ಸಾರಾಂಶ
ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಹಾಗೂ ಇತರೆ ಸರ್ಕಾರಿ ಆಸ್ಪತ್ರೆಗಳ ಸಮಸ್ಯೆಗಳನ್ನು ವಿರೋಧಿಸಿ ಸುಸಿ ಕಮ್ಯುನಿಸ್ಟ್ ಪಕ್ಷದಿಂದ ಸಹಿ ಸಂಗ್ರಹ ಅಭಿಯಾನ ಮಂಗಳವಾರ ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆ ಮುಂಭಾಗ ನಡೆಯಿತು.
ದಾವಣಗೆರೆ: ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಹಾಗೂ ಇತರೆ ಸರ್ಕಾರಿ ಆಸ್ಪತ್ರೆಗಳ ಸಮಸ್ಯೆಗಳನ್ನು ವಿರೋಧಿಸಿ ಸುಸಿ ಕಮ್ಯುನಿಸ್ಟ್ ಪಕ್ಷದಿಂದ ಸಹಿ ಸಂಗ್ರಹ ಅಭಿಯಾನ ಮಂಗಳವಾರ ಚಿಗಟೇರಿ ಜಿಲ್ಲಾಸ್ಪತ್ರೆ ಮುಂಭಾಗ ನಡೆಯಿತು.
ದಾವಣಗೆರೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳನ್ನು ಉಳಿಸಿ, ಸುಸಜ್ಜಿತಗೊಳಿಸಿ. ಆರೋಗ್ಯ ಕ್ಷೇತ್ರದ ಖಾಸಗೀಕರಣ ನಿಲ್ಲಿಸಿ. ಚಿಗಟೇರಿ ಜಿಲ್ಲಾಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಸೇರಿದಂತೆ ಪಿಎಚ್‌ಸಿ ಹಾಗೂ ತಾಲೂಕು ಆಸ್ಪತ್ರೆಗಳ ಗುಣಮಟ್ಟವನ್ನು ಉತ್ತಮಪಡಿಸಲು ಆಗ್ರಹಿಸಿ ಹಾಗೂ ನಗರದಲ್ಲಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಶಾಖೆ ದಾವಣಗೆರೆಯಲ್ಲಿ ನಿರ್ಮಿಸುವುದು, ದಾವಣಗೆರೆಯ ಜಿಲ್ಲಾಸ್ಪತ್ರೆ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ತುರ್ತು ಚಿಕಿತ್ಸಾ ಘಟಕದಲ್ಲಿ ಬೆಡ್ ಹಾಗೂ ವೈದ್ಯರ ಸಂಖ್ಯೆ ಹೆಚ್ಚಿಸುವುದು, ಅವಶ್ಯಕ ಸುಸಜ್ಜಿತ ಕಟ್ಟಡ, ಕೊಠಡಿಗಳು, ಶೌಚಾಲಯಗಳು, ಶುದ್ಧ ಕುಡಿಯುವ ನೀರು, ಮೂಲಭೂತ ಆಧುನಿಕ ಯಂತ್ರೋಪಕರಣಗಳು ಹಾಗೂ ಇತರೆ ಸೌಕರ್ಯಗಳನ್ನು ಒದಗಿಸುವುದು, ನುರಿತ ವೈದ್ಯರು, ದಾದಿಯರು, ಮತ್ತಿತರ ವೈದ್ಯಕೀಯ ಸಿಬ್ಬಂದಿ ಹಾಗೂ ''''''''ಡಿ'''''''' ಗ್ರೂಪ್ ನೌಕರರನ್ನು ಕಾಯಂ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವುದು, ಬಿಪಿಎಲ್ ಕಾರ್ಡ್‌ದಾರರು ಸೇರಿದಂತೆ ಎಲ್ಲ ಜನಸಾಮಾನ್ಯರಿಗೆ ಉಚಿತ ಚೀಟಿ, ಸ್ಕ್ಯಾನಿಂಗ್, ರಕ್ತ ಪರೀಕ್ಷೆ, ಸರ್ಜರಿಗಳಿಗೆ ಅನುಕೂಲ ಮಾಡಿಕೊಡುವುದು, ಜಿಲ್ಲಾಸ್ಪತ್ರೆ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚೀಟಿ ಹಾಗೂ ಹಣ ಪಾವತಿ, ಔಷಧಿ ಕೌಂಟರ್‌ಗಳ ಸಂಖ್ಯೆ ಹೆಚ್ಚಿಸುವುದು, ಆಸ್ಪತ್ರೆ ಔಷಧಾಲಯಗಳಲ್ಲಿ ಉತ್ತಮ ಗುಣಮಟ್ಟದ ಎಲ್ಲ ಅವಶ್ಯಕ ಔಷಧಿಗಳ ಪೂರೈಕೆ ಸೇರಿದಂತೆ ವಿವಿಧ ಹಕ್ಕೊತ್ತಾಯಗಳೊಂದಿಗೆ ಸಹಿ ಸಂಗ್ರಹ ಅಭಿಯಾನ ನಡೆಯಿತು.ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಕೈದಾಳೆ, ಡಾ.ಸುನಿತ್‌ಕುಮಾರ, ಮಂಜುನಾಥ ಕುಕ್ಕವಾಡ, ತಿಪ್ಪೇಸ್ವಾಮಿ, ಮಧು ತೊಗಲೇರಿ, ರಾಜು, ಭಾರತಿ, ಅನಿಲ್ ಪರಶುರಾಮ ಇತರರು ಇದ್ದರು.