ಸಾರಾಂಶ
ತುರ್ವಿಹಾಳ ಪಟ್ಟಣದ ಬಸ್ ನಿಲ್ದಾಣದ ಬಳಿ ಸೆಂಟರ್ ಆಫ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ತಾಲೂಕು ಸಮಿತಿ ವತಿಯಿಂದ ಸಹಿ ಸಂಗ್ರಹ ಆಂದೋಲನ ಹಮ್ಮಿಕೊಳ್ಳಲಾಗಿತ್ತು.
ಕನ್ನಡಪ್ರಭ ವಾರ್ತೆ ತುರ್ವಿಹಾಳಪಟ್ಟಣದ ಬಸ್‌ನಿಲ್ದಾಣದ ಬಳಿ ಸೆಂಟರ್ ಆಫ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ತಾಲೂಕು ಸಮಿತಿ ವತಿಯಿಂದ ಸಹಿ ಸಂಗ್ರಹ ಆಂದೋಲನವನ್ನು ಹಮ್ಮಿಕೊಳ್ಳಲಾಗಿತ್ತು.
ಸಮಿತಿ ತಾಲೂಕ ಮುಖಂಡ ಗೋಪಾಲ ಕೃಷ್ಣ ಅವರು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಹಾಗೂ ಸಿಹಿ ಮಾಡುವ ಮೂಲಕ ಆಂದೋಲನಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಶ್ರಮಜೀವಿಗಳ ಜೀವನಮಟ್ಟ ಸುಧಾರಿಸಿ, ದುಡಿಯುವ ಜನರ ಬದುಕನ್ನು ರಕ್ಷಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಈ ಆಂದೋಲನ ನಡೆಸುತ್ತಿರುವುದಾಗಿ ತಿಳಿಸಿದರು.ತಾಲೂಕ ಸಂಚಾಲಕರಾದ ಅನ್ವರ್ ಪಾಷಾ ಮಾತನಾಡಿ, ಶಿಕ್ಷಣ, ಆರೋಗ್ಯ, ವಿದ್ಯುತ್ ಮುಂತಾದ ಮೂಲಭೂತ ಸೌಕರ್ಯ ಕಲ್ಪಿಸಿ, ಶಿಕ್ಷಣ, ಆರೋಗ್ಯ ಸೇರಿದಂತೆ ಅತ್ಯಾವಶ್ಯಕ ಸೇವೆಗಳ ಗ್ರಾಮೀಣ ಭಾಗದ ಯುವ ಜನರಿಗೆ, ಕೃಷಿ ಕೂಲಿ ಕಾರ್ಮಿಕರಿಗೆ ದೊರೆಯಬೇಕಾಗಿದೆ ಎಂದು ಹೇಳಿದರು.
ಹಾಗೂ ದೇವೇಂದ್ರ ಗೌಡ ಮಾತನಾಡಿ, ದೇಶದಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ದುಡಿಯುವ ಜನರ ಬದುಕು ದುಸ್ತರವಾಗಿದೆ. ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ಶ್ರಮಿಕರಿಗೆ ಕೆಲಸಕ್ಕೆ ತಕ್ಕಂತೆ ವೇತನ ನೀಡುತ್ತಿಲ್ಲ. ಇದರಿಂದ ಉತ್ತಮ ಬದುಕು ಕಟ್ಟಿಕೊಳ್ಳಲು ಆಗುತ್ತಿಲ್ಲ. ಸರ್ಕಾರಗಳ ಅವೈಜ್ಞಾನಿಕ ನೀತಿಗಳಿಂದಾಗಿ ಬಡ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಜನರ ಘನತೆಯ ಬದುಕು ಖಾತ್ರಿಗೊಳಿಸಬೇಕೆಂದು ಆಗ್ರಹಿಸಿದರು.ಈ ಕಾರ್ಯಕ್ರಮದಲ್ಲಿ ಹನುಮಂತಯ್ಯ ಕೆಂಗಲ್ ಮರಿಸ್ವಾಮಿ ಹತ್ತಿಗುಡ್ಡ,ಶಿವಪುತ್ರಪ್ಪ ಕೆಂಗೇರಿ, ಮುನಿಸ್ವಾಮಿ ಕಟ್ಟಿಮನಿ, ಹೋನ್ನುರಪ್ಪ ಕುಂಬಾರ, ಪಾಮೇಶ್, ಮಲ್ಲಯ್ಯ ನಾಯಕ, ಮಲ್ಲು ಭಂಗಿ, ಇನಿತರರು ಇದ್ದರು.