ವಿಚಾರ ಯಾವುದೇ ಚರ್ಚೆ ಇಲ್ಲ. ಸಿದ್ದರಾಮಯ್ಯನವರು ಐದು ವರ್ಷ ಸಿಎಂ ಆಗಿರುತ್ತಾರೆ. ಸಂಪುಟ ಪುನರ್ ರಚನೆ ಹೈಕಮಾಂಡ್ ಗೆ ಬಿಟ್ಟ ವಿಚಾರ. ಅದರ ಬಗ್ಗೆ ನಮ್ಮ ಜತೆ ಚರ್ಚೆ ಮಾಡೋದಿಲ್ಲ. ಹೈಕಮಾಂಡ್ ನಿರ್ಧಾರ ಅಂತಿಮವಾಗಿರುತ್ತದೆ ಎಂದರು.ಬಿಹಾರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾವುದೇ ಗ್ಯಾರಂಟಿ ಯೋಜನೆಗಳ ಘೋಷಣೆ ಮಾಡಲಿಲ್ಲ. ಆದರೆ ಬಿಜೆಪಿಯವರು ಘೋಷಣೆ ಮಾಡಿದರು. ಇದರ ಪರಿಣಾಮವಾಗಿ ಅವರು ಚುನಾವಣೆಯಲ್ಲಿ ಸಕ್ಸಸ್ ಆದರು ಎಂದು ಹೇಳಿದರು.
ಸತೀಶ್ ಜಾರಕಿಹೊಳಿ ಅವರು ದೆಹಲಿ ಪ್ರವಾಸ ಬಳಿಕ ಮಠ ಭೇಟಿಯಿಂದ ಕುತೂಹಲ ಹೆಚ್ಚಿದೆ. ಮೊದಲು ವಾಲ್ಮೀಕಿ ಗುರುಪೀಠಕ್ಕೆ ಭೇಟಿ ನೀಡಿ ಪ್ರಸನ್ನಾನಂದ ಶ್ರೀಗಳ ಆಶೀರ್ವಾದ ಪಡೆದರು. ನಂತರ ಬೆಳ್ಳೂಡಿ ಕಾಗಿನೆಲೆ ಮಠಕ್ಕೆ ತೆರಳಿ ನಿರಂಜನಾನಂದ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದರುಶಾಸಕ ಬಿ.ಪಿ ಹರೀಶ್, ಜಗಳೂರು ಶಾಸಕ ದೇವೇಂದ್ರಪ್ಪ, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ಮಾಜಿ ಶಾಸಕ ಎಸ್ ರಾಮಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ನಂದಿಗಾವಿ. ಚನ್ನಗಿರಿ ಹೊದಿಗೇರಿ ರಮೇಶ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಡಿ.ಕುಮಾರ್, ಬೆಳ್ಳೂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುದೀಪ್ ಗೌಡ, ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಇದ್ದರು.
ಬಿಹಾರ ಫಲಿತಾಂಶ: ಕಾಂಗ್ರೆಸ್ ಆತ್ಮಾವಲೋಕನ ಅಗತ್ಯಬಿಹಾರ ಚುನಾವಣೆಯ ಫಲಿತಾಂಶವು ಕಾಂಗ್ರೆಸ್ ಪಕ್ಷಕ್ಕೆ ಪಾಠವಾಗಿದ್ದು, ಎಲ್ಲೆಲ್ಲಿ ಲೋಪದೋಷವಾಗಿದೆಯೆಂಬ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಓಟು ಚೋರಿ ಬಗ್ಗೆ ಮೊದಲಿನಿಂದಲೂ ಆರೋಪಗಳು ಕೇಳಿ ಬರುತ್ತಿದೆ. ಅದಕ್ಕೆ ಚುನಾವಣಾ ಆಯೋಗ ಉತ್ತರ ಕೊಡಬೇಕು ಎಂದರು.ಕಾಂಗ್ರೆಸ್‌ನವರು ಏನು ಆರೋಪ ಮಾಡಿದ್ದಾರೋ ಅದಕ್ಕೆ ಆಯೋಗ ಉತ್ತರ ಕೊಡಬೇಕಿದೆ. ಬಿಹಾರ ಜನತೆಯ ಮನಸ್ಥಿತಿಯೇ ಬೇರೆ, ಕರ್ನಾಟಕದ ಜನರ ಮನಸ್ಥಿತಿಯೇ ಬೇರೆ ಬೇರೆ.ಕರ್ನಾಟಕದಲ್ಲಿ ಅಹಿಂದಕ್ಕೆ ಹೆಚ್ಚು ಮಹತ್ವವಿದೆ. ಬಿಹಾರದಲ್ಲಿ ಎಲ್ಲರನ್ನೂ ಒಗ್ಗೂಡಿಸುವುದಕ್ಕೆ ಸಾಧ್ಯವಿಲ್ಲ. ಆದರೆ, ನಮ್ಮ ರಾಜ್ಯದಲ್ಲಿ ಅಹಿಂದ ವರ್ಗವನ್ನು ಒಗ್ಗೂಡಿಸಲು ಸಾಧ್ಯವಿದೆ ಎಂದು ತಿಳಿಸಿದರು.
ಚುನಾವಣೆ ಫಲಿತಾಂಶ ಗೆದ್ದರೂ ಚರ್ಚೆಯಾಗಬೇಕು, ಸೋತರೂ ಚರ್ಚೆಯಾಗಬೇಕು. ನಾವು ಏಕೆ ಸೋತೆವು ಎಂಬ ಬಗ್ಗೆ ಈಗ ಪ್ರಮುಖವಾಗಿ ಚರ್ಚೆಯಾಗಬೇಕು. ಬಿಹಾರದಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳೇ ಇರಲಿಲ್ಲ. ಆದರೆ, ಎದುರಾಳಿಗಳು ತಮ್ಮ ಗ್ಯಾರಂಟಿಗಳನ್ನು ಘೋಷಣೆ ಮಾಡಿ, ಸಕ್ಸೆಸ್ ಆದರು ಎಂದರು.ಹೆಲಿಕಾಫ್ಟರ್‌ನಲ್ಲಿ ವಾಲ್ಮೀಕಿ ಪೀಠಕ್ಕೆ ಸತೀಶ್ ಗ್ರ್ಯಾಂಡ್ ಎಂಟ್ರಿ
ಹೊಸದಾಗಿ, ದುಬಾರಿ ಬೆಲೆಯ ಅತ್ಯಾಧುನಿಕ ಡಬಲ್ ಇಂಜಿನ್ ಹೆಲಿಕಾಫ್ಟರ್‌ನ್ನು ಖರೀದಿಸಿರುವ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯ ಮಹರ್ಷಿ ಶ್ರೀ ವಾಲ್ಮೀಕಿ ಗುರುಪೀಠಕ್ಕೆ ಶನಿವಾರ ಗ್ರ್ಯಾಂಡ್ ಎಂಟ್ರಿ ಕೊಡುವ ಮೂಲಕ ಎಲ್ಲರ ಗಮನ ಸೆಳೆದರು. ಹೆಲಿಕಾಫ್ಟರ್‌ನಲ್ಲಿ ಸತೀಶ ಜಾರಕಿಹೊಳಿ ಬಂದು ಇಳಿಯುತ್ತಿದ್ದಂತೆ ಅಭಿಮಾನಿಗಳು, ಸಮಾಜ ಬಾಂಧವರು ಘೋಷಣೆ ಕೂಗಿದರು.ಜರ್ಮನಿಯ ಅಗೆಸ್ಟಾ ಕಂಪನಿಯ ಹೆಲಿಕಾಫ್ಟರ್ ಖರೀದಿಸಿರುವ ಸತೀಶ ಜಾರಕಿಹೊಳಿ ದಾವಣಗೆರೆಯ ತಮ್ಮ ಆಪ್ತ ಶಾಸಕರಾದ ಕೆ.ಎಸ್.ಬಸವಂತಪ್ಪ, ದೇವೇಂದ್ರಪ್ಪ ಜತೆಗೆ ಹೆಲಿಕಾಫ್ಟರ್‌ನಲ್ಲಿ ರಾಜನಹಳ್ಳಿ ಶ್ರೀಮಠದ ಆವರಣದಲ್ಲಿರುವ ಹೆಲಿಪ್ಯಾಡ್‌ಗೆ ಬಂದಿಳಿದರು. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಕಾಮಗಾರಿಗೆ ಸಚಿವ ಸತೀಶ ಜಾರಕಿಹೊಳಿ ಭೂಮಿಪೂಜೆ ನೆರವೇರಿಸಿದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))